AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ 108 ಮಂದಿ ಪಾಕಿಸ್ತಾನಿ ವಲಸಿಗರಿಗೆ ಭಾರತದ ಪೌರತ್ವ: ಹರ್ಷ ಸಂಘವಿ

ಗುಜರಾತ್​ನಲ್ಲಿ ಪಾಕಿಸ್ತಾನದಿಂದ ವಲಸೆ ಬಂದಿರುವ 108 ಮಂದಿಗೆ ಭಾರತದ ಪೌರತ್ವ ನೀಡಲಾಗುವುದು ಎಂದು ಕೇಂದ್ರ ಸಚಿವ ಹರ್ಷ ಸಂಘವಿ ತಿಳಿಸಿದ್ದಾರೆ. 2016 ಮತ್ತು 2018 ರ ಗೆಜೆಟ್ ಅಧಿಸೂಚನೆಗಳು ಅಹಮದಾಬಾದ್, ಗಾಂಧಿನಗರ ಮತ್ತು ಗುಜರಾತ್‌ನ ಕಚ್‌ನ ಜಿಲ್ಲಾಧಿಕಾರಿಗಳಿಗೆ ಪೌರತ್ವ ಕಾಯ್ದೆಯಡಿಯಲ್ಲಿ ಕಾರ್ಯವಿಧಾನವನ್ನು ಅನುಸರಿಸಿದ ನಂತರ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಅಲ್ಪಸಂಖ್ಯಾತ ಸಮುದಾಯಗಳ ಜನರಿಗೆ ಭಾರತೀಯ ಪೌರತ್ವವನ್ನು ನೀಡಲು ಅಧಿಕಾರ ನೀಡುತ್ತವೆ.

ಗುಜರಾತ್​ನಲ್ಲಿ 108 ಮಂದಿ ಪಾಕಿಸ್ತಾನಿ ವಲಸಿಗರಿಗೆ ಭಾರತದ ಪೌರತ್ವ: ಹರ್ಷ ಸಂಘವಿ
ಭಾರತದ ಪೌರತ್ವ
ನಯನಾ ರಾಜೀವ್
|

Updated on: Sep 12, 2023 | 11:08 AM

Share

ಗುಜರಾತ್​(Gujarat)ನಲ್ಲಿ ಪಾಕಿಸ್ತಾನದಿಂದ ವಲಸೆ ಬಂದಿರುವ 108 ಮಂದಿಗೆ ಭಾರತದ ಪೌರತ್ವ ನೀಡಲಾಗುವುದು ಎಂದು ಕೇಂದ್ರ ಸಚಿವ ಹರ್ಷ ಸಂಘವಿ ತಿಳಿಸಿದ್ದಾರೆ. 2016 ಮತ್ತು 2018ರ ಗೆಜೆಟ್ ಅಧಿಸೂಚನೆಗಳು ಅಹಮದಾಬಾದ್, ಗಾಂಧಿನಗರ ಮತ್ತು ಗುಜರಾತ್‌ನ ಕಚ್‌ನ ಜಿಲ್ಲಾಧಿಕಾರಿಗಳಿಗೆ ಪೌರತ್ವ ಕಾಯ್ದೆಯಡಿಯಲ್ಲಿ ಕಾರ್ಯವಿಧಾನವನ್ನು ಅನುಸರಿಸಿದ ನಂತರ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಅಲ್ಪಸಂಖ್ಯಾತ ಸಮುದಾಯಗಳ ಜನರಿಗೆ ಭಾರತೀಯ ಪೌರತ್ವವನ್ನು ನೀಡಲು ಅಧಿಕಾರ ನೀಡಲಾಗುತ್ತದೆ.

ಅಹಮದಾಬಾದ್ ಜಿಲ್ಲಾಧಿಕಾರಿ ಕಚೇರಿಯಿಂದ ಇಲ್ಲಿಯವರೆಗೆ ಸುಮಾರು 1 ಸಾವಿರದ 149 ಪಾಕಿಸ್ತಾನಿ ಹಿಂದೂ ವಲಸಿಗರಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಇಂದು ಈ ಸಂದರ್ಭದಲ್ಲಿ ಅಹಮದಾಬಾದ್‌ನ ಜಿಲ್ಲಾಧಿಕಾರಿ ಶ್ರೀಮತಿ ಪ್ರವೀಣಾ ಡಿಕೆ, ಅಹಮದಾಬಾದ್‌ನ ಶಾಸಕರು, ಸಿಂಧ್ ಅಲ್ಪಸಂಖ್ಯಾತ ವಲಸಿಗರ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, 108 ಫಲಾನುಭವಿಗಳು ಮತ್ತು ಅವರ ಕುಟುಂಬ ಸದಸ್ಯರು ಉಪಸ್ಥಿತರಿರಲಿದ್ದಾರೆ.

ಕಳೆದ 5 ವರ್ಷಗಳಲ್ಲಿ ಭಾರತೀಯ ಪೌರತ್ವವನ್ನು ಪಡೆದಿರುವ ಶೇ.87 ರಷ್ಟು ಅರ್ಜಿದಾರರು ಪಾಕಿಸ್ತಾನದಿಂದ ಬಂದವರು ಎಂಬ ಮಾಹಿತಿಯನ್ನು ಗೃಹ ಸಚಿವಾಲಯ ಈ ಹಿಂದೆ ತಿಳಿಸಿತ್ತು. ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ ಉತ್ತರ ನೀಡಿರುವ ಇಲಾಖೆ, ಕಳೆದ 5 ವರ್ಷಗಳಲ್ಲಿ 5,220 ವಿದೇಶಿಯರಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಅವರಲ್ಲಿ 4,552 (ಶೇ.87) ಹೊಸ ನಾಗರಿಕರು ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಮಾಹಿತಿ ನೀಡಿತ್ತು.

ಮತ್ತಷ್ಟು ಓದಿ: NRC: ಆಧಾರ್​ನೊಂದಿಗೆ ಚುನಾವಣಾ ಗುರುತು ಸಂಖ್ಯೆಯ ಬೆಸುಗೆ; ರಾಷ್ಟ್ರೀಯ ಪೌರತ್ವ ನೋಂದಣಿಗಾಗಿ ದತ್ತಾಂಶ ಕಲೆಹಾಕುವ ಮೊದಲ ಹೆಜ್ಜೆ

ಕಳೆದ ವರ್ಷ ನವಂಬರ್‌ನಲ್ಲಿ ಲೋಕಸಭೆಗೆ ಮಾಹಿತಿ ನೀಡಿದ್ದ ಕೇಂದ್ರ ಗೃಹಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಪ್ರಕಾರ, 5 ವರ್ಷಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವ ತ್ಯಜಿಸಿದ್ದಾರೆ. 2021 ರಿಂದ 2021ರ ವರೆಗೆ 6,08,162 ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ.

ಕಳೆದ 5 ವರ್ಷಗಳಲ್ಲಿ ಕೇವಲ 71 ಅಮೆರಿಕನ್ನರು ಭಾರತೀಯ ಪೌರತ್ವ ಪಡೆದಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ಪಾಕಿಸ್ತಾನ (ಶೇ.87), ಅಫ್ಘಾನಿಸ್ತಾನ (ಶೇ.8) ಮತ್ತು ಬಾಂಗ್ಲಾದೇಶ (ಶೇ.2) ಭಾರತದ ಪೌರತ್ವ ಪಡೆದುಕೊಂಡಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ