AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಪಲ್ಘಾರ್ ಹೆದ್ದಾರಿಯಲ್ಲಿ ಭೀಕರ ಅಪಘಾತ; 13 ಜನ ಸಾವು, ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ

ಮಹಾರಾಷ್ಟ್ರದ ಪಲ್ಘಾರ್‌ನಲ್ಲಿ ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ಟೆಂಪೋ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮದಿಂದ 13 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಮದುವೆ ಸಮಾರಂಭಕ್ಕೆ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋ ಭೀಕರ ಅಪಘಾತಕ್ಕೆ ಸಿಲುಕಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಸುಮಾರು 20 ಜನರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ಸರ್ಕಾರ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದೆ.

ಮಹಾರಾಷ್ಟ್ರದ ಪಲ್ಘಾರ್ ಹೆದ್ದಾರಿಯಲ್ಲಿ ಭೀಕರ ಅಪಘಾತ; 13 ಜನ ಸಾವು, ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ
Palghar Highway Accident
ಸುಷ್ಮಾ ಚಕ್ರೆ
|

Updated on: May 18, 2026 | 10:14 PM

Share

ಮುಂಬೈ, ಮೇ 18: ಮಹಾರಾಷ್ಟ್ರದ ಪಲ್ಘಾರ್‌ನಲ್ಲಿ ಇಂದು ಭೀಕರ ಅಪಘಾತ (Accident) ಸಂಭವಿಸಿದೆ. ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಮದುವೆಗೆ ಹೋಗುತ್ತಿದ್ದ ಮತ್ತೊಂದು ಸಣ್ಣ ಟ್ರಕ್‌ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ 13 ಜನರು ಸಾವನ್ನಪ್ಪಿದ್ದಾರೆ. ಕಾಸಾದ ಪ್ರದೇಶ ಪೊಲೀಸರ ಪ್ರಕಾರ, 40ಕ್ಕೂ ಹೆಚ್ಚು ಜನರು ಈ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದರು.

ಇಂದು ಬೆಳಿಗ್ಗೆ 4 ಗಂಟೆಗೆ ಕಂಟೇನರ್ ಅಪಘಾತ ಸಂಭವಿಸಿ, ಟ್ರಕ್ ನಜ್ಜುಗುಜ್ಜಾಗಿದೆ. ಎರಡೂ ವಾಹನಗಳು ಪಲ್ಟಿಯಾದ ಕಾರಣದಿಂದ ಅನೇಕ ಪ್ರಯಾಣಿಕರು ಅಡಿಗೆ ಸಿಲುಕಿಕೊಂಡರು. ಈ ಘಟನೆಯ ನಂತರ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿದರು. ಸುಮಾರು 25 ಜನರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಐಚರ್ ಟೆಂಪೋ ಸುಮಾರು 30ರಿಂದ 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಅವರು ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಸಂಜೆ 4 ಗಂಟೆ ಸುಮಾರಿಗೆ ಟೆಂಪೋ ಮುಂಬೈ-ಗುಜರಾತ್ ಮಾರ್ಗದಲ್ಲಿ ಚಲಿಸುತ್ತಿದ್ದಾಗ ಟ್ರಕ್ ಟೆಂಪೋದ ಎಡಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಎಸಿ ಹಾಕೊಂಡು ಮಗಿದ್ದಲ್ಲೇ ವ್ಯಕ್ತಿ ಸಾವು; ಅಪಘಾತದಲ್ಲಿ ತಾಯಿ-ಮಗಳು ದುರ್ಮರಣ

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ಘೋಷಿಸಿದ್ದಾರೆ. ಗಾಯಗೊಂಡವರಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ