ಮಹಾರಾಷ್ಟ್ರದಲ್ಲಿ 10 ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ಸೋಂಕು; ಹೀಗೆ ಆದರೆ ಕಠಿಣ ನಿರ್ಬಂಧ ಎಂದ ಡಿಸಿಎಂ ಅಜಿತ್ ಪವಾರ್​

ಶುಕ್ರವಾರ, ಮಹಾರಾಷ್ಟ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಯಶೋಮತಿ ಠಾಕೂರ್​ ತಮಗೆ ಕೊವಿಡ್​ 19ಸೋಂಕು ತಗುಲಿದ್ದು, ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದರು.

ಮಹಾರಾಷ್ಟ್ರದಲ್ಲಿ 10 ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ಸೋಂಕು; ಹೀಗೆ ಆದರೆ ಕಠಿಣ ನಿರ್ಬಂಧ ಎಂದ ಡಿಸಿಎಂ ಅಜಿತ್ ಪವಾರ್​
ಅಜಿತ್ ಪವಾರ್​
Follow us
TV9 Web
| Updated By: Lakshmi Hegde

Updated on:Jan 01, 2022 | 12:54 PM

ಮಹಾರಾಷ್ಟ್ರದಲ್ಲಿ ಕೊವಿಡ್ 19 (Covid 19) ಪ್ರಸರಣ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಸದ್ಯ ರಾಜ್ಯಾದ್ಯಂತ ಒಟ್ಟು 10 ಸಚಿವರು ಮತ್ತು 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ತಗುಲಿದೆ ಎಂದು ಮಹಾ ಉಪಮುಖ್ಯಮಂತ್ರಿ ಅಜಿತ್​ ಪವಾರ್ (DCM Ajit Pawar) ಇಂದು ತಿಳಿಸಿದ್ದಾರೆ.  ರಾಜ್ಯದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕಠಿಣ ನಿರ್ಬಂಧ ವಿಧಿಸಲಾಗುವುದಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,  ಕೊರೊನಾ ಸೋಂಕಿತರ ಸಂಖ್ಯೆ ಹೀಗೆ ಏರಿಕೆಯಾಗುತ್ತಲೇ ಹೋದರೆ ಕಠಿಣ ನಿರ್ಬಂಧ ವಿಧಿಸುವುದು ಅನಿವಾರ್ಯವಾಗುತ್ತದೆ. ಹಾಗೆ, ಮಾಡಬಾರದು ಎಂದಾದರೆ ಜನರು ಕೊವಿಡ್ 19 ನಿಯಂತ್ರಣ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಬೇಕು ಎಂದು ಅವರು ಹೇಳಿದ್ದಾರೆ.  ಇನ್ನು ಮಹಾರಾಷ್ಟ್ರದಲ್ಲಿ ಕಳೆದ 11-12 ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮಹಾರಾಷ್ಟ್ರ ಸಚಿವ ವಿಜಯ್​ ವಡೆತ್ತಿವಾರ್ ಕೂಡ, ಮತ್ತೆ ಲಾಕ್​ಡೌನ್​ ಹೇರಬಹುದು ಎಂಬ ಸೂಚನೆ ನೀಡಿದ್ದಾರೆ.  

ಏರಿಕೆಯಾಗುತ್ತಿರುವ ಕೊರೊನಾ ಸೋಂಕಿನ ಪ್ರಮಾಣ ಮತ್ತು ಹೊಸವರ್ಷ ಸಮೀಪಿಸುತ್ತಿದ್ದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಡಿಸೆಂಬರ್​ 30ರಂದೇ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಅದರ ಅನ್ವಯ ರಾಜ್ಯದಲ್ಲಿ  ಸಾಮಾಜಿಕ, ರಾಜಕೀಯ, ಧಾರ್ಮಿಕ ಸಮಾರಂಭ ನಡೆಸಿದರೂ 50 ಜನ ಮಾತ್ರ ಸೇರಬಹುದು. ಅಂತ್ಯಸಂಸ್ಕಾರದಲ್ಲಿ ಗರಿಷ್ಠ 20 ಜನ ಪಾಲ್ಗೊಳ್ಳಬಹುದು. ಮುಂಬೈನಲ್ಲಿ ಜನವರಿ 7ರವರೆಗೂ ಸೆಕ್ಷನ್​ 144 ಜಾರಿಯಿರಲಿದೆ.  ಮಹಾರಾಷ್ಟ್ರದಲ್ಲಿ ಶುಕ್ರವಾರ 8067 ಹೊಸ ಕೊವಿಡ್​ 19 ಕೇಸ್​ಗಳು ದಾಖಲಾಗಿವೆ. ಅದರಲ್ಲಿ ಮುಂಬೈನಲ್ಲೇ 5428 ಅಂದರೆ ಶೇ.67.2ರಷ್ಟು ಕೇಸ್​ಗಳು ದಾಖಲಾಗಿವೆ. 454 ಒಮಿಕ್ರಾನ್ ಸೋಂಕಿತರು ಇದ್ದಾರೆ.

ಶುಕ್ರವಾರ, ಮಹಾರಾಷ್ಟ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಯಶೋಮತಿ ಠಾಕೂರ್​ ತಮಗೆ ಕೊವಿಡ್​ 19ಸೋಂಕು ತಗುಲಿದ್ದು, ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದರು.  ಅಷ್ಟೇ ಅಲ್ಲ, ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊವಿಡ್​ 19 ತಪಾಸಣೆ ಮಾಡಿಸಿಕೊಳ್ಳಿ ಎಂದೂ ಹೇಳಿದ್ದರು. ಅದರೊಂದಿಗೆ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗಿತ್ತಿದೆ. ಹೀಗಾಗಿ ಪ್ರತಿಯೊಬ್ಬರೂ ಮುನ್ನೆಚ್ಚರಿಕಾ ಕ್ರಮಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಹೇಳಿದ್ದರು. ಆದರೆ ಅದರ ಬೆನ್ನಲ್ಲೇ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್​ ಪವಾರ್​, ಇದೀಗ 10ಕ್ಕೂ ಹೆಚ್ಚು ಸಚಿವರು, 20ಕ್ಕೂ ಅಧಿಕ ಶಾಸಕರಿಗೆ ಕೊರೊನಾ ತಗುಲಿದ್ದಾಗಿ ತಿಳಿಸಿದ್ದಾರೆ. ಇದೇ ಕಾರಣಕ್ಕೆ ನಾವು ವಿಧಾನಸಭೆ ಅಧಿವೇಶನವನ್ನು ಅರ್ಧಕ್ಕೇ ನಿಲ್ಲಿಸಿದ್ದಾಗಿ ಹೇಳಿದ್ದಾರೆ.

ಇದನ್ನೂ ಓದಿ: Moto G31: ಹೊಸ ವರ್ಷಕ್ಕೆ ಬಿಗ್ ಶಾಕ್: ಈ ಎರಡು ಸ್ಮಾರ್ಟ್​ಫೋನ್ ಬೆಲೆಯಲ್ಲಿ ಬರೋಬ್ಬರಿ 3000 ರೂ. ಏರಿಕೆ

Published On - 12:47 pm, Sat, 1 January 22

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ