ಶಬರಿಮಲೆ ಪಾದಯಾತ್ರೆ ವೇಳೆ ಕುಸಿದುಬಿದ್ದು 12 ವರ್ಷದ ಬಾಲಕಿ ಸಾವು

|

Updated on: Dec 10, 2023 | 11:07 AM

ಶಬರಿಮಲೆ(Sabarimala)ಯ ಅಯ್ಯಪ್ಪ ದೇಗುಲಕ್ಕೆ ಕೈಗೊಂಡಿದ್ದ ಪಾದಯಾತ್ರೆಯಲ್ಲಿ ತಮಿಳುನಾಡಿನ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ತಮಿಳುನಾಡು ಮೂಲದ ಪದ್ಮಶ್ರೀ (12) ಶಬರಿಮಲೆ ಬೆಟ್ಟದ ಮೇಲಿನ ದೇಗುಲಕ್ಕೆ ಟ್ರೆಕ್ಕಿಂಗ್ ಮಾಡುತ್ತಿರುವಾಗ ಅಪ್ಪಾಚಿಮೇಡು ಎಂಬಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಶಬರಿಮಲೆ ಪಾದಯಾತ್ರೆ ವೇಳೆ ಕುಸಿದುಬಿದ್ದು 12 ವರ್ಷದ ಬಾಲಕಿ ಸಾವು
ಸಾವು-ಸಾಂದರ್ಭಿಕ ಚಿತ್ರ
Image Credit source: India Today
Follow us on

ಶಬರಿಮಲೆ(Sabarimala)ಯ ಅಯ್ಯಪ್ಪ ದೇಗುಲಕ್ಕೆ ಕೈಗೊಂಡಿದ್ದ ಪಾದಯಾತ್ರೆಯಲ್ಲಿ ತಮಿಳುನಾಡಿನ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ತಮಿಳುನಾಡು ಮೂಲದ ಪದ್ಮಶ್ರೀ (12) ಶಬರಿಮಲೆ ಬೆಟ್ಟದ ಮೇಲಿನ ದೇಗುಲಕ್ಕೆ ಟ್ರೆಕ್ಕಿಂಗ್ ಮಾಡುತ್ತಿರುವಾಗ ಅಪ್ಪಾಚಿಮೇಡು ಎಂಬಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ಪಾಚಿಮೇಡುವಿನ ಹೃದ್ರೋಗ ಚಿಕಿತ್ಸಾ ಕೇಂದ್ರದಲ್ಲಿ ಆಕೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 4 ರಿಂದ 5 ಗಂಟೆಯ ನಡುವೆ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಪಂಬಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಕೆಗೆ ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿತ್ತು ಎಂಬುದು ತಿಳಿದುಬಂದಿದೆ.
ಬಾಲಕಿ ಮೂರು ವರ್ಷದಿಂದ ಹೃದ್ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಳು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಲೇ ಶಬರಿಮಲೆ ಏರಲು ನಿರ್ಧರಿಸಿದ್ದಳು.

ಶಬರಿಮಲೆಯಲ್ಲಿ ಕುಸಿದುಬಿದ್ದು ಸಹಾಯಕ ಅರ್ಚಕ ಸಾವು
ಶಬರಿಮಲೆಯದಲ್ಲಿ ಸಹಾಯಕ ಅರ್ಚಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಡಿಸೆಂಬರ್ 7 ರಂದು ನಡೆದಿದೆ. ಮೃತರನ್ನು ತಮಿಳುನಾಡಿನ ಕುಂಭಕೋಣಂನ ರಾಮ್ ಕುಮಾರ್ (43) ಎಂದು ಗುರಿತಿಸಲಾಗಿದೆ.

ಬೆಳಗ್ಗೆ ಕೋಣೆಯಲ್ಲಿ ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಇವರನ್ನು ಸನ್ನಿಧಾನಂ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲಾಗಲಿಲ್ಲ. ಘಟನೆ ಹಿನ್ನೆಲೆಯಲ್ಲಿ ಇಂದು 20 ನಿಮಿಷ ತಡವಾಗಿ ದೇವಸ್ಥಾನ ತೆರೆಯಲಾಗಿದೆ. ಶುದ್ಧೀಕರಣದ ನಂತರ ದೇವಾಲಯವನ್ನು ತೆರೆಯಲಾಗಿದೆ. ದೇವಸ್ಥಾನ ತೆರೆಯಲು ವಿಳಂಬವಾದ ಕಾರಣ ಯಾತ್ರಾರ್ಥಿಗಳು ಬಹಳ ಹೊತ್ತು ಕಾಯಬೇಕಾಯಿತು.

ಪುರಷರಷ್ಟೇ ಅಲ್ಲದೇ ಈ ಬಾರಿ ಶಬರಿಮಲೆಗೆ ಬರುವ ಮಹಿಳೆಯರ ಸಂಖ್ಯೆ ಕೂಡ ಹೆಚ್ಚಾಗಿದೆ. ಪ್ರತಿ ವರ್ಷಕ್ಕಿಂತ ಈ ಬಾರಿ ಶಬರಿಮಲೆಯಕ್ಕೆ ಬರುವ ಮಹಿಳೆಯರ ಸಂಖ್ಯೆ ಶೇಕಡ 20ರಷ್ಟು ಹೆಚ್ಚಾಗಿದೆ ಎಂದು ದೇವಸ್ವಂ ಮಂಡಳಿ ಮಾಹಿತಿ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ