AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡಮಾರುತಗಳಿಂದ ನಲುಗಿದ ತಮಿಳುನಾಡಿಗೆ ಅಮ್ಮಾ ಕ್ಯಾಂಟೀನ್ ಆಸರೆ

ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಅಮ್ಮಾ ಕ್ಯಾಂಟೀನ್​ಗಳಲ್ಲಿ ಉಚಿತ ಆಹಾರ ವಿತರಿಸುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿತ್ತು. ಘೋಷಿಸಿದ 12 ಘಂಟೆಗಳಲ್ಲಿ ಚೆನ್ನೈನಲ್ಲಿ ಇಂದು ಬೆಳಿಗ್ಗೆ 11 ಲಕ್ಷ ಜನರು ಉಪಹಾರ ಮಾಡಿದ್ದರು.

ಚಂಡಮಾರುತಗಳಿಂದ ನಲುಗಿದ ತಮಿಳುನಾಡಿಗೆ ಅಮ್ಮಾ ಕ್ಯಾಂಟೀನ್ ಆಸರೆ
ಅಮ್ಮಾ ಕ್ಯಾಂಟೀನ್
guruganesh bhat
| Edited By: |

Updated on: Dec 06, 2020 | 7:08 PM

Share

ಚೆನ್ನೈ: ನಿವಾರ್ ಮತ್ತು ಬುವೇರಿ ಚಂಡಮಾರುತಗಳಿಗೆ ನಲುಗಿರುವ ತಮಿಳುನಾಡಿನ ಜನರಿಗೆ ‘ಅಮ್ಮಾ ಕ್ಯಾಂಟೀನ್’ ವರದಾನವಾಗಿ ಪರಿಣಮಿಸಿದೆ. ಒಂದರ ಹಿಂದೊಂದರಂತೆ ಅಬ್ಬರಿಸಿದ ಚಂಡಮಾರುತಗಳು ತಮಿಳುನಾಡಿನಲ್ಲಿ ಅಪಾರ ಹಾನಿ ಉಂಟುಮಾಡಿದ್ದವು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಅಮ್ಮಾ ಕ್ಯಾಂಟೀನ್​ಗಳಲ್ಲಿ ಉಚಿತ ಆಹಾರ ವಿತರಿಸುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿತ್ತು. ಘೋಷಿಸಿದ 12 ಘಂಟೆಗಳಲ್ಲಿ ಚೆನ್ನೈನಲ್ಲಿ ಇಂದು ಬೆಳಿಗ್ಗೆ 11 ಲಕ್ಷ ಜನರು ಉಪಹಾರ ಮಾಡಿರುವುದಾಗಿ ಸಚಿವ ಡಿ.ಜಯಕುಮಾರ್ ತಿಳಿಸಿದ್ದಾರೆ.

ನಿವಾರ್ ಮತ್ತು ಬುವೇರಿ ಚಂಡಮಾರುತಗಳು ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಹಾನಿಯುಂಟು ಮಾಡಿವೆ. ನಿವಾರ್ ಚಂಡಮಾರುತದ ವೇಳೆ 2.50 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರವಾಗಿದ್ದರು. 100ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದವು. ಚಂಡಮಾರುತದಿಂದ ಆದ ಹಾನಿಯ ಬಗ್ಗೆ ಪ್ರಧಾನಿ ಮೋದಿ ತಮಿಳುನಾಡು ಸಿಎಂ ಕೆ ಪಳನಿಸ್ವಾಮಿಯರಿಗೆ ಕರೆ ಮಾಡಿ ವಿವರ ಪಡೆದಿದ್ದರು.

ಅಲ್ಲದೇ ಬುವೇರಿ ಚಂಡಮಾರುತವೂ ತಮಿಳುನಾಡನ್ನು ಹೈರಾಣು ಮಾಡಿತ್ತು. ದಕ್ಷಿಣ ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. 217 ಪುನರ್ವಸತಿ ಕೇಂದ್ರಗಳಲ್ಲಿ 15,840 ಜನರಿಗೆ ವಸತಿ ಕಲ್ಪಿಸಲಾಗಿತ್ತು.

ಅಮ್ಮಾ ಕ್ಯಾಂಟೀನ್​ನಲ್ಲಿ ಕೊರೊನಾ ಲಾಕ್​ಡೌನ್ ಸಮಯದಲ್ಲೂ ಉಚಿತ ಆಹಾರ ವಿತರಿಸಲಾಗಿತ್ತು ಎಂದು ಇಲ್ಲಿ ಸ್ಮರಿಸಬಹುದು.

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ