AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಕೋಟಿ ಡೋಸ್​ ಲಸಿಕೆ ನೀಡಿಕೆ; ಸರ್ಕಾರ ಭಾಗಶಃ ತನ್ನನ್ನು ತಾನು ಉದ್ಧಾರ ಮಾಡಿಕೊಂಡಿತು ಎಂದ ಶಶಿ ತರೂರ್​

ಕಾಂಗ್ರೆಸ್​ ನಾಯಕ ಪವನ್ ಖೇರಾ ಕೂಡ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.  ಶಶಿ ತರೂರ್​ ಟ್ವೀಟ್​​ಉಲ್ಲೇಖಿಸಿ ಟ್ವೀಟ್​ ಮಾಡಿದ ಅವರು, ಕೊವಿಡ್​ 19ನಿಂದ ಸಂಕಷ್ಟಕ್ಕೀಡಾದ ಕುಟುಂಬಗಳ ಬಳಿ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ.

100 ಕೋಟಿ ಡೋಸ್​ ಲಸಿಕೆ ನೀಡಿಕೆ; ಸರ್ಕಾರ ಭಾಗಶಃ ತನ್ನನ್ನು ತಾನು ಉದ್ಧಾರ ಮಾಡಿಕೊಂಡಿತು ಎಂದ ಶಶಿ ತರೂರ್​
ಶಶಿ ತರೂರ್​
TV9 Web
| Edited By: |

Updated on:Oct 21, 2021 | 5:15 PM

Share

ದೆಹಲಿ: ಕೊವಿಡ್​ 19 ಲಸಿಕೆ ನೀಡಿಕೆ ಅಭಿಯಾನ (Covid 19 Vaccine Drive)ದಲ್ಲಿ ಇಂದು ಭಾರತ ದಾಖಲೆ ನಿರ್ಮಿಸಿದೆ. ಲಸಿಕೆ ಅಭಿಯಾನ ಶುರುವಾದ ಜನವರಿ 16ರಿಂದ ಇಲ್ಲಿಯವರೆಗೆ 100 ಕೋಟಿ ಡೋಸ್​ ಕೊವಿಡ್​ 19 ಲಸಿಕೆ ನೀಡಲಾಗಿದೆ. ಕೇಂದ್ರ ಸರ್ಕಾರ ಈ ಖುಷಿಯಲ್ಲಿ ಇರುವ ಹೊತ್ತಲ್ಲೇ ಕಾಂಗ್ರೆಸ್​ ನಾಯಕ ಶಶಿ ತರೂರ್​ ಟ್ವೀಟ್​ ಮೂಲಕ ಕೊಂಕಾಡಿದ್ದಾರೆ. ಅಂತೂ ಕೇಂದ್ರ ಸರ್ಕಾರ ಈಗ ಭಾಗಶಃ ತನ್ನನ್ನು ತಾನು ಉದ್ಧಾರ ಮಾಡಿಕೊಂಡಿತು ಎಂದು ಹೇಳಿದ್ದಾರೆ. ಕೊವಿಡ್​ 19 ಎರಡನೇ ಅಲೆಯಲ್ಲಿ ಸರ್ಕಾರದ ಅವ್ಯವಸ್ಥೆಯನ್ನು ನೆನಪಿಸಿದ್ದಾರೆ.

ಇಂದು ಟ್ವೀಟ್​ ಮಾಡಿರುವ ಕಾಂಗ್ರೆಸ್ ಸಂಸದ ಶಶಿ ತರೂರ್​,  ಇಂದು ಭಾರತ 100 ಕೋಟಿ ಡೋಸ್​ ಲಸಿಕೆ ನೀಡಿಕೆ ಸಾಧನೆ ಮಾಡಿದ್ದು ನಿಜಕ್ಕೂ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ವಿಚಾರ. ನಾವು ಈ ಕ್ರೆಡಿಟ್​​ನ್ನು ಕೇಂದ್ರ ಸರ್ಕಾರಕ್ಕೆ ಕೊಡೋಣ. ಯಾಕೆಂದರೆ ಕೊವಿಡ್​ 19 ಎರಡನೇ ಅಲೆಯ ಹೊತ್ತಲ್ಲಿ ಅಸಮರ್ಪಕ ನಿರ್ವಹಣೆ ಮತ್ತು ಅದೇ ಹೊತ್ತಲ್ಲಿ ಕೊರೊನಾ ಲಸಿಕೆಯೂ ಸರಿಯಾಗಿ ಸಿಗದಂತೆ ಮಾಡಿದ ನಂತರ ಈಗ ಕೇಂದ್ರ ಸರ್ಕಾರ ಭಾಗಶಃ ತನ್ನನ್ನು ತಾನು ಉದ್ಧಾರ ಮಾಡಿಕೊಂಡಿತು ಎಂದು ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರವನ್ನು ಟೀಕಾತ್ಮಕವಾಗಿಯೇ ಪ್ರಶಂಸಿಸಿದ್ದಾರೆ.

ಈ ಮಧ್ಯೆ ಕಾಂಗ್ರೆಸ್​ ನಾಯಕ ಪವನ್ ಖೇರಾ ಕೂಡ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.  ಶಶಿ ತರೂರ್​ ಟ್ವೀಟ್​​ನ್ನೇ ಉಲ್ಲೇಖಿಸಿ ಟ್ವೀಟ್​ ಮಾಡಿದ ಅವರು,  ಇದೀಗ 100 ಕೋಟಿ ಡೋಸ್​ ಲಸಿಕೆ ನೀಡಿಕೆ ಸಾಧನೆಯ ಮನ್ನಣೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದರೆ, ಕೊವಿಡ್​ 19ನಿಂದ ಈಗಲೂ ಬಳಲುತ್ತಿರುವ, ಸರ್ಕಾರದ ಅಸಮರ್ಪಕ ಆಡಳಿತದಿಂದ ತೊಂದರೆಗೀಡಾದ, ಪ್ರಾಣ ಕಳೆದುಕೊಂಡ ಲಕ್ಷಾಂತರ ಕುಟುಂಬಗಳಿಗೆ ಅವಮಾನ ಮಾಡಿದಂತೆ ಆಗುತ್ತದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ನಾವು ಸರ್ಕಾರಕ್ಕೆ ಕ್ರೆಡಿಟ್​ ಕೊಡುವುದಕ್ಕೂ ಮೊದಲು ಪ್ರಧಾನಿ ಮೋದಿ, ಅಂಥ ಸಂಕಷ್ಟಕ್ಕೀಡಾದ ಕುಟುಂಬಗಳ ಬಳಿ ಕ್ಷಮೆ ಕೇಳಬೇಕು. ಸಾಧನೆಯ ಮನ್ನಣೆ ಏನಿದ್ದರೂ ವಿಜ್ಞಾನಿಗಳು ಮತ್ತು ವೈದ್ಯಕೀಯ ಕ್ಷೇತ್ರದ ಸಿಬ್ಬಂದಿಗೆ ಸಲ್ಲಬೇಕು ಎಂದಿದ್ದಾರೆ.

ಇದನ್ನೂ ಓದಿ: Video: ಪತ್ರಕರ್ತನ ಮೊಬೈಲ್​ ಕದ್ದು ಮಳ್ಳಾದ ಕಳ್ಳ; ಕದ್ದ ಮರುಕ್ಷಣವೇ ಅವನಿಗೇ ಗೊತ್ತಿಲ್ಲದೆ 20 ಸಾವಿರ ಜನರಿಗೆ ಮುಖ ತೋರಿಸಿದ !

Vittal Malekudiya: ವಿಠಲ್ ಮಲೆಕುಡಿಯ ನಕ್ಸಲ್ ನಂಟಿನ ಆರೋಪದಿಂದ ಮುಕ್ತ; 9 ವರ್ಷಗಳ ಬಳಿಕ ಮಹತ್ವದ ತೀರ್ಪು ಪ್ರಕಟ

Published On - 5:15 pm, Thu, 21 October 21

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ