13 ವರ್ಷ ಹಳೆಯ ಪ್ರಕರಣ: ಲಾಲೂ ಪ್ರಸಾದ್ ಯಾದವ್​ಗೆ ದಂಡ ವಿಧಿಸಿದ ಕೋರ್ಟ್

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂಪ್ರಸಾದ್ ಯಾದವ್​ಗೆ ಜಾರ್ಖಂಡ್​ನ ಪಲಾಮು ವಿಶೇಷ ನ್ಯಾಯಾಲಯ ಬುಧವಾರ ದಂಡ ವಿಧಿಸಿದೆ.

13 ವರ್ಷ ಹಳೆಯ ಪ್ರಕರಣ: ಲಾಲೂ ಪ್ರಸಾದ್ ಯಾದವ್​ಗೆ ದಂಡ ವಿಧಿಸಿದ ಕೋರ್ಟ್
Lalu Prasad Yadav
Edited By:

Updated on: Jun 08, 2022 | 3:30 PM

ರಾಂಚಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂಪ್ರಸಾದ್ ಯಾದವ್​ಗೆ ಜಾರ್ಖಂಡ್​ನ ಪಲಾಮು ವಿಶೇಷ ನ್ಯಾಯಾಲಯ ಬುಧವಾರ ದಂಡ ವಿಧಿಸಿದೆ. 2009ರಲ್ಲಿ ಅಂದರೆ 13 ವರ್ಷಗಳ ಹಿಂದೆ ಲಾಲೂಪ್ರಸಾದ್ ಯಾದವ್ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದರು. ಇದೀಗ ವಿಶೇಷ ನ್ಯಾಯಾಲಯವು ಈ ಪ್ರಕರಣದ ತೀರ್ಪು ನೀಡಿದ್ದು, 6 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

2009ರಲ್ಲಿ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಪ್ರಕರಣದಲ್ಲಿ ಜಾರ್ಖಂಡ್ ನ ಕೋರ್ಟ್​ಗೆ ಹಾಜರಾಗಲು ಲಾಲೂ ಪ್ರಸಾದ್ ಯಾದವ್ ಅವರು ಒಂದು ದಿನದ ಮುಮಚಿತವಾಗಿಯೇ ರಾಂಚಿಗೆ ಆಗಮಿಸಿದ್ದರು ಎಂದು ವರದಿಯಾಗಿದೆ.

ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, 6,000 ರೂಪಾಯಿ ದಂಡ ವಿಧಿಸಿ, ಅರ್ಜಿ ಇತ್ಯರ್ಥಗೊಂಡಿದ್ದು, ಇನ್ಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ಗೆ ಹಾಜರಾಗಬೇಕಾದ ಅಗತ್ಯವಿಲ್ಲ ಎಂದು ಯಾದವ್ ಪರ ವಕೀಲರಾದ ಧೀರೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಪ್ರಕರಣದ ತೀರ್ಪು ಬಂದ ಬಳಿಕ ಅವರು ಪಲಾಮುವಿನಿಂದ ಪಾಟ್ನಾಕ್ಕೆ ತೆರಳಿದ್ದಾರೆ ಎನ್ನುವ ವಿಷಯ ತಿಳಿದುಬಂದಿದೆ. ಕಳೆದ ತಿಂಗಳು ಸಿಬಿಐ ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್, ಪತ್ನಿ ಹಾಗೂ ಪುತ್ರಿ, ಇತರರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.

ಲಾಲೂ ಪ್ರಸಾದ್ ಯಾದವ್ 2004ರಿಂದ 2009ರವರೆಗೆ ರೈಲ್ವೆ ಖಾತೆ ಸಚಿವರಾಗಿದ್ದಾಗ ಭ್ರಷ್ಟಾಚಾರ ನಡೆದಿದೆ ಎಂಬುದು ತಿಳಿದುಬಂದಿದೆ. ಲಾಲೂ ಪ್ರಸಾದ್ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಹೊರಗಿದ್ದಾರೆ.

3 ವರ್ಷದ ಲಾಲೂ ಪ್ರಸಾದ್ ಯಾದವ್ ಅವರು ಡೊರಾಂಡಾ ಖಜಾನೆಯಿಂದ 139 ಕೋಟಿ ರೂ.ಗೂ ಹೆಚ್ಚು ಹಣವನ್ನು ದುರುಪಯೋಗಪಡಿಸಿಕೊಂಡಿದ್ದರು. ಮೇವು ಹಗರಣ ಪ್ರಕರಣದಲ್ಲಿ ಇದೇ ಫೆಬ್ರವರಿಯಲ್ಲಿ ಸಿಬಿಐ ನ್ಯಾಯಾಲಯ ಅವರಿಗೆ ಜೈಲು ಶಿಕ್ಷೆ ವಿಧಿಸಿತ್ತು.

ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯವು ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂ. ದಂಡ ವಿಧಿಸಿತ್ತು.

ಮೇವು ಹಗರಣ ನಡೆದ ಅವಧಿಯಲ್ಲಿ ಲಾಲೂ ಪ್ರಸಾದ್ ಯಾದವ್ ಮುಖ್ಯಮಂತ್ರಿಯಾಗಿದ್ದರು ಹಾಗೂ ಬಿಹಾರದ ಹಣಕಾಸು ಖಾತೆ ನಿರ್ವಹಿಸುತ್ತಿದ್ದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ