ಮಧ್ಯಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ದೀಪಾವಳಿಗೆ ಊರಿಗೆ ಹೋಗುತ್ತಿದ್ದ 14 ಜನ ಸಾವು

| Updated By: ಸುಷ್ಮಾ ಚಕ್ರೆ

Updated on: Oct 22, 2022 | 9:02 AM

ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರು ಬಸ್​ನಲ್ಲಿ ತಮ್ಮ ಊರುಗಳಿಗೆ ತೆರಳುತ್ತಿದ್ದರು. ಈ ವೇಳೆ ಬಸ್​- ಟ್ರಕ್ ನಡುವೆ ಅಪಘಾತ ಸಂಭವಿಸಿ 14 ಜನ ಮೃತಪಟ್ಟಿದ್ದಾರೆ.

ಮಧ್ಯಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ದೀಪಾವಳಿಗೆ ಊರಿಗೆ ಹೋಗುತ್ತಿದ್ದ 14 ಜನ ಸಾವು
ರೇವಾದಲ್ಲಿ ಅಪಘಾತ
Follow us on

ರೇವಾ: ಮಧ್ಯಪ್ರದೇಶದ ರೇವಾ ಬಳಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, 14 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್​​ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 14 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈದರಾಬಾದ್​ನಿಂದ ಗೋರಖಪುರಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ.

ಮಧ್ಯಪ್ರದೇಶದ ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಆ ರಸ್ತೆಯಲ್ಲಿ ಹೋಗುತ್ತಿದ್ದ ಕೆಲವು ಪ್ರಯಾಣಿಕರು ಈ ಘಟನೆಯ ಬಗ್ಗೆ ತಮಗೆ ಮಾಹಿತಿ ನೀಡಿದ್ದು, ಸೊಹಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕ್ರಾಶ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಬೈಕ್ ಅಪಘಾತ; ಬಾಲಕಿ ಸಾವು, ಬಾಲಕನ ಸ್ಥಿತಿ ಗಂಭೀರ

ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಜಖಂಗೊಂಡ ಬಸ್ಸಿನೊಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತೆಗೆಯಲಾಯಿತು. ಬಸ್ಸಿನ ಕ್ಯಾಬಿನ್‌ನಲ್ಲಿ ಸುಮಾರು ಮೂರರಿಂದ 4 ಮಂದಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಕ್ಷಣ ಆಂಬ್ಯುಲೆನ್ಸ್‌ಗಳನ್ನು ಕರೆಸಲಾಯಿತು. ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಥಿಯೋಂಥರ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದೀಪಾವಳಿ ಆಚರಣೆಯಲ್ಲಿ ಪಾಲ್ಗೊಳ್ಳಲು ಈ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ