ಮಹಾರಾಷ್ಟ್ರ ಸಿವಿಲ್ ಆಸ್ಪತ್ರೆಯ ಕೊವಿಡ್ ವಾರ್ಡ್ನಲ್ಲಿ ಬೆಂಕಿ; 10 ರೋಗಿಗಳ ದುರ್ಮರಣ
ಉಳಿದ ರೋಗಿಗಳನ್ನು ಸಮೀಪದ ಇನ್ನೊಂದು ಆಸ್ಪತ್ರೆಗೆ ಕೊವಿಡ್ 19 ವಾರ್ಡ್ಗೆ ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಭೋಸ್ಲೆ ಮಾಹಿತಿ ನೀಡಿದ್ದಾರೆ. ಇನ್ನು ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.
ಅಹ್ಮದ್ನಗರ: ಮಹಾರಾಷ್ಟ್ರದ ಅಹ್ಮದ್ನಗರದಲ್ಲಿನ ಸಿವಿಲ್ ಆಸ್ಪತ್ರೆಯ ಐಸಿಯುದಲ್ಲಿ ಬೆಂಕಿ ಹೊತ್ತಿ ಉರಿದು ಸುಮಾರು 10 ರೋಗಿಗಳು ಮೃತಪಟ್ಟ ದುರ್ಘಟನೆ ನಡೆದಿದೆ. ಇನ್ನೊಬ್ಬ ರೋಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಐಸಿಯುದಲ್ಲಿ ಕಾಣಿಸಿಕೊಂಡ ಬೆಂಕಿ ಸುಮಾರು 17 ರೋಗಿಗಳು ಅಡ್ಮಿಟ್ ಆಗಿದ್ದ ಕೊವಿಡ್ 19 ವಾರ್ಡ್ಗೆ ಪಸರಿಸಿದೆ. ಅಲ್ಲಿಂದ 10 ಮಂದಿ ಮೃತಪಟ್ಟಿದ್ದು, ಇನ್ನೊಬ್ಬ ರೋಗಿ ಗಂಭೀರವಾಗಿ ಗಾಯಗೊಂಡಿದ್ದರು.
ಉಳಿದ ರೋಗಿಗಳನ್ನು ಸಮೀಪದ ಇನ್ನೊಂದು ಆಸ್ಪತ್ರೆಗೆ ಕೊವಿಡ್ 19 ವಾರ್ಡ್ಗೆ ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಭೋಸ್ಲೆ ಮಾಹಿತಿ ನೀಡಿದ್ದಾರೆ. ಇನ್ನು ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.ಆದರೆ ಶಾರ್ಟ್ಸರ್ಕ್ಯೂಟ್ನಿಂದಲೇ ಅಗ್ನಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗಿದೆ. ಹಾಗೇ, ಈಗಾಗಲೇ ಬೆಂಕಿಗೆ ಕಾರಣವೇನು ಎಂಬ ಬಗ್ಗೆ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ.
ಇನ್ನು ಅಹ್ಮದ್ನಗರ ವಿಧಾನಸಭಾ ಕ್ಷೇತ್ರದ ಜನಪ್ರತಿನಿಧಿ, ಎನ್ಸಿಪಿ ನಾಯಕ ಸಂಗ್ರಾಮ್ ಜಗ್ತಾಪ್ ಈ ದುರ್ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಪ್ರಕರಣದ ತನಿಖೆಗಾಗಿ ಜಿಲ್ಲಾ ಸಮಿತಿ ರಚನೆ ಮಾಡಬಾರದು. ರಾಜ್ಯ ಸರ್ಕಾರದಿಂದ ಸಮಿತಿ ರಚನೆಯಾಗಬೇಕು ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಈ ಹೊತ್ತಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಹಾಗೇ, ಈ ಘಟನೆ ತುಂಬ ಶಾಕಿಂಗ್ ಮತ್ತು ಮನಸಿಗೆ ತಳಮಳ ನೀಡುತ್ತಿದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಇದೇ ವರ್ಷ ಏಪ್ರಿಲ್ 15ರಂದು ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಇಂಥದ್ದೇ ದುರ್ಘಟನೆ ನಡೆದಿತ್ತು. ಈ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡು ಹಲವು ಕೊವಿಡ್ 19 ರೋಗಿಗಳು ಸಾವನ್ನಪ್ಪಿದ್ದರು.
ಇದನ್ನೂ ಓದಿ: Ravichandran Ashwin: ನ್ಯೂಜಿಲೆಂಡ್ ವಿರುದ್ಧ ಗೆಲ್ಲಲು ಅಫ್ಘಾನಿಸ್ತಾನಕ್ಕೆ ದೊಡ್ಡ ಆಫರ್ ಕೊಟ್ಟ ರವಿಚಂದ್ರನ್ ಅಶ್ವಿನ್: ಏನದು?
ಹಾಸನ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಿಯ ದರ್ಶನಕ್ಕೆ ತೆರೆ
Published On - 2:23 pm, Sat, 6 November 21