ಪಾಕಿಸ್ತಾನದ ಮೂಲಕ ಭಾರತಕ್ಕೆ ಸಾಗಿಸುತ್ತಿದ್ದ 1,200 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ; 6 ಇರಾನ್ ಪ್ರಜೆಗಳ ಬಂಧನ

ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗುರುವಾರ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಿ 6 ಇರಾನ್ ಪ್ರಜೆಗಳೊಂದಿಗೆ ವಶಪಡಿಸಿಕೊಂಡ ಸರಕುಗಳನ್ನು ಕೇರಳದ ಕೊಚ್ಚಿಗೆ ತಂದಿದೆ

ಪಾಕಿಸ್ತಾನದ ಮೂಲಕ ಭಾರತಕ್ಕೆ ಸಾಗಿಸುತ್ತಿದ್ದ 1,200 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ; 6 ಇರಾನ್ ಪ್ರಜೆಗಳ ಬಂಧನ
ಹೆರಾಯಿನ್ ಅನ್ನು ಸಾಗಿಸುತ್ತಿದ್ದ ಹಡಗು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 08, 2022 | 1:32 PM

ಕೊಚ್ಚಿ: ಅಫ್ಘಾನಿಸ್ತಾನದಲ್ಲಿ (Afghanistan) ತಯಾರಿಸಿದ ಹೆರಾಯಿನ್ ಅನ್ನು ಇರಾನ್ ಮೀನುಗಾರಿಕಾ ಹಡಗಿನಲ್ಲಿ ತುಂಬಿಕೊಂಡು ಪಾಕಿಸ್ತಾನ (Pakistan) ಮಾರ್ಗವಾಗಿ ಭಾರತಕ್ಕೆ ಸಾಗಿಸಲಾಗುತ್ತಿತ್ತು. ಈ ಮಾದಕವಸ್ತುವನ್ನು ಭಾರತ ಮತ್ತು ಶ್ರೀಲಂಕಾದಲ್ಲಿ ಮಾರಾಟ ಮಾಡುವ ಪ್ರಯತ್ನ ನಡೆದಿತ್ತು. ಆದರೆ, ಎನ್​ಸಿಬಿ (NCB) ಮತ್ತು ಭಾರತೀಯ ನೌಕಾಪಡೆ (Indian Navy) ಜಂಟಿ ಕಾರ್ಯಾಚರಣೆ ನಡೆಸಿ, 1,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಸುಮಾರು 200 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಇರಾನ್ ಪ್ರಜೆಗಳನ್ನು ಬಂಧಿಸಲಾಗಿದೆ.

ಅಫ್ಘಾನಿಸ್ತಾನದಲ್ಲಿ ತಯಾರಾದ 200 ಕೆಜಿ ಹೆರಾಯಿನ್ ಅನ್ನು ಮೊದಲು ಪಾಕಿಸ್ತಾನಕ್ಕೆ ತರಲಾಯಿತು. ಅಲ್ಲಿಂದ ಇರಾನ್ ಹಡಗಿನಲ್ಲಿ ಹಾಕಲಾಯಿತು. ಅದನ್ನು ಭಾರತ ಮತ್ತು ಶ್ರೀಲಂಕಾದಲ್ಲಿ ಮಾರಾಟ ಮಾಡಲು ಉದ್ದೇಶಿಸಲಾಗಿತ್ತು ಎಂದು ಭಾರತೀಯ ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಆ ಹಡಗನ್ನು ತಡೆದು 6 ಇರಾನ್ ಪ್ರಜೆಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಮೂವರು ಸ್ಮಗ್ಲರ್​​ಗಳನ್ನು ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು; 36 ಕೆಜಿ ಹೆರಾಯಿನ್​ ವಶ

ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗುರುವಾರ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಿ 6 ಇರಾನ್ ಪ್ರಜೆಗಳೊಂದಿಗೆ ವಶಪಡಿಸಿಕೊಂಡ ಸರಕುಗಳನ್ನು ಕೇರಳದ ಕೊಚ್ಚಿಗೆ ತಂದಿದೆ ಎಂದು ಎನ್‌ಸಿಬಿಯ ಸಂಜಯ್ ಕುಮಾರ್ ಸಿಂಗ್ ಹೇಳಿದ್ದಾರೆ. “ಕೆಲವು ಡ್ರಗ್ ಪ್ಯಾಕೆಟ್‌ಗಳು ‘ಸ್ಕಾರ್ಪಿಯನ್’ ಸೀಲ್ ಗುರುತುಗಳನ್ನು ಹೊಂದಿದ್ದರೆ, ಉಳಿದವು ‘ಡ್ರ್ಯಾಗನ್’ ಸೀಲ್ ಗುರುತುಗಳನ್ನು ಹೊಂದಿದ್ದವು.” ಎಂದು ಅವರು ತಿಳಿಸಿದ್ದಾರೆ.

ಇರಾನ್ ಹಡಗಿನಲ್ಲಿದ್ದ ವ್ಯಕ್ತಿಗಳು ಸಮುದ್ರಕ್ಕೆ ಹಾರಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಹಾಗೇ, ಹೆರಾಯಿನ್ ಅನ್ನು ನೀರಿನಲ್ಲಿ ಎಸೆಯಲು ಪ್ರಯತ್ನಿಸಿದರು ಎಂದು ಎನ್‌ಸಿಬಿ ಅಧಿಕಾರಿ ಹೇಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅರೇಬಿಯನ್ ಸಮುದ್ರ ಮತ್ತು ಹಿಂದೂ ಮಹಾಸಾಗರದ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ಅಫ್ಘಾನ್ ಹೆರಾಯಿನ್ ಸಾಗಾಟವು ಘಾತೀಯವಾಗಿ ಹೆಚ್ಚಾಗಿದೆ ಎಂದು NCB ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು