Tamil Nadu: ತಮಿಳುನಾಡಿನ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ, 10 ಮಂದಿ ಸಾವು

blast in fire cracker: ತಮಿಳುನಾಡಿನ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಅನೇಕರಿಗೆ ಗಾಯಗಳಾಗಿವೆ, ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ವಿರುದುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೇವನಪಟ್ಟಿಯಲ್ಲಿರುವ ಪಟಾಕಿ ಘಟಕದ ವಿನ್ನರ್‌ನಲ್ಲಿ ನಡೆದಿದೆ.

Tamil Nadu: ತಮಿಳುನಾಡಿನ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ, 10 ಮಂದಿ ಸಾವು

Updated on: Feb 17, 2024 | 3:27 PM

ವಿರುದುನಗರ, ಫೆ.17: ತಮಿಳುನಾಡಿನ (Tamil Nadu) ವಿರುದುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೇವನಪಟ್ಟಿಯಲ್ಲಿರುವ ಪಟಾಕಿ ಘಟಕದ ವಿನ್ನರ್‌ನಲ್ಲಿ ಇಂದು (ಫೆ.17) ಹಠಾತ್ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದ ಕಾರ್ಮಿಕರನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟಕವನ್ನು ವಿಜಯ್ ಒಡೆತನದ ಖಾಸಗಿ ಪಟಾಕಿ ಕಾರ್ಖಾನೆ ಎಂದು ಹೇಳಲಾಗಿದೆ.

ಇದರ ಒಳಗೆ ಸಿಕ್ಕಿಕೊಂಡಿರುವ ಕಾರ್ಮಿಕರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸ್ಫೋಟದ ಬಳಿಕ ಹೊತ್ತಿ ಉರಿಯುತ್ತಿರುವ ಪಟಾಕಿ ತಯಾರಿಕಾ ಕಾರ್ಖಾನೆ ಬೆಂಕಿ ನಂದಿಸಲು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದಾರೆ. ಸ್ಫೋಟದ ನಂತರ ಸುಮಾರು 3 ಕಟ್ಟಡಗಳು ನೆಲಸಮವಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸ್ಫೋಟಕ್ಕೆ ಕಾರಣ ಏನು? ಎಂಬ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ.

ಇದನ್ನೂ ಓದಿ: ವಾಹನದಿಂದ ಪಟಾಕಿ ಇಳಿಸುವಾಗ ಸ್ಫೋಟ, ಓರ್ವ ಸಾವು, ಹಲವು ಜನರಿಗೆ ಗಾಯ

ವಿಡಿಯೋ ಇಲ್ಲಿದೆ ನೋಡಿ

ಬುಂದೇಲ್​ಖಂಡ್ ಗೌರವ ಮಹೋತ್ಸವದ ವೇಳೆ ಪಟಾಕಿ ಸ್ಫೋಟ, 4 ಮಂದಿ ಸಾವು

ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಪಟಾಕಿ ಸ್ಫೋಟಗೊಂಡ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಬುಂದೇಲ್‌ಖಂಡ್ ಗೌರವ್ ಮಹೋತ್ಸವ ಎಂದು ಕರೆಯಲ್ಪಡುವ ಎರಡು ದಿನಗಳ ಸಾಂಸ್ಕೃತಿಕ ಉತ್ಸವವನ್ನು ನಡೆಸುತ್ತಿದ್ದ ಚಿತ್ರಕೂಟ ಇಂಟರ್ ಕಾಲೇಜಿನಲ್ಲಿ ಈ ದುರಂತ ಘಟನೆ ಸಂಭವಿಸಿದೆ.

ಇನ್ನು ಈ ಘಟನೆಯ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲು ಸೂಚನೆ ನೀಡಿದ್ದಾರೆ. ಚಿತ್ರಕೂಟ ಇಂಟರ್ ಕಾಲೇಜಿನ ಮೈದಾನದಲ್ಲಿ ಪ್ರವಾಸೋದ್ಯಮ ಇಲಾಖೆಯು ಆಯೋಜಿಸಿರುವ ಎರಡು ದಿನಗಳ ಬುಂದೇಲ್‌ಖಂಡ ಗೌರವ ಮಹೋತ್ಸವದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬುಧವಾರ ಸಂಜೆ ಪಟಾಕಿ ಪ್ರದರ್ಶನ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿತ್ತು ಮತ್ತು ಪಟಾಕಿಗಳನ್ನು ವೇದಿಕೆಯ ಹಿಂದೆ ಇಡಲಾಗಿತ್ತು ಎಂದು ಹೇಳಿದ್ದಾರೆ.

ಮಧ್ಯಾಹ್ನ 3.15 ರ ಸುಮಾರಿಗೆ ಇದ್ದಕ್ಕಿದ್ದಂತೆ ಪಟಾಕಿಗಳು ಸ್ಫೋಟಗೊಂಡವು ಮತ್ತು ಅಕ್ಕಪಕ್ಕದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಇಬ್ಬರಿಗೆ ಗಂಭೀರವಾದ ಸುಟ್ಟ ಗಾಯಗಳಾಗಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:56 pm, Sat, 17 February 24