ಮಧ್ಯಪ್ರದೇಶ: ಟ್ರಕ್ಗೆ ಬಸ್ ಡಿಕ್ಕಿ, 12 ಮಂದಿ ಸಾವು, 14 ಜನರಿಗೆ ಗಾಯ
ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 14 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಬಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು, ಕೆಲವರು ಸಜೀವ ದಹನವಾಗಿದ್ದಾರೆ. ವರದಿಗಳ ಪ್ರಕಾರ, ಗುನಾ-ಆರೋನ್ ರಸ್ತೆಯಲ್ಲಿ ಖಾಸಗಿ ಬಸ್ ಡಂಪರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಸುಟ್ಟ ಗಾಯಗಳ ಚಿಕಿತ್ಸೆಗಾಗಿ ಗುನಾ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದಾಗ ಬಸ್ ಆರೋನ್ ಕಡೆಗೆ ಹೋಗುತ್ತಿದ್ದಾಗ ಡಂಪರ್ ಗುನಾ ಕಡೆಗೆ ಹೋಗುತ್ತಿತ್ತು. ಸುಮಾರು 14 ಜನರನ್ನು ಗುನಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುನಾ-ಅರಾನ್ ಮಾರ್ಗದಲ್ಲಿ ಡಂಪರ್ ಮತ್ತು ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡಿತು.
ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಮತ್ತು ಅವರಲ್ಲಿ ನಾಲ್ವರು ಹೇಗೋ ಬಸ್‌ನಿಂದ ಹೊರಬಂದು ಮನೆಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಟ್ಟ ಮಂಜು: ಯಮುನಾ ಎಕ್ಸ್ಪ್ರೆಸ್ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ
ಸರಣಿ ಅಪಘಾತ: ದಟ್ಟ ಮಂಜು ಕವಿದಿದ್ದರಿಂದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಬುಧವಾರ ಬೆಳಗ್ಗೆ ದಟ್ಟವಾದ ಮಂಜು ಕವಿದಿತ್ತು. ದೆಹಲಿ-ಎನ್‌ಸಿಆರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಜು ಮುಸುಕಿದ ಮತ್ತು ಚಳಿ ಇದ್ದ ಕಾರಣ ಕೆಲವು ಸ್ಥಳಗಳಲ್ಲಿ ಶೂನ್ಯ ಗೋಚರತೆ ಇತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ