ಛತ್ತೀಸ್‌ಗಢದ ಬೆಮೆತಾರಾದ ಕಾರ್ಖಾನೆಯಲ್ಲಿ ಸ್ಫೋಟ; ಒಬ್ಬರು ಸಾವು, 6 ಮಂದಿಗೆ ಗಾಯ

|

Updated on: May 25, 2024 | 9:12 PM

ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯ ಸ್ಫೋಟಕಗಳ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ, 6 ಮಂದಿ ಗಾಯಗೊಂಡಿದ್ದಾರೆ. ಬೆರ್ಲಾ ಡೆವಲಪ್‌ಮೆಂಟ್ ಬ್ಲಾಕ್‌ನ ಪಿರ್ದಾ ಗ್ರಾಮದ ಬಳಿ ಇರುವ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಛತ್ತೀಸ್‌ಗಢದ ಬೆಮೆತಾರಾದ ಕಾರ್ಖಾನೆಯಲ್ಲಿ ಸ್ಫೋಟ; ಒಬ್ಬರು ಸಾವು, 6 ಮಂದಿಗೆ ಗಾಯ
ಛತ್ತೀಸ್‌ಗಢದ ಬೆಮೆತಾರಾ ಕಾರ್ಖಾನೆಯಲ್ಲಿ ಸ್ಫೋಟ
Follow us on

ರಾಯ್‌ಪುರ: ಛತ್ತೀಸ್‌ಗಢದ (Chhattisgarh) ಬೆಮೆತಾರಾ ಜಿಲ್ಲೆಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಇಂದು (ಶನಿವಾರ) ಸಂಭವಿಸಿದ ಸ್ಫೋಟದಲ್ಲಿ (Blast) ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 6 ಮಂದಿ ಗಾಯಗೊಂಡಿದ್ದಾರೆ. ಬೆರ್ಲಾ ಡೆವಲಪ್‌ಮೆಂಟ್ ಬ್ಲಾಕ್‌ನ ಪಿರ್ದಾ ಗ್ರಾಮದ ಬಳಿ ಇರುವ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಬೆಮೆತಾರಾ ಕಲೆಕ್ಟರ್ ರಣಬೀರ್ ಶರ್ಮಾ ತಿಳಿಸಿದ್ದಾರೆ.

ಈ ಘಟನೆಯ ನಂತರ ಪೊಲೀಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದವು. ಸದ್ಯಕ್ಕೆ ಈ ಘಟಕದ ನೌಕರರನ್ನು ಸ್ಥಳಾಂತರಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಗ್ನಿಶಾಮಕ ದಳದ ತಂಡಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರಾಮೇಶ್ವರಂ‌ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: 5ನೇ ಆರೋಪಿ ಬಂಧನ

ಗಾಯಾಳುಗಳನ್ನು ರಾಯ್‌ಪುರದ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸ್ಫೋಟದಲ್ಲಿ ಗಾಯಗೊಂಡ 6 ಜನರನ್ನು ಚಿಕಿತ್ಸೆಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ರಾಯ್ಪುರಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಓರ್ವ ವ್ಯಕ್ತಿ ಸತ್ತಿದ್ದಾರೆ ಎಂದು ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶುಭ್ರಾ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಥಾಣೆಯ ಕೆಮಿಕಲ್ ಫ್ಯಾಕ್ಟರಿ ಸ್ಫೋಟ; ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಇನ್ನಷ್ಟು ಶವಗಳಿಗಾಗಿ ಹುಡುಕಾಟ

ಈ ಸ್ಫೋಟ ಸಂಭವಿಸಿದಾಗ ಕನಿಷ್ಠ 100 ಮಂದಿ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಹಲವಾರು ಜನರು ನಾಪತ್ತೆಯಾಗಿದ್ದಾರೆ ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಭಯವಿದೆ. ವಿಷಯ ತಿಳಿದ ಕೂಡಲೇ ಎಚ್ಚೆತ್ತ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ್ದರು. 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದಾದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ