AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ನಿಮಿಷ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ: ಆಂಧ್ರ ಪ್ರದೇಶದ ಚಿತ್ತೂರಿನ ಆಸ್ಪತ್ರೆಯಲ್ಲಿ 11 ಕೊವಿಡ್​ ರೋಗಿಗಳ ಸಾವು

ಆಂಧ್ರ ಪ್ರದೇಶದ ಚಿತ್ತೂರಿನ ಸರ್ಕಾರಿ ಶ್ರೀ ವೆಂಕಟೇಶ್ವರ ರಾಮನಾರಾಯಣ್ ರುಯಿಯಾ ಆಸ್ಪತ್ರೆಯಲ್ಲಿ (ಎಸ್‌ವಿಆರ್​ಆರ್​) ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವುಂಟಾದ ಕಾರಣದಿಂದಾಗಿ, 11 ಜನ ಕೋವಿಡ್ -19 ರೋಗಿಗಳು ಸಾವನ್ನಪ್ಪಿದ್ದಾರೆ.

ಐದು ನಿಮಿಷ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ: ಆಂಧ್ರ ಪ್ರದೇಶದ ಚಿತ್ತೂರಿನ ಆಸ್ಪತ್ರೆಯಲ್ಲಿ 11 ಕೊವಿಡ್​ ರೋಗಿಗಳ ಸಾವು
ಡಾ. ಭಾಸ್ಕರ ಹೆಗಡೆ
| Edited By: |

Updated on: May 11, 2021 | 10:24 AM

Share

ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಕಾರಣದಿಂದಾಗಿ, ಸೋಮವಾರ ಸಂಜೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಸರ್ಕಾರಿ ಶ್ರೀ ವೆಂಕಟೇಶ್ವರ ರಾಮನಾರಾಯಣ್ ರುಯಿಯಾ ಆಸ್ಪತ್ರೆಯಲ್ಲಿ (ಎಸ್‌ವಿಆರ್ಆರ್) 11 ಜನ ಕೊವಿಡ್ -19 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿತ್ತೂರು ಜಿಲ್ಲಾಧಿಕಾರಿ ಎಂ.ಹರಿನಾರಾಯಣನ್ ಈ ಕುರಿತು ಮಾತನಾಡಿ, ತಮಿಳುನಾಡಿನ ಶ್ರೀಪೆರುಂಬುದೂರಿನಿಂದ ಎಸ್‌ವಿಆರ್‌ಆರ್ ಆಸ್ಪತ್ರೆಗೆ ಆಮ್ಲಜನಕ ಟ್ಯಾಂಕರ್ ಬರಲು ವಿಳಂಬವಾಗಿತ್ತು. ಸುಮಾರು 5-10 ನಿಮಿಷಗಳ ಕಾಲ ಆಮ್ಲಜನಕದ ಪೂರೈಕೆಯಲ್ಲಿ ಅಡ್ಡಿ ಉಂಟಾಗಿದೆ. ದುರಾದೃಷ್ಟ, ಆ ಐದು ನಿಮಷದಲ್ಲಿ 11 ಜನರಿಗೆ ಆಮ್ಲಜನಕದ ಅತ್ಯವಶ್ಯಕತೆ ಇತ್ತು ಎಂದಿದ್ದಾರೆ.

ಆಸ್ಪತ್ರೆಗೆ ಟ್ಯಾಂಕರ್ ಬಂದ ಕೂಡಲೇ, ಆಮ್ಲಜನಕದ ಪೂರೈಕೆಯನ್ನು ಸರಿಪಡಿಸಲಾಯಿತು. ಆದರೆ ಆ ಹೊತ್ತಿಗೆ, ಕೊವಿಡ್ -19 ಗೆ ಚಿಕಿತ್ಸೆ ಪಡೆಯುತ್ತಿದ್ದ 11 ಜನರು ಉಸಿರುಕಟ್ಟುವಿಕೆಯಿಂದ ಸಾವನ್ನಪ್ಪಿದರು. ಆಮ್ಲಜನಕದ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಆಗದಿದ್ದರೆ ನಾವು ಪ್ರಾಣಹಾನಿಯನ್ನು ತಡೆಯಬಹುದು, ಎಂದು ಅವರು ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಸುಮಾರು 1,000 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಆಮ್ಲಜನಕದ ಪೂರೈಕೆಯಲ್ಲಿನ ಅಡ್ಡಿ ಹಲವಾರು ರೋಗಿಗಳಿಗೆ ತೀವ್ರ ಉಸಿರಾಟದ ತೊಂದರೆಯನ್ನುಂಟುಮಾಡಿದೆ. ಕಾರ್ಡಿಯೋ-ಪಲ್ಮನರಿ ಪುನರುಜ್ಜೀವನ (ಸಿಪಿಆರ್) ಮತ್ತು ಆಮ್ಲಜನಕ ಕಂಪ್ರೆಸರ್​ಗಳನ್ನು ಉಪಯೋಗಿಸುವ ಮೂಲಕ ವೈದ್ಯರು ಕೆಲವು ರೋಗಿಗಳ ಜೀವವನ್ನು ಉಳಿಸಬಹುದು.

ಇದನ್ನೂ ಓದಿ: 

ವೈದ್ಯಕೀಯ ಆಮ್ಲಜನಕ ಕೊರತೆ ನಿಭಾಯಿಸಲು ಕೇಂದ್ರ ಸರ್ಕಾರ ಏಪ್ರಿಲ್ ಮೊದಲ ವಾರದಲ್ಲೇ ಕಾರ್ಯೋನ್ಮುಖಗೊಂಡಿತ್ತು

ಆಮ್ಲಜನಕ ಕೊರತೆ ನೀಗಿಸಲು ಆಕ್ಸಿಜನ್ ಪ್ಲಾಂಟ್ ಸಿದ್ಧಪಡಿಸಿದ ಚಾಮರಾಜನಗರ ಜಿಲ್ಲಾಡಳಿತ

(11 Covid patients died in five minutes due to shortage of Oxygen in SVRR Hospital Chittoor Andhra Pradesh)

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು