ಜಮ್ಮು ಕಾಶ್ಮೀರದ ಬಂಡಿಪೊರಾದಲ್ಲಿ ಗ್ರೆನೇಡ್ ದಾಳಿ; ಪೊಲೀಸ್ ಸಾವು, ನಾಲ್ವರು ಭದ್ರತಾ ಸಿಬ್ಬಂದಿಗೆ ಗಾಯ

| Updated By: ಸುಷ್ಮಾ ಚಕ್ರೆ

Updated on: Feb 11, 2022 | 7:33 PM

ಇಂದು ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ಮಾಡಿದ್ದರಿಂದ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಜಮ್ಮು ಕಾಶ್ಮೀರದ ಬಂಡಿಪೊರಾದಲ್ಲಿ ಗ್ರೆನೇಡ್ ದಾಳಿ; ಪೊಲೀಸ್ ಸಾವು, ನಾಲ್ವರು ಭದ್ರತಾ ಸಿಬ್ಬಂದಿಗೆ ಗಾಯ
ಸಾಂದರ್ಭಿಕ ಚಿತ್ರ
Follow us on

ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೊರಾದಲ್ಲಿ ಭದ್ರತಾ ಪಡೆಗಳ ಜಂಟಿ ತಂಡದ ಮೇಲೆ ಭಯೋತ್ಪಾದಕರು (Terrorists) ಗ್ರೆನೇಡ್‌ನಿಂದ ದಾಳಿ ನಡೆಸಿದ್ದಾರೆ. ಇಂದು ನಡೆದ ಉಗ್ರರ ದಾಳಿಯಲ್ಲಿ ಓರ್ವ ಪೊಲೀಸ್ ಸಾವನ್ನಪ್ಪಿದ್ದು, ನಾಲ್ವರು ಭದ್ರತಾ ಸಿಬ್ಬಂದಿ (BSF) ಗಾಯಗೊಂಡಿದ್ದಾರೆ. ನಾಕಾ ಪಾರ್ಟಿಯ ವೇಳೆ ನಿಶಾತ್ ಪಾರ್ಕ್ ಬಳಿ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದು ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ಮಾಡಿದ್ದರಿಂದ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಹಾಗೂ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಎಲ್ಲ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸರು ಮತ್ತು ಕೇಂದ್ರೀಯ ಮೀಸಲು ಅರೆಸೇನಾ ಪಡೆಗಳ (ಸಿಆರ್‌ಪಿಎಫ್) ಜಂಟಿ ತಂಡದ ಮೇಲೆ ದಾಳಿ ನಡೆಸಲಾಯಿತು. ಗಾಯಗೊಂಡವರಲ್ಲಿ ಸಿಆರ್‌ಪಿಎಫ್‌ನ ಇಬ್ಬರು ಯೋಧರೂ ಸೇರಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

(ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿ)

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆಯ ಫೋಟೊ ಹಂಚಿಕೊಂಡ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಅಮೆರಿಕ ಮಿಲಿಟರಿ ಪಡೆಗಳು ಬುಧವಾರ ರಾತ್ರಿ ನಡೆಸಿದ ದಾಳಿಯಲ್ಲಿ ಐಸಿಸ್ ಉಗ್ರನ ಕತೆ ಕೊನೆಗೊಂಡಿದೆ: ಜೋ ಬೈಡೆನ್

Published On - 6:18 pm, Fri, 11 February 22