14 ವರ್ಷದ ಬಾಲಕಿ ಮೇಲೆ ಚಲಿಸುವ ಕಾರಿನೊಳಗೆ ಯೂಟ್ಯೂಬರ್, ಪೊಲೀಸ್ ಸೇರಿ ಅತ್ಯಾಚಾರ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. 14 ವರ್ಷದ ಶಾಲಾ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಕೃತ್ಯ ನಡೆಸಿದ ಯೂಟ್ಯೂಬರ್​ನನ್ನು ಬಂಧಿಸಲಾಗಿದ್ದು, ಇನ್ನೋರ್ವ ಆರೋಪಿ ಪೊಲೀಸ್ ಅಧಿಕಾರಿ ಪರಾರಿಯಾಗಿದ್ದಾನೆ. ಈ ವಾರದ ಆರಂಭದಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ 14 ವರ್ಷದ ಬಾಲಕಿಯನ್ನು ಸ್ಥಳೀಯ ಯೂಟ್ಯೂಬರ್ ಮತ್ತು ಪೊಲೀಸ್ ಅಧಿಕಾರಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

14 ವರ್ಷದ ಬಾಲಕಿ ಮೇಲೆ ಚಲಿಸುವ ಕಾರಿನೊಳಗೆ ಯೂಟ್ಯೂಬರ್, ಪೊಲೀಸ್ ಸೇರಿ ಅತ್ಯಾಚಾರ
Police And Youtuber

Updated on: Jan 08, 2026 | 3:53 PM

ಕಾನ್ಪುರ, ಜನವರಿ 8: ಉತ್ತರ ಪ್ರದೇಶದ ಕಾನ್ಪುರದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ (Physical Harassment) ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಅಪರಾಧವೆಸಗಿದ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿಯಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಸ್ಥಳೀಯ ಪೊಲೀಸರು ಈ ಕೃತ್ಯವನ್ನು ಮುಚ್ಚಿಹಾಕಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಎಲ್ಲಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯೊಂದಿಗೆ ತನಿಖೆಗಳು ನಡೆಯುತ್ತಿವೆ.

ಈ ಪ್ರಕರಣದಲ್ಲಿ ಸತ್ಯಗಳನ್ನು ತಪ್ಪಾಗಿ ನಿರೂಪಿಸಿದ ಆರೋಪದ ಮೇಲೆ ಕಾನ್ಪುರ ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ದಿನೇಶ್ ಚಂದ್ರ ತ್ರಿಪಾಠಿ ಅವರನ್ನು ವಜಾಗೊಳಿಸಿದ್ದಾರೆ. ಸಚೇಂಡಿ ಸ್ಟೇಷನ್ ಹೌಸ್ ಅಧಿಕಾರಿ ವಿಕ್ರಮ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ಮುಂಬೈ: 10 ಅಪ್ರಾಪ್ತ ಬಾಲಕಿಯರಿಗೆ ನಿದ್ರೆ ಮಾತ್ರೆ ನೀಡಿ ಅತ್ಯಾಚಾರ, ಆರೋಪಿಯ ಬಂಧನ

ಏನಿದು ಘಟನೆ?:

ಕಾನ್ಪುರದ ಸಚೆಂಡಿ ಪ್ರದೇಶದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. 7ನೇ ತರಗತಿಯ ವಿದ್ಯಾರ್ಥಿನಿಯನ್ನು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಮಹೀಂದ್ರಾ ಸ್ಕಾರ್ಪಿಯೋದಲ್ಲಿ ಅಪಹರಿಸಲಾಗಿತ್ತು. ಆಕೆಯನ್ನು ಸ್ಕಾರ್ಪಿಯೋದಲ್ಲೇ ರೈಲ್ವೆ ಹಳಿಯ ಬಳಿಯ ದೂರದ ಸ್ಥಳಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಸುಮಾರು ಎರಡು ಗಂಟೆಗಳ ಕಾಲ ಆಕೆಯ ಮೇಲೆ ಅತ್ಯಾಚಾರ ನಡೆಸಿ, ನಂತರ ಆಕೆಯ ಮನೆಯ ಹೊರಗೆ ಎಸೆಯಲಾಗಿತ್ತು.

ಇದನ್ನೂ ಓದಿ: ಹೋಟೆಲ್​ಗೆ ಕರೆಸಿಕೊಂಡು 17 ವರ್ಷದ ಮಹಿಳಾ ಶೂಟರ್ ಮೇಲೆ ಅತ್ಯಾಚಾರ, ನ್ಯಾಷನಲ್ ಕೋಚ್ ಅಮಾನತು

ಆಕೆಯ ಹೇಳಿಕೆಯ ಆಧಾರದ ಮೇಲೆ, ಸಬ್-ಇನ್ಸ್‌ಪೆಕ್ಟರ್ ಅಮಿತ್ ಕುಮಾರ್ ಮೌರ್ಯ ಮತ್ತು ಯೂಟ್ಯೂಬರ್ ಶಿವಬರನ್ ಯಾದವ್ ವಿರುದ್ಧ ಕೇಸ್ ದಾಖಲಿಸಲಾಗಿದೆ. ಶಿವಬರನ್ ಯಾದವ್ ಅವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಎಸ್‌ಐ ಅನ್ನು ಬಂಧಿಸಲು ಪೊಲೀಸರು 4 ತಂಡಗಳನ್ನು ರಚಿಸಿದ್ದಾರೆ. ಅಪರಾಧಕ್ಕೆ ಬಳಸಲಾದ ಎಸ್‌ಯುವಿಯನ್ನು ಮೌರ್ಯ ಅವರ ಹೆಸರಿನಲ್ಲಿಯೇ ನೋಂದಾಯಿಸಲಾಗಿದೆ.

ಸಂತ್ರಸ್ತೆಯ ಕುಟುಂಬಸ್ಥರು ಸ್ಥಳೀಯ ಪೊಲೀಸರು ಈ ಕೃತ್ಯವನ್ನು ಮುಚ್ಚಿಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಲ್ಲಿ ಪೊಲೀಸರು ಭಾಗಿಯಾಗಿದ್ದಾರೆಂದು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:52 pm, Thu, 8 January 26