AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿ ಗೃಹದಲ್ಲಿ 20 ದಿನದಲ್ಲಿ 13 ಮಕ್ಕಳ ನಿಗೂಢ ಸಾವು

ದೆಹಲಿಯ ರೋಹಿಣಿಯಲ್ಲಿರುವ ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿಗೃಹದಲ್ಲಿ ಕಳೆದ 20 ದಿನಗಳಲ್ಲಿ 13 ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ದೆಹಲಿ ಸರ್ಕಾರ ಈ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ಈ ಕುರಿತು ಸಚಿವೆ ಅತಿಶಿ ಮಾಹಿತಿ ನೀಡಿದ್ದಾರೆ, ಆರೋಗ್ಯ ಸಂಬಂಧಿ ಸಮಸ್ಯೆಗಳು ಹಾಗೂ ಅಪೌಷ್ಟಿಕತೆಯಿಂದ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಮಕ್ಕಳಿಗೆ ಸರಿಯಾದ ಸೌಲಭ್ಯಗಳು ಸಿಗುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದು ಅತ್ಯಂತ ಗಂಭೀರವಾದ ಸಮಸ್ಯೆಯಾಗಿದೆ ಎಂದು ಅತಿಶಿ ಹೇಳಿದ್ದಾರೆ, ಈ ಬಗ್ಗೆ […]

ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿ ಗೃಹದಲ್ಲಿ 20 ದಿನದಲ್ಲಿ 13 ಮಕ್ಕಳ ನಿಗೂಢ ಸಾವು
ನಯನಾ ರಾಜೀವ್
|

Updated on: Aug 02, 2024 | 2:49 PM

Share

ದೆಹಲಿಯ ರೋಹಿಣಿಯಲ್ಲಿರುವ ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿಗೃಹದಲ್ಲಿ ಕಳೆದ 20 ದಿನಗಳಲ್ಲಿ 13 ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ದೆಹಲಿ ಸರ್ಕಾರ ಈ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ಈ ಕುರಿತು ಸಚಿವೆ ಅತಿಶಿ ಮಾಹಿತಿ ನೀಡಿದ್ದಾರೆ, ಆರೋಗ್ಯ ಸಂಬಂಧಿ ಸಮಸ್ಯೆಗಳು ಹಾಗೂ ಅಪೌಷ್ಟಿಕತೆಯಿಂದ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಮಕ್ಕಳಿಗೆ ಸರಿಯಾದ ಸೌಲಭ್ಯಗಳು ಸಿಗುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಇದು ಅತ್ಯಂತ ಗಂಭೀರವಾದ ಸಮಸ್ಯೆಯಾಗಿದೆ ಎಂದು ಅತಿಶಿ ಹೇಳಿದ್ದಾರೆ, ಈ ಬಗ್ಗೆ ತಕ್ಷಣವೇ ಮ್ಯಾಜಿಸ್ಟ್ರೇಟ್ ತನಿಖೆ ಆರಂಭಿಸಿ 48 ಗಂಟೆಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ರೋಹಿಣಿಯಲ್ಲಿರುವ ವಸತಿಗೃಹಕ್ಕೆ ಸತ್ಯಶೋಧನಾ ತಂಡವನ್ನು ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ. ಈ ತಂಡವು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿ ಈ ಸಾವಿಗೆ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತದೆ. ರಾತ್ರಿ ಶೆಲ್ಟರ್​ ಆಡಿಟ್ ಕೂಡ ಮಾಡಲಿದ್ದೇವೆ ಎಂದರು.

ಮತ್ತಷ್ಟು ಓದಿ: ಮನೆಗೆ ನುಗ್ಗಿ ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ

ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಇದುವರೆಗೆ 27 ಮಕ್ಕಳು ಸಾವನ್ನಪ್ಪಿದ್ದಾರೆ. ಈ ಅಂಕಿ ಅಂಶ ಕಳೆದ ವರ್ಷಕ್ಕಿಂತ ಹೆಚ್ಚು. ಕುಡಿಯುವ ನೀರಿನ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ನಿಜವಾದ ಕಾರಣ ತಿಳಿಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ