ಜಮ್ಮು-ಕಾಶ್ಮೀರದಿಂದ 10,000 ಅರೆಸೈನಿಕ ಪಡೆ ಸಿಬ್ಬಂದಿ ವಾಪಸ್

| Updated By: Guru

Updated on: Aug 20, 2020 | 10:53 PM

ದೆಹಲಿ: ಸುಮಾರು 10,000 ಅರೆಸೈನಿಕ ಪಡೆ ಸಿಬ್ಬಂದಿಯನ್ನು ಜಮ್ಮು ಮತ್ತು ಕಾಶ್ಮೀರದಿಂದ ತಕ್ಷಣವೇ ಹಿಂತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರವು ರಾಜ್ಯದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸಿ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದಾಗ ಮುನ್ನೆಚ್ಚರಿಕೆ ಕ್ರಮವಾಗಿ ಕಳೆದ ಆಗಸ್ಟ್ ನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪಡೆಗಳನ್ನು ನಿಯೋಜಿಸಲಾಗಿತ್ತು. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಅಥವಾ ಸಿಎಪಿಎಫ್ ಗಳನ್ನು ಕೇಂದ್ರ ಭೂಪ್ರದೇಶದಲ್ಲಿ ನಿಯೋಜಿಸುವುದನ್ನು ಕೇಂದ್ರ ಗೃಹ ಸಚಿವಾಲಯ ಪರಿಶೀಲಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಜಮ್ಮು ಮತ್ತು ಕಾಶ್ಮೀರದಿಂದ […]

ಜಮ್ಮು-ಕಾಶ್ಮೀರದಿಂದ 10,000 ಅರೆಸೈನಿಕ ಪಡೆ ಸಿಬ್ಬಂದಿ ವಾಪಸ್
Follow us on

ದೆಹಲಿ: ಸುಮಾರು 10,000 ಅರೆಸೈನಿಕ ಪಡೆ ಸಿಬ್ಬಂದಿಯನ್ನು ಜಮ್ಮು ಮತ್ತು ಕಾಶ್ಮೀರದಿಂದ ತಕ್ಷಣವೇ ಹಿಂತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರವು ರಾಜ್ಯದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸಿ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದಾಗ ಮುನ್ನೆಚ್ಚರಿಕೆ ಕ್ರಮವಾಗಿ ಕಳೆದ ಆಗಸ್ಟ್ ನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪಡೆಗಳನ್ನು ನಿಯೋಜಿಸಲಾಗಿತ್ತು.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಅಥವಾ ಸಿಎಪಿಎಫ್ ಗಳನ್ನು ಕೇಂದ್ರ ಭೂಪ್ರದೇಶದಲ್ಲಿ ನಿಯೋಜಿಸುವುದನ್ನು ಕೇಂದ್ರ ಗೃಹ ಸಚಿವಾಲಯ ಪರಿಶೀಲಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಜಮ್ಮು ಮತ್ತು ಕಾಶ್ಮೀರದಿಂದ ತಕ್ಷಣದಿಂದ ಜಾರಿಗೆ ಬರುವಂತೆ 100 ಸಿಎಪಿಎಫ್​ಗಳನ್ನು ಹಿಂಪಡೆಯಲು ಮತ್ತು ಆಯಾ ಸ್ಥಳಗಳಿಗೆ ಹಿಂತಿರುಗಿಸಲು ನಿರ್ಧರಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಆದೇಶದ ಪ್ರಕಾರ, 100 ಕಂಪನಿಗಳಲ್ಲಿ 40 ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ತಲಾ 20 ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಗಡಿ ಭದ್ರತಾ ಪಡೆ ಮತ್ತು ಸಶಸ್ತ್ರ ಸೀಮಾ ಬಲ. ಈಗ ಜಮ್ಮು ಮತ್ತು ಕಾಶ್ಮೀರಕ್ಕೆ ಸ್ಥಳಾಂತರಗೊಳ್ಳುವ ಮೊದಲು ಎಲ್ಲಿಗೆ ನಿಯೋಜಿಸಲ್ಪಟ್ಟಿದೆಯೋ ಅಲ್ಲಿಗೆ ಹೋಗುತ್ತವೆ. ಮೇ ತಿಂಗಳಲ್ಲಿ ಗೃಹ ಸಚಿವಾಲಯವು 10 ಸಿಎಪಿಎಫ್ ಕಂಪನಿಗಳನ್ನು ಜಮ್ಮು ಮತ್ತು ಕಾಶ್ಮೀರದಿಂದ ಹಿಂತೆಗೆದುಕೊಂಡಿತ್ತು. ಸಿಎಪಿಎಫ್ ಕಂಪನಿಯು ಸುಮಾರು 100 ಸಿಬ್ಬಂದಿಗಳ ಕಾರ್ಯಾಚರಣಾ ಸಾಮರ್ಥ್ಯವನ್ನು ಹೊಂದಿದೆ.

Published On - 7:08 am, Thu, 20 August 20