ಮಧ್ಯಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ದೀಪಾವಳಿಗೆ ಊರಿಗೆ ಹೋಗುತ್ತಿದ್ದ 14 ಜನ ಸಾವು
ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರು ಬಸ್ನಲ್ಲಿ ತಮ್ಮ ಊರುಗಳಿಗೆ ತೆರಳುತ್ತಿದ್ದರು. ಈ ವೇಳೆ ಬಸ್- ಟ್ರಕ್ ನಡುವೆ ಅಪಘಾತ ಸಂಭವಿಸಿ 14 ಜನ ಮೃತಪಟ್ಟಿದ್ದಾರೆ.
ರೇವಾ: ಮಧ್ಯಪ್ರದೇಶದ ರೇವಾ ಬಳಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, 14 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 14 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈದರಾಬಾದ್ನಿಂದ ಗೋರಖಪುರಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ.
ಮಧ್ಯಪ್ರದೇಶದ ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಆ ರಸ್ತೆಯಲ್ಲಿ ಹೋಗುತ್ತಿದ್ದ ಕೆಲವು ಪ್ರಯಾಣಿಕರು ಈ ಘಟನೆಯ ಬಗ್ಗೆ ತಮಗೆ ಮಾಹಿತಿ ನೀಡಿದ್ದು, ಸೊಹಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಕ್ರಾಶ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಬೈಕ್ ಅಪಘಾತ; ಬಾಲಕಿ ಸಾವು, ಬಾಲಕನ ಸ್ಥಿತಿ ಗಂಭೀರ
ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಜಖಂಗೊಂಡ ಬಸ್ಸಿನೊಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತೆಗೆಯಲಾಯಿತು. ಬಸ್ಸಿನ ಕ್ಯಾಬಿನ್‌ನಲ್ಲಿ ಸುಮಾರು ಮೂರರಿಂದ 4 ಮಂದಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Madhya Pradesh | 14 dead, 40 injured in a collision between a bus and trolley near Suhagi Hills in Rewa. The bus was going from Hyderabad to Gorakhpur. All people on the bus are reportedly residents of Uttar Pradesh. pic.twitter.com/cwN2MUCB7O
— ANI MP/CG/Rajasthan (@ANI_MP_CG_RJ) October 22, 2022
ತಕ್ಷಣ ಆಂಬ್ಯುಲೆನ್ಸ್‌ಗಳನ್ನು ಕರೆಸಲಾಯಿತು. ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಥಿಯೋಂಥರ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದೀಪಾವಳಿ ಆಚರಣೆಯಲ್ಲಿ ಪಾಲ್ಗೊಳ್ಳಲು ಈ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.