ಉಕ್ರೇನ್ ವಿರುದ್ಧ ಯುದ್ಧ; ರಷ್ಯಾ ಸೇನೆಯಲ್ಲಿ ಹೋರಾಡುತ್ತಿದ್ದ 12 ಭಾರತೀಯರ ಸಾವು, 16 ಜನ ನಾಪತ್ತೆ
ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಮುಂದುವರೆದಿದೆ. ರಷ್ಯಾ ಸೇನೆಯಲ್ಲಿ ಉಕ್ರೇನ್ ಜೊತೆಗಿನ ಸಂಘರ್ಷದಲ್ಲಿ ಇದುವರೆಗೂ 12 ಜನ ಮೃತಪಟ್ಟಿದ್ದಾರೆ ಮತ್ತು 16 ಮಂದಿ ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದೀಗ ನಡೆಯುತ್ತಿರುವ ಯುದ್ಧದಲ್ಲಿ ರಷ್ಯಾ ಪರವಾಗಿ ಹೋರಾಡುತ್ತಿದ್ದ 12 ಭಾರತೀಯರು ಸಾವನ್ನಪ್ಪಿದ್ದಾರೆ.
ನವದೆಹಲಿ: ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ರಷ್ಯಾ ಪರವಾಗಿ ಹೋರಾಡುತ್ತಿರುವ ಒಟ್ಟು 126 ಭಾರತೀಯರಲ್ಲಿ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಇಂದು ತಿಳಿಸಿದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ರಷ್ಯಾ ಪರವಾಗಿ ಹೋರಾಡುತ್ತಿರುವ ಒಟ್ಟು 126 ಭಾರತೀಯರಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಮತ್ತು 16 ಭಾರತೀಯರು ಕಾಣೆಯಾಗಿದ್ದಾರೆ. ಇದುವರೆಗೂ 96 ಮಂದಿ ಭಾರತಕ್ಕೆ ವಾಪಾಸ್ ಬಂದಿದ್ದಾರೆ, 18 ಮಂದಿ ಇನ್ನೂ ಭಾರತಕ್ಕೆ ಮರಳಿಲ್ಲ ಎಂದು ಅವರು ಹೇಳಿದ್ದಾರೆ.
ರಷ್ಯಾದ ಸೈನ್ಯದಲ್ಲಿ ಮುಂಚೂಣಿಯಲ್ಲಿ ಹೋರಾಡುತ್ತಾ ಸಾವನ್ನಪ್ಪಿದ ಕೇರಳದ ವ್ಯಕ್ತಿ ಬಿನಿಲ್ ಬಾಬು (32) ಅವರ ಸಾವಿನ ಬಗ್ಗೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಈ ಘಟನೆಯನ್ನು ‘ದುರದೃಷ್ಟಕರ’ ಎಂದು ಕರೆದಿದ್ದಾರೆ. ನಮ್ಮ ರಾಯಭಾರ ಕಚೇರಿ ರಷ್ಯಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಇದರಿಂದಾಗಿ ಅವರ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ತರಬಹುದು” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಯುದ್ಧದಲ್ಲಿ ಕೇರಳದ ವ್ಯಕ್ತಿ ಸಾವಿನ ಬಳಿಕ ರಷ್ಯಾದಿಂದ ಆದಷ್ಟು ಬೇಗ ಭಾರತೀಯರು ಹಿಂತಿರುಗಲು ಭಾರತ ಒತ್ತಾಯ
ರಷ್ಯಾದಲ್ಲಿ ಉಳಿದಿರುವವರನ್ನು ಸ್ವದೇಶಕ್ಕೆ ಕರೆತರಲು ಭಾರತ ಪ್ರಯತ್ನಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
“ಇಂದಿನವರೆಗೆ 126 ರಷ್ಯಾದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯ ಪ್ರಜೆಳಿದ್ದಾರೆ ಎಂದು ವರದಿಯಾಗಿವೆ. ಈ 126 ಜನರಲ್ಲಿ 96 ಜನರು ಭಾರತಕ್ಕೆ ಮರಳಿದ್ದಾರೆ ಮತ್ತು ರಷ್ಯಾದ ಸಶಸ್ತ್ರ ಪಡೆಗಳಿಂದ ಬಿಡುಗಡೆಗೊಂಡಿದ್ದಾರೆ. ರಷ್ಯಾದ ಸೇನೆಯಲ್ಲಿರುವ 18 ಭಾರತೀಯ ಪ್ರಜೆಗಳು ಉಳಿದಿದ್ದಾರೆ ಮತ್ತು ಅವರಲ್ಲಿ 16 ವ್ಯಕ್ತಿಗಳು ಎಲ್ಲಿದ್ದಾರೆ ಎಂಬುದು ತಿಳಿದಿಲ್ಲ” ಎಂದು ಜೈಸ್ವಾಲ್ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:33 pm, Fri, 17 January 25