Video: ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಬಾಲಕಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ಬಾಲಕಿಯೊಬ್ಬಳು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ರಾಣಿಪೇಟ್‌ನಲ್ಲಿ ನಡೆದಿದೆ. ಬಾಲಕಿ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣದ ತನಿಖೆ ಪ್ರಾರಂಭಿಸಿದ್ದು ಮತ್ತು ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

Follow us
ಅಕ್ಷತಾ ವರ್ಕಾಡಿ
|

Updated on:Dec 14, 2024 | 10:25 AM

ತಮಿಳುನಾಡು: ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ಬಾಲಕಿಯೊಬ್ಬಳು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ರಾಣಿಪೇಟ್‌ನಲ್ಲಿ ಡಿಸೆಂಬರ್ 10 ರಂದು ನಡೆದಿದೆ. ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ತರಗತಿಯಲ್ಲಿ ಕುಸಿದು ಬಿದ್ದಿರುವುದು ತರಗತಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೃತ ಬಾಲಕಿಯನ್ನು ಅದ್ವಿತಾ(14) ಎಂದು ಗುರುತಿಸಲಾಗಿದೆ. ಏಕಾಏಕಿ ಕುಸಿದು ಬಿದ್ದ ಬಾಲಕಿಯನ್ನು ತಕ್ಷಣ ಮೆಲ್ವಿಶಾರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಬಾಲಕಿ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಬಾಲಕಿ ಈ ಹಿಂದೆ ಹೃದಯ ಸಂಬಂಧಿ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಳು ಎಂದು ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ವ್ಯಾಗನಾರ್ ಕಾರಿಗೆ ಟ್ರ್ಯಾಕ್ಟರ್ ಟ್ರಾಲಿ ಅಳವಡಿಸಿದ ವ್ಯಕ್ತಿ; ವಿಡಿಯೋ ವೈರಲ್​​

ಕಾವೇರಿಪಾಕ್ಕಂ ಪೊಲೀಸರು ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡಿದ್ದು, ಇದೀಗ ವೆಲ್ಲೂರು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:23 am, Sat, 14 December 24

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ