ಹೃಷಿಕೇಶ-ಬದ್ರಿನಾಥ್ ಹೆದ್ದಾರಿಯಲ್ಲಿ ಟೆಂಪೋ ಕಣಿವೆಗೆ ಬಿದ್ದು 10 ಮಂದಿ ಸಾವು

|

Updated on: Jun 15, 2024 | 3:26 PM

ಉತ್ತರಾಖಂಡದ ರುದ್ರಪ್ರಯಾಗದ ಬದರಿನಾಥ್ ಹೆದ್ದಾರಿ ಬಳಿ 23 ಮಂದಿ ಪ್ರಯಾಣಿಕರಿದ್ದ ಟೆಂಪೋ ಟ್ರಾವೆಲರ್ ಕಂದಕಕ್ಕೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ.

ಹೃಷಿಕೇಶ-ಬದ್ರಿನಾಥ್ ಹೆದ್ದಾರಿಯಲ್ಲಿ ಟೆಂಪೋ ಕಣಿವೆಗೆ ಬಿದ್ದು 10 ಮಂದಿ ಸಾವು
ಹೃಷಿಕೇಶ-ಬದ್ರಿನಾಥ್ ಹೆದ್ದಾರಿಯಲ್ಲಿ ಟೆಂಪೋ ಕಂದಕಕ್ಕೆ ಬಿದ್ದು 10 ಮಂದಿ ಸಾವು
Follow us on

ರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗದ ಹೃಷಿಕೇಶ-ಬದರಿನಾಥ್ ಹೆದ್ದಾರಿಯಲ್ಲಿ (Rishikesh-Badrinath highway) ಇಂದು (ಶನಿವಾರ) 23 ಪ್ರಯಾಣಿಕರಿದ್ದ ಟೆಂಪೋ ಟ್ರಾವೆಲರ್ ಆಳವಾದ ಕಮರಿಗೆ ಬಿದ್ದ ಪರಿಣಾಮ ಸುಮಾರು 10 ಜನರು ಸಾವನ್ನಪ್ಪಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಪೊಲೀಸ್ ತಂಡಗಳು ರಕ್ಷಣಾ ಕಾರ್ಯವನ್ನು ನಡೆಸುತ್ತಿವೆ ಎಂದು ಎಎನ್‌ಐ ವರದಿ ಮಾಡಿದೆ. ಇಲ್ಲಿಯವರೆಗೆ, ಇಬ್ಬರು ಗಾಯಗೊಂಡವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಘಟನೆಯ ಕುರಿತು ಪ್ರತಿಕ್ರಿಯಿಸಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರುದ್ರಪ್ರಯಾಗ ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಅಪಘಾತದ ಬಗ್ಗೆ ಬಹಳ ದುಃಖದ ಸುದ್ದಿ ಬಂದಿದೆ. ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಕೇಂದ್ರಕ್ಕೆ ಕಳುಹಿಸಲಾಗಿದೆ. ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಢದ ಅಬುಜ್ಮಾರ್‌ನಲ್ಲಿ ಎನ್‌ಕೌಂಟರ್‌; 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಸಾವು

ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ಅಪಾರ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಕೇದಾರ ಬಾಬಾನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪುಷ್ಕರ್ ಸಿಂಗ್ ಧಾಮಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ