ಮೇ 26ರಂದು ಕರಾಳ ದಿನ ಆಚರಿಸಲಿರುವ ಸಂಯುಕ್ತ ಕಿಸಾನ್​ ಮೋರ್ಚಾ ರೈತ ಸಂಘಟನೆಗೆ 12 ಪ್ರತಿಪಕ್ಷಗಳ ಬೆಂಬಲ..

|

Updated on: May 23, 2021 | 8:49 PM

ಮೇ 26ಕ್ಕೆ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ಪ್ರಾರಂಭಿಸಿ ಆರು ತಿಂಗಳು ಕಳೆಯುತ್ತದೆ. ಅಷ್ಟೇ ಅಲ್ಲ, ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದು ಸರಿಯಾಗಿ ಏಳುವರ್ಷ ಕಳೆಯುತ್ತದೆ.

ಮೇ 26ರಂದು ಕರಾಳ ದಿನ ಆಚರಿಸಲಿರುವ ಸಂಯುಕ್ತ ಕಿಸಾನ್​ ಮೋರ್ಚಾ ರೈತ ಸಂಘಟನೆಗೆ 12 ಪ್ರತಿಪಕ್ಷಗಳ ಬೆಂಬಲ..
ಪ್ರಾತಿನಿಧಿಕ ಚಿತ್ರ
Follow us on

ಕೊರೊನಾ ವೈರಸ್ ಉಲ್ಬಣದ ಮಧ್ಯೆಯೂ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ರೈತರಿಗೆ ದೇಶದ 12 ಪ್ರಮುಖ ಪ್ರತಿಪಕ್ಷಗಳು ಬೆಂಬಲ ಸೂಚಿಸಿ ಹೇಳಿಕೆ ಬಿಡುಗಡೆ ಮಾಡಿವೆ. ಹಾಗೆ ಮೇ 26ರಂದು ಸಂಯುಕ್ತ ಕಿಸಾನ್ ಮೋರ್ಚಾ ಕರಾಳ ದಿನ ಆಚರಿಸಲು ನಿರ್ಧಾರ ಮಾಡಿರುವುದಕ್ಕೂ ನಮ್ಮ ಬೆಂಬಲವಿದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಈ 12 ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕೊವಿಡ್​ 19 ನಿಯಂತ್ರಣಕ್ಕಾಗಿ 9 ಸಲಹೆಗಳನ್ನು ನೀಡಿದ್ದವು. ಇದೀಗ ಪ್ರತಿಭಟನಾ ನಿರತ ರೈತರಿಗೆ ತಮ್ಮ ಬೆಂಬಲ ನೀಡುವುದಾಗಿ ತಿಳಿಸಿವೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ನಮ್ಮ ದೇಶದ ಲಕ್ಷಾಂತರ ಅನ್ನದಾತರು ಕಳೆದ ಆರು ತಿಂಗಳುಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಕೂಡಲೇ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ನಾವು ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಲಿಖಿತ ಹೇಳಿಕೆಯಲ್ಲಿ ಕಾಂಗ್ರೆಸ್​ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಎಚ್​. ಡಿ.ದೇವೇಗೌಡ, ಮಮತಾ ಬ್ಯಾನರ್ಜಿ, ಉದ್ಧವ್​ ಠಾಕ್ರೆ, ಎಂ.ಕೆ.ಸ್ಟಾಲಿನ್ ಸೇರಿ ಹಲವು ಪ್ರಮುಖ ನಾಯಕರ ಸಹಿ ಇದೆ.

ಮೇ 26ಕ್ಕೆ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ಪ್ರಾರಂಭಿಸಿ ಆರು ತಿಂಗಳು ಕಳೆಯುತ್ತದೆ. ಅಷ್ಟೇ ಅಲ್ಲ, ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದು ಸರಿಯಾಗಿ ಏಳುವರ್ಷ ಕಳೆಯುತ್ತದೆ. ಹೀಗಾಗಿ ಮೇ 26ರಂದು ಕರಾಳ ದಿನ ಆಚರಿಸಲು ನಿರ್ಧಾರ ಮಾಡಿದ್ದಾರೆ. ಅಂದು ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿಯೂ ಹೇಳಿದ್ದಾರೆ. ಈ ಕರಾಳದಿನಕ್ಕೆ 12 ಪ್ರತಿಪಕ್ಷಗಳೂ ಬೆಂಬಲ ಸೂಚಿಸಿವೆ.

ಇದನ್ನೂ ಓದಿ: ವೈದ್ಯರ ನಡಿಗೆ ಹಳ್ಳಿ ಕಡೆಗೆ: ಕರ್ನಾಟಕ ಸರ್ಕಾರದ ಬಿಡುಗಡೆಗೊಳಿಸಿದ ಮಾರ್ಗಸೂಚಿಯ ವಿವರ ಇಲ್ಲಿದೆ