AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Road Accident: ಗುಜರಾತ್​​ ಭೀಕರ ಅಪಘಾತ; ಮಕ್ಕಳು ಸೇರಿ ಒಂದೇ ಕುಟುಂಬದ 10 ಮಂದಿ ದುರ್ಮರಣ

ಆನಂದ್​ ಜಿಲ್ಲೆಯ ತಾರಾಪುರವನ್ನು ಅಹ್ಮದಾಬಾದ್​ ಜಿಲ್ಲೆಯ ವಾಟಾಮನ್​ ನಗರಕ್ಕೆ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, ತಾರಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gujarat Road Accident: ಗುಜರಾತ್​​ ಭೀಕರ ಅಪಘಾತ; ಮಕ್ಕಳು ಸೇರಿ ಒಂದೇ ಕುಟುಂಬದ 10 ಮಂದಿ ದುರ್ಮರಣ
ಪ್ರಾತಿನಿಧಿಕ ಚಿತ್ರ
TV9 Web
| Updated By: Digi Tech Desk|

Updated on:Jun 16, 2021 | 11:49 AM

Share

ಕಾರಿಗೆ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 10 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಬುಧವಾರ ಮುಂಜಾನೆ, ಗುಜರಾತ್​​ನ ಆನಂದ್​ ಜಿಲ್ಲೆಯ ಇಂದ್ರನಾಜ್​ ಗ್ರಾಮದ ಸಮೀಪ ದುರ್ಘಟನೆ ನಡೆದಿದೆ. ಕಾರು ಮತ್ತು ಟ್ರಕ್​ ಮುಖಾಮುಖಿಯಾಗಿ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂದ್​ ಜಿಲ್ಲೆಯ ತಾರಾಪುರವನ್ನು ಅಹ್ಮದಾಬಾದ್​ ಜಿಲ್ಲೆಯ ವಾಟಾಮನ್​ ನಗರಕ್ಕೆ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, ತಾರಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿ ಒಂದೇ ಕುಟುಂಬದ 10 ಮಂದಿ ಪ್ರಯಾಣ ಮಾಡುತ್ತಿದ್ದರು. ಇದರಲ್ಲಿ ಮಕ್ಕಳೂ ಇದ್ದರು. ವೇಗವಾಗಿ ಬಂದ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾರು ವಾಟಾಮನ್​​ಗೆ ಹೋಗುತ್ತಿತ್ತು..ಟ್ರಕ್​ ವಾಟಾಮನ್​ ಕಡೆಯಿಂದ ಬರುತ್ತಿತ್ತು. ಕಾರು ನುಜ್ಜುಗುಜ್ಜಾಗಿದೆ. ಅದರಿಂದ ಶವ ಹೊರತೆಗೆಯುವುದೇ ಸವಾಲಿನ ಕೆಲಸವಾಗಿತ್ತು. ಹಾಗೇ, ಮೃತರ ಗುರುತು ಪತ್ತೆಹಚ್ಚುವ ಕೆಲಸವೂ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Mouth Ulcers: ಬಾಯಿ ಹುಣ್ಣಿನಿಂದ ಬಳಲುತ್ತಿದ್ದೀರಾ? ಈ ಸರಳ ವಿಧಾನವನ್ನು ಅನುಸರಿಸಿ ನೋವಿನಿಂದ ಮುಕ್ತಿ ಪಡೆಯಿರಿ

Published On - 11:11 am, Wed, 16 June 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ