ಚಲಿಸುತ್ತಿದ್ದ ರೈಲಿನಲ್ಲಿ 4 ಮಂದಿಯನ್ನು ಗುಂಡಿಕ್ಕಿ ಕೊಂದ ಆರ್‌ಪಿಎಫ್ ಸಿಬ್ಬಂದಿಗೆ 14 ದಿನ ನ್ಯಾಯಾಂಗ ಬಂಧನ
ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಸಹೋದ್ಯೋಗಿ ಮತ್ತು ಮೂವರು ಪ್ರಯಾಣಿಕರ ಸೇರಿದಂದತೆ ಒಟ್ಟು ನಾಲ್ಕು ಮಂದಿಯ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಕಾನ್‌ಸ್ಟೆಬಲ್ ಚೇತನ್ ಸಿಂಗ್ಗೆ 14 ದಿನ ನ್ಯಾಯಾಂಗ ಬಂಧನ.
ಮುಂಬೈ, ಆ. 11: ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಸಹೋದ್ಯೋಗಿ ಮತ್ತು ಮೂವರು ಪ್ರಯಾಣಿಕರ ಸೇರಿದಂತೆ ಒಟ್ಟು ನಾಲ್ಕು ಮಂದಿಯ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಕಾನ್‌ಸ್ಟೆಬಲ್ ಚೇತನ್ ಸಿಂಗ್ ಅವರನ್ನು ಬಂಧಿಸಲಾಗಿತ್ತು. ಇಂದು (ಆ.11) ಅವರನ್ನು ವಿಚಾರಣೆ ನಡೆಸಿದೆ ಮುಂಬೈ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಚೇತನ್ ಸಿಂಗ್ ಅವರನ್ನು ಬಂಧಿಸಿದ ನಂತರ ಇಂದು ಬೊರಿವಲಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಇನ್ನೂ ಹೆಚ್ಚಿನ ದಿನಗಳವರೆಗೆ ಅವರು ಬಂಧನದಲ್ಲಿರಬೇಕು ಎಂಬ ಯಾವುದೇ ಮನವಿಯನ್ನು ಮಾಡದ ಕಾರಣ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇದನ್ನೂ ಓದಿ:ಚಲಿಸುತ್ತಿದ್ದ ಜೈಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ, ನಾಲ್ವರು ಸಾವು
ಚೇತನ್ ಸಿಂಗ್ ಅವರನ್ನು ಹೆಚ್ಚಿನ ತನಿಖೆ ನಡೆಸಲು ತನಿಖಾ ಸಂಸ್ಥೆ ಬ್ರೈನ್ ಮ್ಯಾಪಿಂಗ್, ಪಾಲಿಗ್ರಾಫ್ ಮತ್ತು ನಾರ್ಕೋ ವಿಶ್ಲೇಷಣೆ ಪರೀಕ್ಷೆಗೆ ಅವಕಾಶವನ್ನು ಕೇಳಿತ್ತು. ಆದರೆ ಈ ಮನವಿಯನ್ನು ನ್ಯಾಯಾಲಯ ನಿರಾಕರಿಸಿದೆ. ಆದರೆ ನ್ಯಾಯಲಯವು GRP (Gastrin-Releasing Peptide)ಪರೀಕ್ಷೆಗಳಿಗೆ ಒಪ್ಪಿಗೆ ನೀಡಿತ್ತು. ಈ ವಿಷಯವು ತುಂಬಾ ಗಂಭೀರವಾಗಿದೆ ಮತ್ತು ಸಂಪೂರ್ಣ ತನಿಖೆಯ ಅಗತ್ಯವಿದೆ ಎಂದು ನ್ಯಾಯಲಯ ಹೇಳಿದೆ.
ಜುಲೈ 31ರಂದು ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ಚಲಿಸುತ್ತಿರುವ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್‌ನಲ್ಲಿ ತನ್ನ ಹಿರಿಯ ಸಹೋದ್ಯೋಗಿ ಮತ್ತು ಮೂವರು ಪ್ರಯಾಣಿಕರ ಮೇಲೆ ಗುಂಡು ಹಾರಿಸಿ, ಪರಾರಿಯಾಗಲು ಯತ್ನಿಸಿದಾಗ ರೈಲ್ವೆ ಪೊಲೀಸರು ಅವರನ್ನು ಹಿಡಿದು ಬಂಧಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ