AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಭಾಗಪತ್‌ನಲ್ಲಿ ಭೀಕರ ರಸ್ತೆ ಅಪಘಾತ; ಪಿಕ್‌ಅಪ್ ಪಲ್ಟಿಯಾಗಿ 12 ಜನ ಸಾವು

ಪಿಕಪ್ ವಾಹನ ಡಿವೈಡರ್​ಗೆ ಡಿಕ್ಕಿಯಾಗಿ 12 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಭಾಗಪತ್​ ಜಿಲ್ಲೆಯಲ್ಲಿ ನಡೆದಿದೆ. ಈ ದುರಂತದಲ್ಲಿ 22 ಜನರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದೇವಸ್ಥಾನಕ್ಕೆ ಭೇಟಿ ನೀಡಿ ವಾಪಾಸ್ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ರಾಜಸ್ಥಾನದ ಗೋಗಾಮೆಡಿಯಲ್ಲಿರೋ ಬಗಡ್ ಧಾಮಕ್ಕೆ ತೆರಳಿದ್ದ ಜನರು ಉತ್ತರ ಪ್ರದೇಶದ ಬದಾಯು ಜಿಲ್ಲೆಗೆ ವಾಪಾಸ್​ ಬರುತ್ತಿದ್ದಾಗ ಅಪಘಾತ ನಡೆದಿದೆ.

ಉತ್ತರ ಪ್ರದೇಶದ ಭಾಗಪತ್‌ನಲ್ಲಿ ಭೀಕರ ರಸ್ತೆ ಅಪಘಾತ; ಪಿಕ್‌ಅಪ್ ಪಲ್ಟಿಯಾಗಿ 12 ಜನ ಸಾವು
ಭಾಗಪತ್‌ನಲ್ಲಿ ಭೀಕರ ರಸ್ತೆ ಅಪಘಾತImage Credit source: x
ಸುಷ್ಮಾ ಚಕ್ರೆ
|

Updated on: Sep 07, 2026 | 6:10 PM

Share

ಭಾಗಪತ್, ಸೆಪ್ಟೆಂಬರ್ 7: ಉತ್ತರ ಪ್ರದೇಶದ ಭಾಗಪತ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಜಸ್ಥಾನದಿಂದ ಬುಡೌನ್‌ಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಪಿಕ್‌ಅಪ್ ವಾಹನವೊಂದು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 12 ಜನರು ಮೃತಪಟ್ಟಿದ್ದಾರೆ ಮತ್ತು 22 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ ಹಚ್ಚುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ಖೇಕ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಮಧ್ಯರಾತ್ರಿ ಸುಮಾರು 12.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಸುಮಾರು 32 ಪ್ರಯಾಣಿಕರಿದ್ದ ವಾಹನವು ಪಲ್ಟಿಯಾದ ಮಾಹಿತಿ ತಿಳಿಯುತ್ತಿದ್ದಂತೆಯೇ ಆ್ಯಂಬುಲೆನ್ಸ್ ಮತ್ತು ಖೇಕ್ರಾ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಕ್ಷಣವೇ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ಆರಂಭಿಸಿದರು. ಗಾಯಗೊಂಡವರನ್ನು ಖೇಕ್ರಾ ಮತ್ತು ಭಾಗಪತ್‌ನ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಹಾಗೂ ಭಾಗಪತ್ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಹಾಗೂ ವಿಶೇಷ ಚಿಕಿತ್ಸೆಗೆ ಉನ್ನತ ವೈದ್ಯಕೀಯ ಕೇಂದ್ರಗಳಿಗೆ ರವಾನಿಸಲಾಗಿದೆ.

ಇದನ್ನೂ ಓದಿ: ಅಡುಗೆ ಮಾಡದೆ ಡ್ಯಾನ್ಸ್ ಕ್ಲಾಸ್‌ಗೆ ಹೋಗುತ್ತೇನೆಂದ ಪತ್ನಿಗೆ ಮಕ್ಕಳ ಎದುರೇ ಇರಿದು ಕೊಂದ ಗಂಡ!

ಅಪಘಾತದ ವೇಳೆ ಹೆಚ್ಚಿನ ಪ್ರಯಾಣಿಕರು ನಿದ್ರೆಯಲ್ಲಿದ್ದರು. “ದಿಢೀರನೆ ಭಾರಿ ಸದ್ದು ಕೇಳಿಸಿತು ಮತ್ತು ವಾಹನ ಪಲ್ಟಿಯಾಯಿತು. ತಕ್ಷಣವೇ ಸ್ಥಳದಲ್ಲಿದ್ದವರ ಚೀರಾಟ ಮುಗಿಲು ಮುಟ್ಟಿತು” ಎಂದು ಗಾಯಗೊಂಡ ಪ್ರಯಾಣಿಕ ಕುಂವರ್ ಪಾಲ್ ಅಪಘಾತದ ಘಟನೆಯ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್