ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ದುರುಪಯೋಗಪಡಿಸಿಕೊಂಡಿದೆ, ಸುಪ್ರೀಂ ಮೊರೆ ಹೋದ 14 ವಿರೋಧ ಪಕ್ಷಗಳು
ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿವೆ.
ದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು (Central Bureau of Investigation) ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿವೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಯಂತಹ ಸಂಸ್ಥೆಗಳು ಬಿಜೆಪಿಯ ವಿರೋಧಿಗಳನ್ನು ಮಾತ್ರ ಗುರಿಯಾಗಿಸಿಕೊಂಡಿವೆ ಎಂದು ಪಕ್ಷಗಳು ಹೇಳುತ್ತವೆ.
ವಿರೋಧ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ಸೇರಿಕೊಂಡ ನಂತರ ಅವರ ಮೇಲಿನ ಪ್ರಕರಣಗಳನ್ನು ಆಗಾಗ್ಗೆ ಕೈಬಿಡಲಾಗುತ್ತದೆ ಎಂದು ವಿರೋಧ ಪಕ್ಷಗಳು ಹೇಳಿದ್ದಾರೆ. ಈ ಆರೋಪಗಳನ್ನು ಬಿಜೆಪಿ ನಿರಾಕರಿಸಿದ್ದು, ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಹೇಳಿದೆ.
ಇದನ್ನೂ ಓದಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಈ ಜನರು ದುರುಪಯೋಗಿಸುತ್ತಿದ್ದಾರೆ, ಮೋದಿ ಅಲ್ಲ: ಮಮತಾ ಬ್ಯಾನರ್ಜಿ
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಜನತಾ ದಳ-ಯುನೈಟೆಡ್, ಭಾರತ್ ರಾಷ್ಟ್ರ ಸಮಿತಿ, ರಾಷ್ಟ್ರೀಯ ಜನತಾ ದಳ, ಸಮಾಜವಾದಿ ಪಕ್ಷ, ಶಿವಸೇನೆ (ಉದ್ಧವ್ ಠಾಕ್ರೆ ಬಣ), ನ್ಯಾಷನಲ್ ಕಾನ್ಫರೆನ್ಸ್, ನ್ಯಾಶನಲಿಸ್ಟ್ ಪಕ್ಷಗಳು ಮತ್ತು ಕಾಂಗ್ರೆಸ್ ಪಕ್ಷ, ಎಡಪಕ್ಷಗಳು ಮತ್ತು ಡಿಎಂಕೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿವೆ.
Published On - 11:24 am, Fri, 24 March 23