ಮಧ್ಯಪ್ರದೇಶ: ಟ್ರಕ್​ಗೆ ಬಸ್​ ಡಿಕ್ಕಿ, 12 ಮಂದಿ ಸಾವು, 14 ಜನರಿಗೆ ಗಾಯ

ಟ್ರಕ್​ಗೆ ಬಸ್​ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 14 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಬಸ್​ಗೆ ಬೆಂಕಿ ಹೊತ್ತಿಕೊಂಡಿತ್ತು, ಕೆಲವರು ಸಜೀವ ದಹನವಾಗಿದ್ದಾರೆ. ವರದಿಗಳ ಪ್ರಕಾರ, ಗುನಾ-ಆರೋನ್ ರಸ್ತೆಯಲ್ಲಿ ಖಾಸಗಿ ಬಸ್ ಡಂಪರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಸುಟ್ಟ ಗಾಯಗಳ ಚಿಕಿತ್ಸೆಗಾಗಿ ಗುನಾ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಮಧ್ಯಪ್ರದೇಶ: ಟ್ರಕ್​ಗೆ ಬಸ್​ ಡಿಕ್ಕಿ, 12 ಮಂದಿ ಸಾವು, 14 ಜನರಿಗೆ ಗಾಯ
ಬೆಂಕಿ
Image Credit source: Wionews

Updated on: Dec 28, 2023 | 2:26 PM

ಟ್ರಕ್​ಗೆ ಬಸ್​ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 14 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಬಸ್​ಗೆ ಬೆಂಕಿ ಹೊತ್ತಿಕೊಂಡಿತ್ತು, ಕೆಲವರು ಸಜೀವ ದಹನವಾಗಿದ್ದಾರೆ. ವರದಿಗಳ ಪ್ರಕಾರ, ಗುನಾ-ಆರೋನ್ ರಸ್ತೆಯಲ್ಲಿ ಖಾಸಗಿ ಬಸ್ ಡಂಪರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಸುಟ್ಟ ಗಾಯಗಳ ಚಿಕಿತ್ಸೆಗಾಗಿ ಗುನಾ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದಾಗ ಬಸ್ ಆರೋನ್ ಕಡೆಗೆ ಹೋಗುತ್ತಿದ್ದಾಗ ಡಂಪರ್ ಗುನಾ ಕಡೆಗೆ ಹೋಗುತ್ತಿತ್ತು. ಸುಮಾರು 14 ಜನರನ್ನು ಗುನಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುನಾ-ಅರಾನ್ ಮಾರ್ಗದಲ್ಲಿ ಡಂಪರ್ ಮತ್ತು ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡಿತು.

ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಮತ್ತು ಅವರಲ್ಲಿ ನಾಲ್ವರು ಹೇಗೋ ಬಸ್‌ನಿಂದ ಹೊರಬಂದು ಮನೆಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಟ್ಟ ಮಂಜು: ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ

ಸರಣಿ ಅಪಘಾತ:  ದಟ್ಟ ಮಂಜು ಕವಿದಿದ್ದರಿಂದ ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಬುಧವಾರ ಬೆಳಗ್ಗೆ ದಟ್ಟವಾದ ಮಂಜು ಕವಿದಿತ್ತು. ದೆಹಲಿ-ಎನ್‌ಸಿಆರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಜು ಮುಸುಕಿದ ಮತ್ತು ಚಳಿ ಇದ್ದ ಕಾರಣ ಕೆಲವು ಸ್ಥಳಗಳಲ್ಲಿ ಶೂನ್ಯ ಗೋಚರತೆ ಇತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us