Road Accident: ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ, 10 ಮಂದಿ ದುರ್ಮರಣ

ರಾಮನವಮಿ ದಿನದಂದೇ ಗುಜರಾತ್‌ನ ಅಹಮದಾಬಾದ್‌ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಅಹಮದಾಬಾದ್‌-ವಡೋದರ ಎಕ್ಸ್‌ಪ್ರೆಸ್‌ ವೇನಲ್ಲಿ ಕೆಟ್ಟು ನಿಂತಿದ್ದ ಟ್ಯಾಂಕರ್​ಗೆ ಕಾರು ವೇಗವಾಗಿ ಹೋಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.

Road Accident: ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ, 10 ಮಂದಿ ದುರ್ಮರಣ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 17, 2024 | 7:01 PM

ಅಹಮದಾಬಾದ್‌, (ಏಪ್ರಿಲ್ 17): ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ (Road Accident)ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲಾ 10 ಮಂದಿಯೂ ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಗುಜರಾತ್‌ನ( Gujarat)  ಅಹಮದಾಬಾದ್‌ ಬಳಿ ನಡೆದಿದೆ. ಇಂದು (ಏಪ್ರಿಲ್ 17) ಸಂಜೆ ಅಹಮದಾಬಾದ್‌-ವಡೋದರ ಎಕ್ಸ್‌ಪ್ರೆಸ್‌ ವೇನಲ್ಲಿ (Ahmedabad-Vadodara Expressway) ಈ ದುರ್ಘಟನೆ ಸಂಭವಿಸಿದ್ದು, ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಇನ್ನು ವಿಷಯ ತಿಳಿಯಿತ್ತಿದ್ದಂತೆಯೇ ಪೊಲೀಸರು ಹಾಗೂ ಖೇಡಾ ಜಿಲ್ಲೆಯ ಎಸ್ಪಿ ಘಟನಾ ಸ್ಥಳಕ್ಕೆ  ದೌಡಾಯಿಸಿದ್ದು,  ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಕುಟುಂಬದವರು ಹಾಗೂ ಸ್ನೇಹಿತರೊಂದಿಗೆ ವಡೋದರದಿಂದ ಅಹಮದಾಬಾದ್‌ ಕಡೆಗೆ ಹೊರಟಿದ್ದ ಕಾರು ನದಿಯಾಡ್‌ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟಾಂಕರ್‌ನ ಹಿಂಬದಿಗೆ ಹೋಗಿ  ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಒಟ್ಟು 10 ಜನರ ಪೈಕಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನುಳಿದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ ಎಂದು ಖೇಡಾ ಜಿಲ್ಲಾ ಎಸ್ಪಿ ರಾಜೇಶ್‌ ಗಾಧ್ವಿ ತಿಳಿಸಿದ್ದಾರೆ.

ಕಾರಿನಲ್ಲಿ ಸಿಲುಕಿಕೊಂಡಿದ್ದ ಶವಗಳನ್ನ ಸ್ಥಳೀಯರ ಸಹಕಾರದಿಂದ ಜಿಲ್ಲಾಡಳಿತದ ಅಧಿಕಾರಿಗಳು ಹೊರ ತೆಗೆದಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ವಿವರವನ್ನು ಪಡೆಯಲಾಗುತ್ತಿದ್ದು, ಅವರ ಕುಟುಂಬದವರಿಗೂ ಮಾಹಿತಿ ನೀಡುವ ಕೆಲಸ ನಡೆದಿದೆ. ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಲು ತಂಡಗಳನ್ನು ರಚಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ