ಹಾಲಿ, ಮಾಜಿ ಶಾಸಕರು ಮತ್ತು ರಾಜಕಾರಣಿಗಳ ವಿರುದ್ಧ 132 ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲು

Money Laundering Cases: ಹಾಲಿ ಮತ್ತು ಮಾಜಿ ಶಾಸಕರು, ರಾಜಕಾರಣಿಗಳ ವಿರುದ್ಧ 132 ಅಕ್ರಮ ಹಣ ವರ್ಗಾವಣೆ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರದ ಭಾಗವಾಗಿ ಜಾರಿ ನಿರ್ದೇಶನಾಲಯದ ಅಂಕಿಅಂಶಗಳ ಮಾಹಿತಿ ನೀಡಿದ್ದಾರೆ.

ಹಾಲಿ, ಮಾಜಿ ಶಾಸಕರು ಮತ್ತು ರಾಜಕಾರಣಿಗಳ ವಿರುದ್ಧ 132 ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲು
Parliament
Follow us
|

Updated on: Aug 06, 2024 | 10:30 PM

ನವದೆಹಲಿ: ಕಳೆದ 6 ವರ್ಷಗಳಲ್ಲಿ ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಮತ್ತು ರಾಜಕೀಯ ಮುಖಂಡರ ವಿರುದ್ಧ ಒಟ್ಟು 132 ಅಕ್ರಮ ಹಣ ವರ್ಗಾವಣೆ ಪ್ರಕರಣಗಳು ದಾಖಲಾಗಿವೆ ಎಂದು ಇಂದು ಸಂಸತ್ತಿನಲ್ಲಿ ಸರ್ಕಾರದ ಹೇಳಿಕೆ ತಿಳಿಸಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ಈ ಮಾಹಿತಿಯನ್ನು ಒದಗಿಸಿದ್ದಾರೆ. ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಜಾರಿ ಪ್ರಕರಣದ ಮಾಹಿತಿ ವರದಿಗಳನ್ನು (ಇಸಿಐಆರ್) ಅವರು ವಿವರಿಸಿದ್ದಾರೆ.

2019ರಿಂದ ಜುಲೈ 31ರವರೆಗಿನ ಇಡಿ ಪ್ರಕರಣಗಳು:

ಹಾಲಿ ಮತ್ತು ಮಾಜಿ ಸಂಸದರು, ಶಾಸಕರು, ಎಮ್‌ಎಲ್‌ಸಿಗಳು, ರಾಜಕೀಯ ಮುಖಂಡರು ಮತ್ತು ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಂಡಿರುವ ವ್ಯಕ್ತಿಗಳ ವಿರುದ್ಧ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಲಾದ ಜಾರಿ ಪ್ರಕರಣದ ಮಾಹಿತಿ ವರದಿಗಳ (ಇಸಿಐಆರ್) 2019ರ ಜನವರಿ 1ರಿಂದ ಈ ವರ್ಷ ಜುಲೈ 31ರವರೆಗಿನ ವಿವರವನ್ನು ಅವರು ಒದಗಿಸಿದ್ದಾರೆ.

ಇದನ್ನೂ ಓದಿ: Bangladesh Crisis: ಬಾಂಗ್ಲಾದೇಶದ ಹಿಂಸಾಚಾರದ ಬಗ್ಗೆ ಪ್ರಧಾನಿ ನಿವಾಸದಲ್ಲಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

ಸಚಿವರು ನೀಡಿರುವ ಉತ್ತರದ ಪ್ರಕಾರ, 2019ರಲ್ಲಿ 15, 2020ರಲ್ಲಿ 28, 2021ರಲ್ಲಿ 26, 2022ರಲ್ಲಿ 34, 2023ರಲ್ಲಿ 26 ಮತ್ತು 2024ರಲ್ಲಿ 3 (ಜುಲೈ 31 ರವರೆಗೆ) ಪ್ರಕರಣಗಳನ್ನು ದಾಖಲಿಸಲಾಗಿದೆ. ಇವುಗಳಲ್ಲಿ, ಮೂರು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗಳು ಮುಕ್ತಾಯಗೊಂಡಿವೆ.

ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರದ ಭಾಗವಾಗಿ ಜಾರಿ ನಿರ್ದೇಶನಾಲಯದ ಜಾರಿ ಪ್ರಕರಣದ ಮಾಹಿತಿ ವರದಿಗಳು (ECIR), ವಿಚಾರಣೆಯಲ್ಲಿರುವ ಪ್ರಕರಣಗಳು ಮತ್ತು ಶಿಕ್ಷೆಗೆ ಸಂಬಂಧಿಸಿದ ಅಂಕಿಅಂಶಗಳನ್ನು ಹಂಚಿಕೊಂಡಿದ್ದಾರೆ.

ಸರ್ಕಾರದ ದಾಖಲೆಯ ಪ್ರಕಾರ, ಈ ಪ್ರಕರಣಗಳಲ್ಲಿ ಕೇವಲ ಒಬ್ಬರಿಗೆ 2020ರಲ್ಲಿ ಶಿಕ್ಷೆಯನ್ನು ವಿಧಿಸಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ