ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇಯಲ್ಲಿ ಅಪಘಾತ ಸಂಖ್ಯೆ ಏರಿಕೆ: ಲೋಕಸಭೆಯಲ್ಲಿ ಸಚಿವ ನಿತಿನ್ ಗಡ್ಗರಿ ಉತ್ತರ

ಸಂಚಾರಕ್ಕೆ ಮುಕ್ತವಾದಾಗಿನಿಂದ ಇಲ್ಲಿಯವರೆಗೆ ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇಯಲ್ಲಿ ಅಪಘಾತದಿಂದ 121 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇಯಲ್ಲಿ ಅಪಘಾತ ಸಂಖ್ಯೆ ಏರಿಕೆ: ಲೋಕಸಭೆಯಲ್ಲಿ ಸಚಿವ ನಿತಿನ್ ಗಡ್ಗರಿ ಉತ್ತರ
ಸಚಿವ ನಿತಿನ್​ ಗಡ್ಕರಿ
Follow us
|

Updated on: Jul 29, 2023 | 1:40 PM

ನವದೆಹಲಿ: ಸಂಚಾರಕ್ಕೆ ಮುಕ್ತವಾದಾಗಿನಿಂದ ಇಲ್ಲಿಯವರೆಗೆ ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇಯಲ್ಲಿ (Bengaluru-Mysore Expressway) ಅಪಘಾತದಿಂದ 121 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ (Nitin Gadkari) ಲೋಕಸಭೆಯಲ್ಲಿ (Lok Sabha) ತಿಳಿಸಿದ್ದಾರೆ. ಕಳೆದ ಏಳು ತಿಂಗಳಲ್ಲಿ 398 ಅಪಘಾತಗಳು ಸಂಭವಿಸಿವೆ. ಬೆಂಗಳೂರಿನಿಂದ ಮದ್ದೂರಿನ ನಡುವೆ ಅಪಘಾತದಿಂದ 59 ಜನರು ಮೃತರಾಗಿದ್ದರೇ, ಮದ್ದೂರಿನಿಂದ ಮೈಸೂರಿನ ನಡುವೆ 62 ಜನರು ನಿಧನರಾಗಿದ್ದಾರೆ ಎಂದು ತಿಳಿಸಿದರು.

ರಾಜ್ಯ ಪೊಲೀಸರು ನೀಡಿದ ಅಂಕಿ-ಅಂಶಗಳ ಪ್ರಕಾರ ಜೂನ್​ನಲ್ಲಿ ನಿಧನರಾದ 28 ಜನರು ಸೇರಿದಂತೆ 132 ಜನರು ನಿಧನರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಜಾರಿಗೆ ತಂದಿರವ ರಸ್ತೆ ಸುರಕ್ಷತಾ ಕ್ರಮಗಳ ಪ್ರಕಾರ ಹಾಗೂ ಇಂಡಿಯನ್​ ರೋಡ್​ ಕಾಂಗ್ರೆಸ್​ (IRC) ನಿಯಮಗಳ ಪ್ರಕಾರ ನಿಯಮಿತ ಅಂತರದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಜೊತೆಗೆ ಎಕ್ಸಪ್ರೆಸ್​ವೇಗೆ ಪ್ರವೇಶಿಸುವ ಮತ್ತು ಹೆದ್ದಾರಿಯಿಂದ ನಿರ್ಗಮಿಸುವ ಸ್ಥಳಗಳಲ್ಲಿ ಹೆಚ್ಚುವರಿ ಮಾಹಿತಿ ಫಲಕಗಳನ್ನು ಅಳವಡಿಸಲಾಗಿದೆ ಎಂದರು.

ಎಕ್ಸಪ್ರೆಸ್​​ವೇಯಲ್ಲಿನ ಎರಡು ವಿಭಾಗಗಳಿಗೆ ತಲಾ ಎರಡರಂತೆ ನಾಲ್ಕು ಹೆದ್ದಾರಿ ಗಸ್ತು ವಾಹನಗಳು ಕಾರ್ಯನಿರ್ವಹಿಸುತ್ತಿವೆ. ಅಲ್ಲದೇ ಓವರ್​​​ಹೆಡ್​​ ವೇರಿಯಬಲ್​ ಮೆಸೇಜ್​ ಸಹ್ನೆ (VMS), ಕ್ಯಾಮೆರಾಗಳನ್ನು ಅವಳವಡಿಸಲಾಗಿದೆ. ಇನ್ನು ದ್ವಿಚಕ್ರ, ತ್ರಿಚಕ್ರ, ಟ್ಯಾಕ್ಟರ್​ ಮತ್ತು ಮೋಟಾರು ರಹಿತ ವಾಹನಗಳನ್ನು ಎಕ್ಸಪ್ರೆಸ್​​ವೇನಲ್ಲಿ ನಿಷೇಧಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ AI ಕ್ಯಾಮೆರಾ: ಮಿತಿಗಿಂತ ಜಾಸ್ತಿ ವೇಗವಾಗಿ ವಾಹನ ಓಡಿಸಿದ್ರೆ ಬೀಳುತ್ತೆ ಫೈನ್..!

ಇನ್ನು ಜು.17 ರಿಂದ 20 ರವರೆಗೆ ಮೂರು ದಿನಗಳ ಕಾಲ ಕೇಂದ್ರ ರಸ್ತೆ ಸುರಕ್ಷ ಸಮಿತಿಯು ಅಪಘಾತ ನಡೆದ ಸ್ಥಳಗಳಗಳಿಗೆ ಭೇಟಿ ನೀಡಿ ಪರೀಶಿಸಿ, ತೆಗೆದುಕೊಳ್ಳಬೇಕಾಗದ ಅಗತ್ಯ ಕ್ರಮಗಳ ಬಗ್ಗೆ ವರದಿ ನೀಡಿದೆ. ಅಲ್ಲದೇ ರಾಜ್ಯ ಪೊಲೀಸ್​ ಇಲಾಖೆ ಮಿತಿಗಿಂತ ಅತಿ ವೇಗದಿಂದ ವಾಹನ ಚಲಾಯಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಅಧಿವೇಶನದಲ್ಲಿ ಹೇಳಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಎಕ್ಸ್‌ಪ್ರೆಸ್ ವೇಯಲ್ಲಿ ಸಂಚರಿಸುವ ಸವಾರರ ಸುರಕ್ಷತೆ ದೃಷ್ಠಿಯಿಂದ ತೆಗೆದುಕೊಂಡ ಕ್ರಮಗಳ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು ನಾಲ್ಕು ಆಂಬ್ಯುಲೆನ್ಸ್‌ಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ಹೆದ್ದಾರಿಯಲ್ಲಿ ನಿಯೋಜಿಸಲಾಗಿದೆ. ಹಾಗೇ ಟೋಲ್ ಪ್ಲಾಜಾಗಳಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಉತ್ತರಿಸಿದರು.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?