ಹೊಸ ಐಟಿ ನಿಯಮ: ಭಯೋತ್ಪಾದನೆಗೆ ಉತ್ತೇಜನ ನೀಡಿದ ಕಾರಣಕ್ಕೆ 4,179 ಖಾತೆ, ಮಕ್ಕಳ ಲೈಂಗಿಕ ಶೋಷಣೆಗೆ ಸಂಬಂಧಿಸಿ 18,000 ಕ್ಕೂ ಹೆಚ್ಚು ಖಾತೆ ರದ್ದು

ಮೇ 25ರಿಂದ ಜೂನ್ 26ರವರೆಗೆ ಈ ಹೊಸ ಐಟಿ ನಿಯಮಗಳಿಗೆ ಅನುಸಾರಕ್ಕೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ವಟರ್ ತಿಳಿಸಿದೆ.

ಹೊಸ ಐಟಿ ನಿಯಮ: ಭಯೋತ್ಪಾದನೆಗೆ ಉತ್ತೇಜನ ನೀಡಿದ ಕಾರಣಕ್ಕೆ 4,179 ಖಾತೆ, ಮಕ್ಕಳ ಲೈಂಗಿಕ ಶೋಷಣೆಗೆ ಸಂಬಂಧಿಸಿ 18,000 ಕ್ಕೂ ಹೆಚ್ಚು ಖಾತೆ ರದ್ದು
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on: Jul 11, 2021 | 7:04 PM

ದೆಹಲಿ: ಟ್ವಿಟರ್ ಹೊಸ ಐಟಿ ನಿಯಮಗಳಿಗೆ ಅನುಸಾರವಾಗಿ ತನ್ನ ಮೊದಲ ಕುಂದುಕೊರತೆ ಪರಿಹಾರ ವರದಿಯನ್ನು ಸಲ್ಲಿಸಿದೆ. ಗೌಪ್ಯತೆ ಉಲ್ಲಂಘಿಸಿದ ಕಾರಣದಿಂದ 133 ಪೋಸ್ಟ್‌ಗಳ ವಿರುದ್ಧ ಕ್ರಮ ಕೈಗೊಂಡಿದ್ದು, 18,000 ಕ್ಕೂ ಹೆಚ್ಚು ಖಾತೆಗಳನ್ನು ಮಕ್ಕಳ ಲೈಂಗಿಕ ಶೋಷಣೆಗೆ ಸಂಬಂಧಿಸಿದ ಕಾರಣಗಳಿಗಾಗಿ ಅಮಾನತುಗೊಳಿಸಿದೆ. ಅತ್ಯಂತ ಮುಖ್ಯವಾಗಿ ಭಯೋತ್ಪಾದನೆಯನ್ನು ಉತ್ತೇಜನೆ ನೀಡಿದ ಕಾರಣಕ್ಕೆ ಒಟ್ಟು 4,179 ಖಾತೆಗಳನ್ನು ರದ್ದುಗೊಳಿಸಲಾಗಿದೆ.

ಇಷ್ಟೇ ಅಲ್ಲದೇ ಇನ್ನೂ 56 ಟ್ವಿಟರ್ ಖಾತೆಗಳನ್ನು ಅಮಾನತುಗೊಳಿಸುವಂತೆ ಕುಂದುಕೊರತೆ ಅಧಿಕಾರಿಗೆ ದೂರು ಬಂದಿತ್ತು. ಆ ಎಲ್ಲಾ ದೂರುಗಳನ್ನೂ ಪರಿಹರಿಸಲಾಗಿದ್ದು, ದೂರು ಸಲ್ಲಿಸಿದವರಿಗೆ ಪ್ರತಿಕ್ರಿಯೆ ನೀಡಲಾಗಿದೆ. ಆದರೆ ಈ ಪೈಕಿ 7 ಅಮಾನತುಗಳಿಸಲಾದ ಟ್ವಿಟರ್ ಅಕೌಂಟ್​ಗಳನ್ನು ಪುನಃ ಸಕ್ರಿಯಗೊಳಿಸಲಾಗಿದೆ. ಮೇ 25ರಿಂದ ಜೂನ್ 26ರವರೆಗೆ ಈ ಹೊಸ ಐಟಿ ನಿಯಮಗಳಿಗೆ ಅನುಸಾರಕ್ಕೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ವಟರ್ ತಿಳಿಸಿದೆ.

ಟ್ವಿಟರ್​​  (Twitter) ಭಾರತದ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ವಿನಯ್​ ಪ್ರಕಾಶ್​​ರನ್ನು ಭಾನುವಾರ ನೇಮಕ ಮಾಡಿದೆ. ಕೇಂದ್ರ ಸರ್ಕಾರದ ಹೊಸ ಐಟಿ ನಿಯಮ (IT Rules)ಗಳ ಪ್ರಕಾರ ಟ್ವಿಟರ್​ ಭಾರತದಲ್ಲಿ ಮುಖ್ಯ ಅನುಸರಣಾ ಅಧಿಕಾರಿ, ನೋಡೆಲ್​ ಅಧಿಕಾರಿ ಹಾಗೂ ಸ್ಥಾನಿಕ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡಲೇಬೇಕಾಗಿದೆ. ಕೇವಲ ಟ್ವಿಟರ್​​ಗೆ ಮಾತ್ರವಲ್ಲ, ಭಾರತದಲ್ಲಿ 50 ಲಕ್ಷ ಬಳಕೆದಾರರನ್ನು ಹೊಂದಿರುವ ಯಾವುದೇ ಸಾಮಾಜಿಕ ಜಾಲತಾಣ ಈ ಮೂರು ರೀತಿಯ ಅಧಿಕಾರಿಗಳನ್ನು ಕಡ್ಡಾಯವಾಗಿ ನೇಮಕ ಮಾಡಬೇಕಾಗಿದೆ. ಆದರೆ ಈ ಐಟಿ ನಿಯಮಗಳ ಪಾಲನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಟ್ವಿಟರ್​ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದ್ದು ಹೈಕೋರ್ಟ್ ಮೆಟ್ಟಿಲನ್ನೂ ಏರಿದೆ.

ಇನ್ನು ಐಟಿ ನಿಯಮ ಪಾಲನೆ ಮಾಡುವಲ್ಲಿ ಟ್ವಿಟರ್​ ವಿಳಂಬ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್​ಗೆ ಸಲ್ಲಿಸಿದ್ದ ಗೆ ಗುರುವಾರ ಪ್ರತಿಕ್ರಿಯೆ ನೀಡಿದ್ದ ಟ್ವಿಟರ್​, ನಮಗೆ ಭಾರತದಲ್ಲಿ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನು ನೇಮಕ ಮಾಡಲು ಇನ್ನೂ 8 ವಾರಗಳ ಕಾಲಾವಕಾಶ ಬೇಕು ಎಂದು ಹೇಳಿತ್ತು. ಭಾರತದಲ್ಲಿ ನಾವು ಸಂಪರ್ಕ ಕಚೇರಿ ನಿರ್ಮಾಣದ ಪ್ರಕ್ರಿಯೆ ನಡೆಸುತ್ತಿದ್ದೇವೆ. ಅದಾದ ಬಳಿಕ ಕುಂದುಕೊರತೆ ಅಧಿಕಾರಿಯನ್ನು ನೇಮಕ ಮಾಡುತ್ತೇವೆ ಎಂದು ತಿಳಿಸಿತ್ತು.

ಇದನ್ನೂ ಓದಿ: 

ಐಟಿ ನಿಯಮಗಳಿಗೆ ಪ್ರತಿಕ್ರಿಯಿಸಿ ಇಲ್ಲದಿದ್ದರೆ ತೊಂದರೆಗೊಳಗಾಗುತ್ತೀರಿ: ಟ್ವಿಟರ್‌ಗೆ ಎಚ್ಚರಿಕೆ ನೀಡಿದ ದೆಹಲಿ ಹೈಕೋರ್ಟ್

ಜವಾಬ್ದಾರಿಯುತ, ಸುರಕ್ಷಿತ ಸಾಮಾಜಿಕ ಜಾಲತಾಣ ವ್ಯವಸ್ಥೆ ಬಗ್ಗೆ ‘ಕೂ’ನಲ್ಲಿ ಪೋಸ್ಟ್; ಐಟಿ ನಿಯಮಗಳಿಗೆ ಬೆಂಬಲ ಸೂಚಿಸಿದ ಅಶ್ವಿನಿ ವೈಷ್ಣವ್

(133 posts actioned, 18k accounts suspended: Twitter’s first compliance report under new rules)

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್