AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ

ಗುಜರಾತ್​​ನಲ್ಲಿ ನಿನ್ನೆಯಿಂದ ಒಂದೇ ಸಮನೆ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಗುಜರಾತ್​ ಮತ್ತು ಸೌರಾಷ್ಟ್ರಗಳ ಸುಮಾರು 108 ತಾಲೂಕುಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ.

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 02, 2021 | 9:48 AM

Share

ಗುಜರಾತ್​​ನ ಗಿರ್​ ಸೋಮನಾಥ್​ ಜಿಲ್ಲೆಯಲ್ಲಿ ದೋಣಿಗಳು ಮಗುಚಿದ ಪರಿಣಾಮ  10 ಮೀನುಗಾರರು ಕಾಣೆಯಾಗಿದ್ದಾರೆ. ಮೂಲಗಳ ಪ್ರಕಾರ ಸುಮಾರು 10-12 ದೋಣಿಗಳು ಮಗುಚಿವೆ. ಅತಿಯಾದ ಗಾಳಿ ಮತ್ತು ಮಳೆಯೇ ಇದಕ್ಕೆ ಕಾರಣ ಎನ್ನಲಾಗಿದೆ. ಕಾಣೆಯಾದ ಮೀನುಗಾರರನ್ನು ಹುಡುಕಲಾಗುತ್ತಿದೆ.

ಗುಜರಾತ್​​ನಲ್ಲಿ ನಿನ್ನೆಯಿಂದ ಒಂದೇ ಸಮನೆ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಗುಜರಾತ್​ ಮತ್ತು ಸೌರಾಷ್ಟ್ರಗಳ ಸುಮಾರು 108 ತಾಲೂಕುಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ. ಸೂರತ್​, ಡಾಂಗ್​, ನವ್​ಸರಿ, ವಾಲ್ಸಾದ್​ಗಳಲ್ಲಿ ಗುರುವಾರ ಮತ್ತು ದಾಹೋಡ್​, ಮಹಿಸಾಗರ್​, ಛೋಟಾ, ಉದೇಪುರ, ನರ್ಮದಾ ಜಿಲ್ಲೆಗಳಲ್ಲಿ ನಾಳೆ (ಶುಕ್ರವಾರ) ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ಗುಜರಾತ್​ನಲ್ಲಿ ಡಿ.1 ಮತ್ತು 2ರಂದು ಭಾರಿ ಮಳೆ ಬೀಳುವ ಎಚ್ಚರಿಕೆ ನೀಡಿದ್ದ ಐಎಂಡಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹೇಳಿತ್ತು.

ಈ ಅಕಾಲಿಕವಾಗಿ ಒಂದೇ ಸಮ ಸುರಿಯುತ್ತಿರುವ ಮಳೆಯಿಂದಾಗಿ ತಾಪಮಾನ ತೀವ್ರತರವಾಗಿ ಕುಸಿದಿದೆ.  ಬುಧವಾರ ಸಂಜೆಯ ಹೊತ್ತಿಗೆ ಸೂರತ್​​ನ ಉಮೇರ್​​ಪಡಾ ದಲ್ಲಿ ಅತಿ ಹೆಚ್ಚು ಅಂದರೆ 31 ಎಂಎಂ ಮಳೆಯಾಗಿದೆ. ಅದಾದ ಬಳಿಕ ಅಮ್ರೇಲಿಯ ಖಂಬಾ ಮತ್ತು ಗಿರ್​ ಸೋಮನಾಥ್​ದ ಉನಾದಲ್ಲಿ 25 ಎಂಎಂ ಮಳೆ ಬಿದ್ದಿದೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಸ್ಥಾನಕ್ಕಾಗಿ 2ನೇ ಟೆಸ್ಟ್​ನಿಂದ ಹೊರಗುಳಿಯಲಿದ್ದಾರೆ ಈ ಸ್ಟಾರ್ ಬ್ಯಾಟರ್: ಯಾರು ಗೊತ್ತಾ?

Published On - 9:40 am, Thu, 2 December 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ