ಮುಂಬೈ: ಸೆಲ್ಫೀ ತೆಗೆಯುವ ವೇಳೆ ಬಿದ್ದು 14 ವರ್ಷದ ಬಾಲಕ ಸಾವು

ಮೃತ ಬಾಲಕನನ್ನು ಮೊಹಮ್ಮದ್ ಉಬ್ಬೇದ್​ ಶೇಕ್​ ಎಂದು ಗುರುತಿಸಲಾಗಿದೆ. ಸೋಮವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕ ಸೋಮವಾರ ಸಂಜೆ ಆಟವಾಡಲು ತೆರಳಿದ್ದ ವೇಳೆ ದುರಂತ ಸಂಭವಿಸಿದ್ದು, ಸ್ಥಳಿಯರು ಕೆಳಕ್ಕೆ ಬಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಎತ್ತರದಿಂದ ಬಿದ್ದ ಪರಿಣಾಮ ಬಾಲಕ ಬದುಕುಳಿಯಲಿಲ್ಲ ಎಂದು ತಿಳಿದುಬಂದಿದೆ.

ಮುಂಬೈ: ಸೆಲ್ಫೀ ತೆಗೆಯುವ ವೇಳೆ ಬಿದ್ದು 14 ವರ್ಷದ ಬಾಲಕ ಸಾವು
ಪ್ರಾತಿನಿಧಿಕ ಚಿತ್ರ

ಮುಂಬೈ: ಅರ್ಧ ಕೆಡವಿದ ಕಟ್ಟಡದ ಮೇಲೆ ನಿಂತು ಸೆಲ್ಫೀ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ಬಿದ್ದು 14 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಮುಂಬೈನ ಭೀವಂಡಿ ಪ್ರದೇಶದಲ್ಲಿ ಘಟನೆ ನಡೆದಿದೆ. ಕಟ್ಟಡದ ತುದಿಯಲ್ಲಿ ನಿಂತು ಸೆಲ್ಫೀ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲುಜಾರಿ ಎರಡನೇ ಮಹಡಿಯಿಂದ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ.

ಮೃತ ಬಾಲಕನನ್ನು ಮೊಹಮ್ಮದ್ ಉಬ್ಬೇದ್​ ಶೇಕ್(14)​ ಎಂದು ಗುರುತಿಸಲಾಗಿದೆ. ಸೋಮವಾರ (ಡಿ.6) ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕ ಸೋಮವಾರ ಸಂಜೆ ಆಟವಾಡಲು ತೆರಳಿದ್ದ ವೇಳೆ ದುರಂತ ಸಂಭವಿಸಿದ್ದು, ಸ್ಥಳಿಯರು ಕೆಳಕ್ಕೆ ಬಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಎತ್ತರದಿಂದ ಬಿದ್ದ ಪರಿಣಾಮ ಬಾಲಕ ಬದುಕುಳಿಯಲಿಲ್ಲ ಎಂದು ತಿಳಿದುಬಂದಿದೆ.

ಕಳೆದ ವರ್ಷ ಮುಂಬೈನ ಭೀವಂಡಿ ಪ್ರದೇಶದಲ್ಲಿ ಕಾರ್ಪೋರೇಷನ್​ ವತಿಯಿಂದ ಅಕ್ರಮವಾಗಿ ಕಟ್ಟಿದ್ದ ಕಟ್ಟಡಗಳನ್ನು ಕೆಡವಲಾಗಿತ್ತು. ಆದರೆ ಅಲ್ಲಿಗೆ ಯಾವುದೇ ಸೆಕ್ಯರಿಟಿಯ ವ್ಯವಸ್ಥೆ ಮಾಡದ ಕಾರಣ ಮಕ್ಕಳು ಆಟವಾಡಲು ಹೋಗುತ್ತಿದ್ದರು. ಹೀಗೆ ಆಟವಾಡಲು ಬಂದ ವೇಳೆ ಬಾಲಕ ಸಾವನ್ನಪ್ಪಿದ ಘಟನೆ ನಡೆದದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.

ಇದನ್ನೂ ಓದಿ:

Uttar Pradesh election 2022 ಕಾಂಗ್ರೆಸ್‌ನಿಂದ ಮಹಿಳಾ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಚುನಾವಣೆಯಲ್ಲಿ ಮಹಿಳೆಯರಿಗೆ ಶೇ 40 ಪ್ರಾತಿನಿಧ್ಯ ಭರವಸೆ

ಹೊಸ ಸೋಫಾದ ಒಳಗೆ ಹೆಬ್ಬಾವು ಪ್ರತ್ಯಕ್ಷ; ಹಾವನ್ನು ರಕ್ಷಿಸಿದ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು

Click on your DTH Provider to Add TV9 Kannada