Delhi Chalo | ಪಟ್ಟು ಸಡಿಲಿಸದ ಕೇಂದ್ರ-ರೈತ ಸಂಘಟನೆಗಳು; 10ನೇ ಸುತ್ತಿನ ಮಾತುಕತೆಯೂ ವಿಫಲ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 20, 2021 | 7:52 PM

ರೈತರು ಬೆಳೆದ ಬೆಲೆಗೆ ಕನಿಷ್ಠ ಬೆಂಬಲ ಬೆಲೆ ನೀಡುವ ವಿಚಾರದಲ್ಲಿ ಸರ್ಕಾರ ಕಾನೂನು ಖಾತರಿ ನೀಡುವ ಬಗ್ಗೆ ಮಾತುಕತೆ ನಡೆಯಬೇಕಿದೆ. ಆದರೆ, ಸರ್ಕಾರ ಇದನ್ನು ನಿರ್ಲಕ್ಷ್ಯ ಮಾಡುತ್ತಿದ್ದು, ಉಳಿದೆಲ್ಲ ವಿಚಾರಗಳ ಬಗ್ಗೆ ಮಾತನಾಡುತ್ತಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

Delhi Chalo | ಪಟ್ಟು ಸಡಿಲಿಸದ ಕೇಂದ್ರ-ರೈತ ಸಂಘಟನೆಗಳು; 10ನೇ ಸುತ್ತಿನ ಮಾತುಕತೆಯೂ ವಿಫಲ
ರೈತರ ಪ್ರತಿಭಟನೆ (ಸಂಗ್ರಹ ಚಿತ್ರ)
Follow us on

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ರೈತ ಸಂಘಟನೆಗಳು ಹಾಗೂ ಕೇಂದ್ರ ಸರ್ಕಾರ ನಡುವೆ ನಡೆದ 10ನೇ ಸುತ್ತಿನ ಮಾತುಕತೆಯಲ್ಲಿ ಇಬ್ಬರೂ ತಮ್ಮ ಪಟ್ಟು ಸಡಿಲಿಸಲು ನಿರಾಕರಿಸಿವೆ. ಹೀಗಾಗಿ, ಇಂದಿನ ಮಾತುಕತೆಯೂ ವಿಫಲವಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ರೈತರು ಬೆಳೆದ ಬೆಲೆಗೆ ಕನಿಷ್ಠ ಬೆಂಬಲ ಬೆಲೆ ನೀಡುವ ವಿಚಾರದಲ್ಲಿ ಸರ್ಕಾರವು ಕಾನೂನಿನ ಖಾತರಿ ನೀಡುವ ಬಗ್ಗೆ ಮಾತುಕತೆ ನಡೆಯಬೇಕಿದೆ. ಆದರೆ, ಸರ್ಕಾರ ಇದನ್ನು ನಿರ್ಲಕ್ಷ್ಯ ಮಾಡುತ್ತಿದ್ದು, ಉಳಿದ ವಿಚಾರಗಳ ಬಗ್ಗೆ ಮಾತನಾಡುತ್ತಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಕೃಷಿ ತಿದ್ದುಪಡಿ ಕಾಯ್ದೆ ರದ್ದು ಮಾಡುವವರೆಗೂ ನಮ್ಮ ಪ್ರತಿಭಟನೆ ನಿಲ್ಲದು ಎಂದು ರೈತ ಸಂಘಟನೆಗಳು ಹೇಳಿವೆ. ಆದರೆ, ಸರ್ಕಾರ ಯಾವುದೇ ಕಾರಣಕ್ಕೂ ನಾವು ಕೃಷಿ ತಿದ್ದುಪಡಿ ಕಾಯ್ದೆ ರದ್ದು ಮಾಡುವುದಿಲ್ಲ. ನೀವು ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ಗೆ ಹೋಗಬಹುದು ಎಂದು ಕಡ್ಡಿಮುರಿದಂತೆ ಹೇಳಿದೆ. ಇದರಿಂದ ರೈತರು ಮತ್ತೆ ಕೇಂದ್ರದ ನಡುವೆ ನಡೆಯುತ್ತಿರುವ ಸಮರ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ.

ಈ ಮಧ್ಯೆ, ಸುಪ್ರೀಂಕೋರ್ಟ್​ ನೇಮಿಸಿರುವ ಸಮಿತಿಯು ವರದಿ ಸಲ್ಲಿಸುವವರೆಗೂ ಕೃಷಿ ಕಾಯ್ದೆಗಳನ್ನು ಜಾರಿ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ರೈತರಿಗೆ ಭರವಸೆ ನೀಡಿದೆ ಎಂದು ಮೂಲಗಳು ತಿಳಿವೆ. ಆದರೆ, ಈ ಭರವಸೆಗಳಿಗೆ ಸುಪ್ರೀಂಕೋರ್ಟ್​ ಸೊಪ್ಪು ಹಾಕಿಲ್ಲ.

ಇದು ರೈತರ ಪ್ರತಿಭಟನೆಯಲ್ಲ, ಕಾಂಗ್ರೆಸ್ ಪ್ರತಿಭಟನೆ: ಸಿ.ಟಿ.ರವಿ ವಾಗ್ದಾಳಿ