ಸೋಂಕಿತ ಅಪ್ರಾಪ್ತೆಯನ್ನೂ ಬಿಡದ ಕಾಮುಕರು: ಒಬ್ಬ ರೇಪ್ ಮಾಡಿದ, ಮತ್ತೊಬ್ಬ ವಿಡಿಯೋ ಮಾಡ್ದ
ದೆಹಲಿ:ಕೊವಿಡ್ ಸೋಂಕಿತ 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 19 ವರ್ಷದ ಕೊವಿಡ್ ಸೋಂಕಿತ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ದೇಶದ ರಾಜಧಾನಿ ದೆಹಲಿಯಲ್ಲಿ ನಡೆದಿದೆ. 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಆಕೆಯನ್ನು ದೆಹಲಿಯ ಕೊವಿಡ್ ಕೇರ್ ಸೆಂಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅದೇ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಬಾಲಕ ಅಪ್ರಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದು, ಅತ್ಯಾಚಾರದ ಬೆಂಬಲಕ್ಕೆ ನಿಂತ ಆ […]
ದೆಹಲಿ:ಕೊವಿಡ್ ಸೋಂಕಿತ 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 19 ವರ್ಷದ ಕೊವಿಡ್ ಸೋಂಕಿತ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ದೇಶದ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಆಕೆಯನ್ನು ದೆಹಲಿಯ ಕೊವಿಡ್ ಕೇರ್ ಸೆಂಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅದೇ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಬಾಲಕ ಅಪ್ರಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದು, ಅತ್ಯಾಚಾರದ ಬೆಂಬಲಕ್ಕೆ ನಿಂತ ಆ ಯುವಕನ ಗೆಳೆಯನೊಬ್ಬ ಈ ದೃಶ್ಯವನ್ನು ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ ಎನ್ನಲಾಗಿದೆ.
ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಜುಡಿಶಿಯಲ್ ಕಸ್ಟಡಿಗೆ ಒಪ್ಪಿಸಿದ ನಂತರ ಅವರನ್ನು ಬೇರೆ ಆಸ್ಪತ್ರೆಯಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಗಳು ಸೋಂಕಿನಿಂದ ಗುಣಮುಖರಾದ ನಂತರ ಜೈಲಿಗೆ ಕಳುಹಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.