ಡಿಜಿಟಲ್ ಆರೋಗ್ಯ ಮಿಷನ್​ನಡಿ 14 ಕೋಟಿ ಜನರ ಆರೋಗ್ಯ ದಾಖಲೆಗಳ ನೋಂದಣಿ

Health Digitalisation: ಭಾರತದಲ್ಲಿ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್ (NDHM) ಅಡಿಯಲ್ಲಿ ಸುಮಾರು 14 ಕೋಟಿ ಆರೋಗ್ಯ IDಗಳನ್ನು ಇದುವರೆಗೂ ಜನರೇಟ್ ಮಾಡಲಾಗಿದೆ.

ಡಿಜಿಟಲ್ ಆರೋಗ್ಯ ಮಿಷನ್​ನಡಿ 14 ಕೋಟಿ ಜನರ ಆರೋಗ್ಯ ದಾಖಲೆಗಳ ನೋಂದಣಿ
ಸಂಗ್ರಹ ಚಿತ್ರ
Follow us
S Chandramohan
| Updated By: ಸುಷ್ಮಾ ಚಕ್ರೆ

Updated on:Nov 17, 2021 | 8:11 PM

ನವದೆಹಲಿ: ಭಾರತದಲ್ಲಿ ಈಗ ಜನರ ಆರೋಗ್ಯ ದಾಖಲೆಗಳನ್ನು ಸಂಪೂರ್ಣವಾಗಿ ಡಿಜಿಟಲೈಸ್ ಮಾಡಲಾಗುತ್ತಿದೆ. ಜನರು ಸ್ವಯಂಪ್ರೇರಿತರಾಗಿ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್ ವೆಬ್​ಸೈಟ್​ನಲ್ಲಿ ತಮ್ಮ ಆರೋಗ್ಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಪ್ ಲೋಡ್ ಮಾಡಬಹುದು. ಇದರಿಂದಾಗಿ ಆಸ್ಪತ್ರೆಗೆ ಹೋದಾಗ ಆರೋಗ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕಾದ ಅನಿವಾರ್ಯತೆ ಇರೋದಿಲ್ಲ. ಆಸ್ಪತ್ರೆಯ ವೈದ್ಯರು ವೆಬ್ ಸೈಟ್​ಗೆ ಲಾಗಿನ್ ಆಗಿ ರೋಗಿಯ ಆರೋಗ್ಯ ದಾಖಲೆಗಳನ್ನು ಪರಿಶೀಲಿಸಿ ಅಪ್​ಡೇಟ್ ಮಾಡಲು ಅವಕಾಶ ಇರುತ್ತದೆ. ಇಂತಹ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್‌ನಡಿ 14 ಕೋಟಿ ಜನರು ತಮ್ಮ ಆರೋಗ್ಯ ದಾಖಲೆಗಳನ್ನು ರಿಜಿಸ್ಟರ್ ಮಾಡಿಸಿದ್ದಾರೆ.

ಭಾರತದಲ್ಲಿ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್ (NDHM) ಅಡಿಯಲ್ಲಿ ಸುಮಾರು 14 ಕೋಟಿ ಆರೋಗ್ಯ IDಗಳನ್ನು ಇದುವರೆಗೂ ಜನರೇಟ್ ಮಾಡಲಾಗಿದೆ. ಈ ಯೋಜನೆಯು ಭಾರತೀಯರಿಗೆ ಡಿಜಿಟಲ್ ಆರೋಗ್ಯ ದಾಖಲೆಗಳನ್ನು ರಚಿಸಲು ಮತ್ತು ಡಿಜಿಟಲ್ ಆರೋಗ್ಯ ದಾಖಲೆಗಳನ್ನು ಪಡೆಯಲು ಅವಕಾಶ ಮಾಡಿಕೊಡುತ್ತದೆ. ನರೇಂದ್ರ ಮೋದಿ ಸರ್ಕಾರದ ಪ್ರಮುಖ ಯೋಜನೆಯನ್ನು ಜನರ ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಮೊದಲ ಹೆಜ್ಜೆಯಾಗಿ ರೂಪಿಸಲಾಗಿದೆ.

ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ (ಎನ್‌ಎಚ್‌ಎ) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆರ್.ಎಸ್. ಶರ್ಮಾ ಅವರ ಪ್ರಕಾರ, ಸೆಪ್ಟೆಂಬರ್ 27ರಂದು ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ ರಾಷ್ಟ್ರೀಯ ಕಾರ್ಯಕ್ರಮವು ಉತ್ತಮ ಪ್ರಗತಿಯನ್ನು ತೋರಿಸಿದೆ. ಇದರ ಪೈಲಟ್ ಯೋಜನೆಯನ್ನು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೊಳಿಸಲಾಗಿತ್ತು. 2020ರ ಆಗಸ್ಟ್ 15 ರಂದು ಪ್ರಧಾನಿ ಮೋದಿ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್ ಯೋಜನೆಯನ್ನು ದೆಹಲಿಯ ಕೆಂಪುಕೋಟೆಯ ಭಾಷಣದಲ್ಲಿ ಘೋಷಿಸಿದ್ದರು.

ಪ್ರತಿಯೊಬ್ಬ ಭಾರತೀಯನು ವಿಶಿಷ್ಟವಾದ 14 ಅಂಕಿಯ ಆರೋಗ್ಯ ಗುರುತಿನ (ID) ಸಂಖ್ಯೆಯನ್ನು ಪಡೆಯುವ ಈ ಮಿಷನ್ ಅನ್ನು NDHM ನಿಂದ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಎಂದು ಮರುನಾಮಕರಣ ಮಾಡಲಾಗಿದೆ. ಪ್ರತಿಯೊಬ್ಬ ಭಾರತೀಯನ ವೈಯಕ್ತಿಕ ಆರೋಗ್ಯ ID ಯೊಂದಿಗೆ ಡಿಜಿಟಲ್ ಆರೋಗ್ಯ ವ್ಯವಸ್ಥೆಯನ್ನು ಸೃಷ್ಟಿಸಲಾಗುತ್ತೆ. ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಕಂಪ್ಯೂಟರ್ ಗೆ ಲಾಗಿನ್‌ ಆಗುವ ಮೂಲಕ ಜನರ ವೈಯಕ್ತಿಕ ಆರೋಗ್ಯ ದಾಖಲೆಗಳನ್ನು ಜನರ ಒಪ್ಪಿಗೆಯ ಮೇರೆಗೆ ಪರಿಶೀಲಿಸಬಹುದು.

ಈ ಯೋಜನೆಯು ಸ್ವಯಂಪ್ರೇರಿತ ಕಾರ್ಯಕ್ರಮವಾಗಿದೆ. ಡಾಕ್ಟರ್ ಆರ್.ಎಸ್. ಶರ್ಮಾ ಪ್ರಕಾರ, ನಾಗರಿಕರಿಗೆ ತಮ್ಮ ಡಿಜಿಟಲ್ ಆರೋಗ್ಯ ಐಡಿಗಳನ್ನು ನಿರ್ಮಿಸಲು ಮತ್ತು ಅವರ ವೈದ್ಯಕೀಯ ದಾಖಲೆಗಳನ್ನು ಲಿಂಕ್ ಮಾಡಲು ಆಯ್ಕೆಯನ್ನು ನೀಡುತ್ತದೆ.

“ಕೇಂದ್ರಾಡಳಿತ ಪ್ರದೇಶಗಳಲ್ಲಿನ ಅನುಭವವು ತುಂಬ ಉತ್ತಮವಾಗಿದೆ. ಡಿಜಿಟಲ್ ಮಿಷನ್‌ಗಾಗಿ ಘಟಕಗಳನ್ನು ಮತ್ತು ಬಿಲ್ಡಿಂಗ್ ಬ್ಲಾಕ್‌ಗಳನ್ನು ರಚಿಸಲು ಈ ಸಮಯವನ್ನು ಫಲಪ್ರದವಾಗಿ ಬಳಸಿಕೊಳ್ಳಲಾಗಿದೆ” ಎಂದು ಅವರು ಹೇಳಿದರು. ಈಗಾಗಲೇ 13 ಕೋಟಿಗೂ ಹೆಚ್ಚು ಹೆಲ್ತ್ ಐಡಿಗಳನ್ನು ರಚಿಸಲಾಗಿದ್ದು, ಹೆಚ್ಚಿನದನ್ನು ಸಾಧಿಸಲು ಯಾವುದೇ ಗುರಿ ಮತ್ತು ಗಡುವು ಇಲ್ಲ. “ನಾವು ಗುರಿಯನ್ನು ಹೊಂದಿಲ್ಲ, ಏಕೆಂದರೆ ಇದು ಅಂತಿಮವಾಗಿ ಸ್ವಯಂಪ್ರೇರಿತವಾಗಿದೆ. ಜನರು ಇದನ್ನು ಎಷ್ಟು ಉಪಯುಕ್ತ ಮತ್ತು ಆಕರ್ಷಕವಾಗಿ ಕಂಡುಕೊಳ್ಳುತ್ತಾರೆ ಎಂಬುದರ ಮೇಲೆ ಇದು ಅವಲಂಬಿತವಾಗಿರುತ್ತದೆ” ಎಂದು ಡಾಕ್ಟರ್ ಆರ್.ಎಸ್. ಶರ್ಮಾ ಹೇಳಿದರು. ಇದು ಜನರನ್ನು ಆಕರ್ಷಿಸುತ್ತದೆ ಎಂದು ನನಗೆ ಖಾತ್ರಿಯಿದೆ. ಏಕೆಂದರೆ ಇದು ಆರೋಗ್ಯ ದಾಖಲೆಗಳನ್ನು ಲಿಂಕ್ ಮಾಡಲು ಅನುವು ಮಾಡಿಕೊಡುತ್ತದೆ, ಒಂದು ರೀತಿಯಲ್ಲಿ ಉತ್ತಮ ರೋಗ ನಿರ್ಣಯ, ಕೈಗೆಟುಕುವ ಚಿಕಿತ್ಸೆಗೆ ಸಹಾಯ ಮಾಡುತ್ತದೆ.

ಡಾಕ್ಟರ್ ಆರ್.ಎಸ್. ಶರ್ಮಾ ಅವರ ಪ್ರಕಾರ, ಆಯುಷ್ಮಾನ್ ಭಾರತ್ ಖಂಡಿತವಾಗಿಯೂ ಈ ಮಿಷನ್‌ನ ಭಾಗವಾಗಲಿದೆ ಎಂದು ನಂಬುತ್ತಾರೆ. ನಾವು ಆರೋಗ್ಯ ಹಕ್ಕು ವಿನಿಮಯವನ್ನು ನಿರ್ಮಿಸುತ್ತಿದ್ದೇವೆ. ಅದು ವಿಮಾ ಉದ್ಯಮ, ಸ್ಟಾರ್ಟ್-ಅಪ್‌ಗಳು ಮತ್ತು ರೋಗಿಗಳಿಗೆ ಸಹಾಯ ಮಾಡುತ್ತದೆ. ಇದು ಎಲ್ಲರಿಗೂ ಗೆಲುವು-ಗೆಲುವಿನ ಸನ್ನಿವೇಶವಾಗಿದೆ. ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್‌ ಪ್ಲಾಟ್‌ಫಾರ್ಮ್ ನಲ್ಲಿ ಈಗ 3,000 ಕ್ಕೂ ಹೆಚ್ಚು ಆಸ್ಪತ್ರೆಗಳು ಮತ್ತು 3,400 ವೈದ್ಯರನ್ನು ಹೊಂದಿದೆ ಎಂದು ಸರ್ಕಾರದ ಅಂಕಿ ಅಂಶಗಳು ಹೇಳುತ್ತಿವೆ.

ಮುಂಬರುವ ತಿಂಗಳುಗಳಲ್ಲಿ, PM-DHM ಅನ್ನು ಆಯುಷ್ಮಾನ್ ಭಾರತ್ ಎಂದೂ ಕರೆಯಲ್ಪಡುವ ಸರ್ಕಾರದ ಆರೋಗ್ಯ ವಿಮಾ ಯೋಜನೆಯಾದ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ ಲಿಂಕ್ ಮಾಡಲಾಗುತ್ತದೆ. ಆರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಾಯೋಗಿಕ ಯೋಜನೆಗಳ ಸಮಯದಲ್ಲಿ ಈ ಎಲ್ಲಾ ಘಟಕಗಳನ್ನು ಒಟ್ಟುಗೂಡಿಸಿ ಪರೀಕ್ಷಿಸಲಾಗಿದೆ ಎಂದು ಶರ್ಮಾ ಹೇಳಿದರು. ಡಾಕ್ಟರ್ ಆರ್.ಎಸ್. ಶರ್ಮಾ ಪ್ರಕಾರ, ವೈದ್ಯರ ಕೊರತೆಯಿಂದ ಬಳಲುತ್ತಿರುವ ಭಾರತದ ದೂರದ ಸ್ಥಳಗಳಲ್ಲಿ ಆರೋಗ್ಯ ಸೇವೆಯ ಲಭ್ಯತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Health Care: ನಿಮ್ಮ ಆರೋಗ್ಯ ಸುಧಾರಣೆಗೆ ಈ ಆಹಾರ ಪದಾರ್ಥಗಳನ್ನು ಸೇವಿಸಿ

ಸರ್ಕಾರದ ಯೋಜನೆಗಳು ಜನರನ್ನು ತಲುಪಲು ಬ್ಯಾಂಕ್​ಗಳು ಡಿಜಿಟಲ್ ವ್ಯವಸ್ಥೆ ಬಳಸಿಕೊಳ್ಳಬೇಕು: ನಿರ್ಮಲಾ ಸೀತಾರಾಮನ್

Published On - 8:10 pm, Wed, 17 November 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ