Plane Crash: ತೆಲಂಗಾಣದ ಮೆದಕ್ ಬಳಿ ಲಘು ವಿಮಾನ ಪತನ, ಓರ್ವ ಸಾವು

ಲಘು ವಿಮಾನವೊಂದು ಪತನಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೆದಕ್​ನ ತೂಪ್ರಾನ್ ಬಳಿ ವಿಮಾನ ಪತನಗೊಂಡಿದೆ, ತರಬೇತಿ ನಿರತ ವಿಮಾನದಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದ ಕುರಿತು ಮಾಹಿತಿ ಲಭ್ಯವಾಗಿದೆ. ವಿಮಾನ ಪತನದ ವೇಳೆ ಓರ್ವ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ದುಂಡಿಗಲ್​​ ಏರ್​​ಪೋರ್ಟ್​ಗೆ ಸೇರಿದ ತರಬೇತಿ ನಿರತ ವಿಮಾನ ಇದಾಗಿದೆ.

Plane Crash: ತೆಲಂಗಾಣದ ಮೆದಕ್ ಬಳಿ ಲಘು ವಿಮಾನ ಪತನ, ಓರ್ವ ಸಾವು
Image Credit source: Hindustan Times

Updated on: Dec 04, 2023 | 12:35 PM

ಲಘು ವಿಮಾನವೊಂದು ಪತನಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೆದಕ್​ನ ತೂಪ್ರಾನ್ ಬಳಿ ವಿಮಾನ ಪತನಗೊಂಡಿದೆ, ತರಬೇತಿ ನಿರತ ವಿಮಾನದಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದ ಕುರಿತು ಮಾಹಿತಿ ಲಭ್ಯವಾಗಿದೆ. ವಿಮಾನ ಪತನದ ವೇಳೆ ಓರ್ವ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ದುಂಡಿಗಲ್​​ ಏರ್​​ಪೋರ್ಟ್​ಗೆ ಸೇರಿದ ತರಬೇತಿ ನಿರತ ವಿಮಾನ ಇದಾಗಿದೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ, ವಿಮಾನ ಪತನಗೊಂಡಾಗ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ವಾಯುಪಡೆದ ತರಬೇತಿ ವಿಮಾನ ಇದಾಗಿದ್ದು, ಇಬ್ಬರು ಪೈಲಟ್​ಗಳು ಸಾವನ್ನಪ್ಪಿದ್ದಾರೆ. ವಿಮಾನವು ತರಬೇತಿಗಾಗಿ ಹೈದರಾಬಾದ್‌ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (ಎಎಫ್‌ಎ) ಹೊರಟಿತ್ತು ಎಂದು ವಾಯುಪಡೆ ತಿಳಿಸಿದೆ. ವಿಮಾನ ಪತನಗೊಂಡಾಗ ಒಬ್ಬ ತರಬೇತುದಾರ ಮತ್ತು ತರಬೇತಿ ಪೈಲಟ್ ವಿಮಾನದೊಳಗೆ ಇದ್ದರು ಮತ್ತು ಇಬ್ಬರೂ ಸಾವನ್ನಪ್ಪಿದ್ದಾರೆ.

 

 

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:08 am, Mon, 4 December 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us