100 ರೂ. ತುಂಬಾ ಚಿಕ್ಕ ಲಂಚ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗೆ ಬಾಂಬೆ ಹೈಕೋರ್ಟ್​ ರಿಲೀಫ್

ಬಾಂಬೆಯ ವೈದ್ಯಾಧಿಕಾರಿಯೊಬ್ಬರು 2007ರಲ್ಲಿ 100 ರೂ. ಲಂಚ ಪಡೆದಿದ್ದರು ಎಂದು ಆರೋಪಿಸಲಾಗಿತ್ತು. ಆದರೆ ಇದೀಗ ಬಾಂಬೆ ಹೈಕೋರ್ಟ್ ಅವರಿಗೆ ಈ ಪ್ರಕರಣದಿಂದ ರಿಲೀಫ್​ನೀಡಿದೆ. ಇದು ಚಿಕ್ಕ ವಿಷಯ ಎಂದು ಕಾಣುತ್ತದೆ. ಹಾಗಾಗಿ ಈ ಪ್ರಕರಣದಿಂದ ವೈದ್ಯಾಧಿಕಾರಿಯನ್ನು ಖುಲಾಸೆಗೊಳಿಸಲಾಗುವುದು ಎಂದು ಕೋರ್ಟ್​ ಹೇಳಿದೆ.

100 ರೂ. ತುಂಬಾ ಚಿಕ್ಕ ಲಂಚ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗೆ ಬಾಂಬೆ ಹೈಕೋರ್ಟ್​ ರಿಲೀಫ್
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Oct 05, 2023 | 3:33 PM

ಬಾಂಬೆ, ಅ.5: ಮಹಾರಾಷ್ಟ್ರದ ಬಾಂಬೆಯ ವೈದ್ಯಾಧಿಕಾರಿಯೊಬ್ಬರು 2007ರಲ್ಲಿ 100 ರೂ. ಲಂಚ ಪಡೆದಿದ್ದರು ಎಂದು ಆರೋಪಿಸಲಾಗಿತ್ತು. ಆದರೆ ಇದೀಗ ಬಾಂಬೆ ಹೈಕೋರ್ಟ್ (Bombay High Court) ಅವರಿಗೆ ಈ ಪ್ರಕರಣದಿಂದ ರಿಲೀಫ್​ನೀಡಿದೆ. ಇದು ಚಿಕ್ಕ ವಿಷಯ ಎಂದು ಕಾಣುತ್ತದೆ. ಹಾಗಾಗಿ ಈ ಪ್ರಕರಣದಿಂದ ವೈದ್ಯಾಧಿಕಾರಿಯನ್ನು ಖುಲಾಸೆಗೊಳಿಸಲಾಗುವುದು ಎಂದು ಕೋರ್ಟ್​ ಹೇಳಿದೆ. ನ್ಯಾಯಮೂರ್ತಿ ಜಿತೇಂದ್ರ ಜೈನ್ ಅವರಿದ್ದ ಏಕ ಪೀಠವು ಇದು ಕ್ಷುಲ್ಲಕ ವಿಷಯವೆಂದು ಪರಿಗಣಿಸಿ, ವಿಚಾರಣೆಗೆ ಅರ್ಹವಲ್ಲದ ಪ್ರಕರಣ ಎಂದು ಮಂಗಳವಾರ ಹೇಳಿದೆ.

ಇನ್ನು ವೈದ್ಯಾಧಿಕಾರಿಯನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿದೆ. 2007ರಲ್ಲಿ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪೌಡ್‌ನಲ್ಲಿರುವ ಗ್ರಾಮೀಣ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅನಿಲ್ ಶಿಂಧೆ ಅವರ ಸೋದರಳಿಯನಿಂದ ಹಲ್ಲೆಗೆ ಒಳಗಾಗಿದ್ದ ಎಲ್‌ಟಿ ಪಿಂಗಳೆ ಎಂಬ ವ್ಯಕ್ತಿಯಿಂದ 100 ರೂ. ಕೇಳಿದ್ದಾರೆ ಎಂದು ಆರೋಪಿಸಲಾಗಿದೆ.

ಎಲ್‌ಟಿ ಪಿಂಗಳೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅನಿಲ್ ಶಿಂಧೆ ಅವರು 100 ರೂ. ಲಂಚ ಕೇಳಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಡಾ.ಅನಿಲ್ ಶಿಂಧೆ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ ರೆಡ್ ಹ್ಯಾಂಡ್ ಆಗಿ ಹಿಡಿದಿತ್ತು. ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

ಇದನ್ನೂ ಓದಿ: ಪದದಲ್ಲಿ ಕಳಂಕವಿಲ್ಲ, ಅದನ್ನು ಬದಲಾಯಿಸುವ ಅಗತ್ಯವಿಲ್ಲ: ಹೈಕೋರ್ಟ್

ಜನವರಿ 2012ರಲ್ಲಿ, ವಿಶೇಷ ನ್ಯಾಯಾಲಯವು ಡಾ.ಅನಿಲ್ ಶಿಂಧೆ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿತು. ಆದರೆ ವಿಶೇಷ ನ್ಯಾಯಾಲಯ ಆದೇಶವನ್ನು ಅರ್ಜಿದಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಆದರೆ ಹೈಕೋರ್ಟ್​​ ಈ ಪ್ರಕರಣವನ್ನು ವಿಚಾರಣೆ ನಡೆಸಲು ಯೋಗ್ಯವಲ್ಲ ಎಂದು ಹೇಳಿದೆ.

ಇದು ತುಂಬಾ ಚಿಕ್ಕ ಮೊತ್ತ ಮತ್ತು ಈ ಆರೋಪಕ್ಕೆ ಸಂಬಂಧಿಸಿದಂತೆ ವೈದ್ಯಾಧಿಕಾರಿಯನ್ನು ದೋಷಮುಕ್ತಗೊಳಿಸಲು ಆದೇಶ ನೀಡುತ್ತಿದ್ದೇವೆ ಎಂದು ಪೀಠ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ