ಪ್ರಧಾನಿ ನರೇಂದ್ರ ಮೋದಿಗೆ 12 ಪ್ರತಿಪಕ್ಷ ನಾಯಕರಿಂದ ಪತ್ರ; ಕೊವಿಡ್ 19 ವಿರುದ್ಧ ಹೋರಾಟಕ್ಕೆ ಹಲವು ಸಲಹೆಗಳು

ಇದೀಗ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಮಂತ್ರಿ ಎಚ್​.ಡಿ.ದೇವೇಗೌಡ, ಎನ್​ಸಿಪಿ ನಾಯಕ ಶರದ್ ಪವಾರ್​ ಸೇರಿ ಒಟ್ಟು 12 ಪ್ರತಿಪಕ್ಷಗಳ ನಾಯಕರ ಸಹಿ ಇರುವ ಪತ್ರ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳುಹಿಸಲ್ಪಟ್ಟಿದೆ.

ಪ್ರಧಾನಿ ನರೇಂದ್ರ ಮೋದಿಗೆ 12 ಪ್ರತಿಪಕ್ಷ ನಾಯಕರಿಂದ ಪತ್ರ; ಕೊವಿಡ್ 19 ವಿರುದ್ಧ ಹೋರಾಟಕ್ಕೆ ಹಲವು ಸಲಹೆಗಳು
ನರೇಂದ್ರ ಮೋದಿ
Follow us
Lakshmi Hegde
|

Updated on: May 12, 2021 | 8:34 PM

ದೆಹಲಿ: ದೇಶದಲ್ಲಿ ಕೊವಿಡ್ 19 ವಿರುದ್ಧ ಹೋರಾಟಕ್ಕೆ ಹಲವು ಕ್ರಮಗಳನ್ನು ಸೂಚಿಸಿ, ಒಟ್ಟು 12 ವಿವಿಧ ಪ್ರತಿಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಜೋರಾಗಿಯೇ ಇದೆ. ಕೊವಿಡ್ ನಿಯಂತ್ರಣ, ಪರಿಹಾರಕ್ಕಾಗಿ ಕೇಂದ್ರ ಸರ್ಕಾರ, ಆಯಾ ರಾಜ್ಯಸರ್ಕಾರಗಳು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ದಿನೇದಿನೆ ದಾಖಲಾಗುವ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.

ಇದೀಗ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಮಂತ್ರಿ ಎಚ್​.ಡಿ.ದೇವೇಗೌಡ, ಎನ್​ಸಿಪಿ ನಾಯಕ ಶರದ್ ಪವಾರ್​ ಸೇರಿ ಒಟ್ಟು 12 ಪ್ರತಿಪಕ್ಷಗಳ ನಾಯಕರ ಸಹಿ ಇರುವ ಪತ್ರ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳುಹಿಸಲ್ಪಟ್ಟಿದೆ. ಕೊವಿಡ್​ ವಿರುದ್ಧ ಹೋರಾಟಕ್ಕೆ 9 ಸಲಹೆಗಳನ್ನು ನೀಡಲಾಗಿದೆ. ಹೀಗೆ ನೀಡಲಾದ ಸಲಹೆಯಲ್ಲಿ ಮೊದಲು ನೀಡಿದ್ದು ಉಚಿತವಾಗಿ ಲಸಿಕೆ ವಿತರಣೆಯಾಗಬೇಕು ಎಂಬುದಾಗಿದೆ. ಕೇಂದ್ರಸರ್ಕಾರವೇ ಲಸಿಕೆ ಖರೀದಿ ಮಾಡಿ, ದೇಶಾದ್ಯಂತ ಎಲ್ಲರಿಗೂ ಉಚಿತವಾಗಿ, ಆದಷ್ಟು ಬೇಗ ಲಸಿಕೆ ನೀಡಬೇಕು. ದೇಶೀಯ ಕಂಪನಿಗಳಿಂದಾಗಲಿ, ಬೇರೆ ದೇಶಗಳ ಕಂಪನಿಗಳಿಂದಾಗಲೀ ನೀವೇ (ಕೇಂದ್ರ ಸರ್ಕಾರ) ಲಸಿಕೆ ಖರೀದಿ ಮಾಡಿ ಎಂದು ಪತ್ರದಲ್ಲಿ ಹೇಳಲಾಗಿದೆ.

ಹಾಗೇ, ಇನ್ನೂ ಮುಂದುವರಿಯುತ್ತಿರುವ ಕೇಂದ್ರ ವಿಸ್ತಾ ಯೋಜನೆಯನ್ನು ಇಲ್ಲಿಗೇ ನಿಲ್ಲಿಸಿ, ಆ ಹಣವನ್ನು ಲಸಿಕೆ, ಔಷಧ, ಆಕ್ಸಿಜನ್​ ಖರೀದಿಗಾಗಿ ಬಳಸಿ ಎಂದೂ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ಇದನ್ನು ಹಿಂದಿನಿಂದಲೂ ಪ್ರತಿಪಕ್ಷಗಳು ಹೇಳಿಕೊಂಡೇಬಂದಿವೆ. ದೇಶೀಯವಾಗಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ಮುಂದಾಗಿ. ಇದಕ್ಕಾಗಿ ಲೈಸೆನ್ಸ್ ಪಡೆಯುವಂತೆ ಮತ್ತಷ್ಟು ಕಂಪನಿಗಳಿಗೆ ಮನವಿ ಮಾಡಿ. ಕೊವಿಡ್​ನಿಂದ ಉದ್ಯೋಗ ಕಳೆದುಕೊಂಡವರಿಗೆ ತಿಂಗಳಿಗೆ 6000 ರೂಪಾಯಿಯಾದರೂ ಕೊಡಿ ಎಂದೂ ಪ್ರತಿಪಕ್ಷ ನಾಯಕರು ಹೇಳಿದ್ದಾರೆ.

ಈ ಮಧ್ಯೆ, ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಮೂಲಕ ಕೊವಿಡ್ 19 ಕಾಲದಲ್ಲಿ ರೈತರು ನೆಮ್ಮದಿಯಿಂದ ಜೀವನ ನಡೆಸಲು ಅವಕಾಶ ಮಾಡಿಕೊಡಿ ಎಂದು ಜಮ್ಮುಕಾಶ್ಮೀರದ ಸಿಎಂ ಫಾರೂಕ್ ಅಬ್ದುಲ್ಲಾ, ಎಸ್​ಪಿ ಮುಖ್ಯಸ್ಥ ಅಖಿಲೇಶ್ ಯಾದವ್​, ಆರ್​ಜೆಡಿ ಮುಖ್ಯಸ್ಥ ಡಿ.ರಾಜ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಆರೋಗ್ಯ ಕಾರ್ಯಕರ್ತರ ಸಂಖ್ಯೆ 95 ಲಕ್ಷಕ್ಕಿಂತಲೂ ಹೆಚ್ಚು: ಕೇಂದ್ರ ಸಚಿವ ಹರ್ಷವರ್ಧನ್

12 opposition leaders write to PM Narendra Modi And give suggestions to Battle with covid 19

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ