AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡುಪ್ರಾಣಿಗಳ ಜೀವ ತೆಗೆಯುತ್ತಿವೆ ವಾಹನಗಳು; ಮಧ್ಯಪ್ರದೇಶದಲ್ಲಿ 14 ತಿಂಗಳಲ್ಲಿ 149 ಚಿರತೆಗಳು ಸಾವು

ಮಧ್ಯಪ್ರದೇಶದಲ್ಲಿ ಕಳೆದ 14 ತಿಂಗಳಲ್ಲಿ 149 ಚಿರತೆಗಳು ಸಾವನ್ನಪ್ಪಿವೆ. ಇದಕ್ಕಿಂತಲೂ ಆಘಾತಕಾರಿ ಸಂಗತಿಯೆಂದರೆ ರಸ್ತೆಯಲ್ಲಿ ವೇಗವಾಗಿ ಬರುವ ವಾಹನಗಳಿಂದ ಅಪಘಾತ ಉಂಟಾಗಿಯೇ ಬಹುತೇಕ ಚಿರತೆಗಳು ಸಾವನ್ನಪ್ಪಿವೆ. ಕಳೆದ ವರ್ಷ ಜನವರಿಯಿಂದ ಇದುವರೆಗೆ 149 ಚಿರತೆಗಳು ಸಾವನ್ನಪ್ಪಿರುವುದೆಂದರೆ ಸಣ್ಣ ಸಂಗತಿಯೇನಲ್ಲ. ಮಾಹಿತಿ ಹಕ್ಕು ಪ್ರಶ್ನೆಗೆ ಉತ್ತರವಾಗಿ ನೀಡಲಾದ ಮಾಹಿತಿಯಿಂದ ಈ ಸಂಗತಿ ತಿಳಿದುಬಂದಿದೆ.

ಕಾಡುಪ್ರಾಣಿಗಳ ಜೀವ ತೆಗೆಯುತ್ತಿವೆ ವಾಹನಗಳು; ಮಧ್ಯಪ್ರದೇಶದಲ್ಲಿ 14 ತಿಂಗಳಲ್ಲಿ 149 ಚಿರತೆಗಳು ಸಾವು
Leopard Drinking WaterImage Credit source: PTI
ಸುಷ್ಮಾ ಚಕ್ರೆ
|

Updated on:Apr 10, 2026 | 3:26 PM

Share

ಭೋಪಾಲ್, ಏಪ್ರಿಲ್ 10: ಕಾಡುಪ್ರಾಣಿಗಳ ಪಾಲಿಗೆ ಮನುಷ್ಯರು ಯಮಕಿಂಕರರಾಗುತ್ತಿದ್ದಾರೆ. ಇತ್ತೀಚೆಗೆ ಅಭಯಾರಣ್ಯದ ರಸ್ತೆಯೊಂದರಲ್ಲಿ ಚಿರತೆ ನಡೆದುಕೊಂಡು ಹೋಗುವಾಗ ಅದರ ಪಕ್ಕದವರೆಗೂ ಸಾಲುಗಟ್ಟಿ ವಾಹನಗಳನ್ನು ನಿಲ್ಲಿಸಿಕೊಂಡು ಫೋಟೋ ಕ್ಲಿಕ್ಕಿಸುತ್ತಾ, ಆ ಚಿರತೆಗೆ (Leopard) ಹೋಗಲು ದಾರಿಯನ್ನೂ ಬಿಡದೆ ಗೊಂದಲವನ್ನುಂಟುಮಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಕಾಡುಪ್ರಾಣಿಗಳ ಖಾಸಗಿತನಕ್ಕೆ ಸಫಾರಿಯ ಹೆಸರಿನಲ್ಲಿ ಯಾವ ರೀತಿ ತೊಂದರೆ ಮಾಡಲಾಗುತ್ತಿದೆ ಎಂಬ ಕುರಿತು ಸಾಕಷ್ಟು ಚರ್ಚೆಗಳಿಗೂ ಈ ವಿಡಿಯೋ ಕಾರಣವಾಗಿತ್ತು. ಇದೀಗ ಮಾಹಿತಿ ಹಕ್ಕಿನಡಿ ಪಡೆದ ಮಾಹಿತಿಯ ಪ್ರಕಾರ ಮಧ್ಯಪ್ರದೇಶದಲ್ಲಿ ಕಳೆದ 14 ತಿಂಗಳಲ್ಲಿ 149 ಚಿರತೆಗಳು ಮೃತಪಟ್ಟಿರುವ ಶಾಕಿಂಗ್ ಸಂಗತಿ ಬಯಲಾಗಿದೆ. ಈ ಸಾವಿಗೆ ಬಹುತೇಕವಾಗಿ ಅಪಘಾತಗಳೇ ಮುಖ್ಯ ಕಾರಣ ಎಂಬುದು ಇನ್ನೊಂದು ಆಘಾತಕಾರಿ ಸಂಗತಿ.

ಜನವರಿ 2025ರಿಂದ ಆರಂಭವಾದ 14 ತಿಂಗಳಲ್ಲಿ ಮಧ್ಯಪ್ರದೇಶದಲ್ಲಿ 149 ಚಿರತೆಗಳು ಸಾವನ್ನಪ್ಪಿವೆ ಎಂದು ಇಲಾಖೆ ತನ್ನ ಆರ್‌ಟಿಐ ಉತ್ತರದಲ್ಲಿ ತಿಳಿಸಿದೆ. ಇವುಗಳಲ್ಲಿ ಶೇ. 31ರಷ್ಟು ಸಾವುಗಳು ರಸ್ತೆ ಅಪಘಾತಗಳಿಂದಾಗಿವೆ. 19 ಸಾವುಗಳು ಹೆದ್ದಾರಿಗಳಲ್ಲಿ ಸಂಭವಿಸಿವೆ. ಶೇ. 24ರಷ್ಟು ಸಾವುಗಳು ವೃದ್ಧಾಪ್ಯ ಮತ್ತು ಕಾಯಿಲೆಯಂತಹ ನೈಸರ್ಗಿಕ ಕಾರಣಗಳಿಂದ ಸಂಭವಿಸಿದ್ದರೆ, ಶೇ. 21ರಷ್ಟು ಸಾವುಗಳು ವನ್ಯಜೀವಿಗಳ ನಡುವಿನ ಸಂಘರ್ಷದಿಂದಾಗಿ ಸಂಭವಿಸಿವೆ.

ಇದನ್ನೂ ಓದಿ: ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಸುಮಾರು ಶೇ. 14ರಷ್ಟು ಸಾವುಗಳು ಬೇಟೆಯಾಡುವುದು ಮತ್ತು ಪ್ರತೀಕಾರದ ಹತ್ಯೆಗಳಿಂದ ಸಂಭವಿಸಿವೆ. 8 ಪ್ರಾಣಿಗಳು ಉದ್ದೇಶಪೂರ್ವಕವಾಗಿ ಅಥವಾ ಆಕಸ್ಮಿಕವಾಗಿ ವಿದ್ಯುತ್ ಆಘಾತಕ್ಕೊಳಗಾಗಿದ್ದರೆ, ಎರಡು ಚಿರತೆಗಳು ಬಲೆಗಳಿಂದ ಸಾವನ್ನಪ್ಪಿವೆ. ಶೇ. 9ರಷ್ಟು ಪ್ರಕರಣಗಳಲ್ಲಿ ಸಾವಿಗೆ ಕಾರಣವನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ.

ಫೆಬ್ರವರಿ 2024ರಲ್ಲಿ ಬಿಡುಗಡೆಯಾದ’ಭಾರತದಲ್ಲಿ ಚಿರತೆಗಳ ಸ್ಥಿತಿ 2022′ ವರದಿಯ ಪ್ರಕಾರ, ಮಧ್ಯಪ್ರದೇಶವು ದೇಶದಲ್ಲಿಯೇ ಅತಿ ಹೆಚ್ಚು ಚಿರತೆ ಜನಸಂಖ್ಯೆಯನ್ನು ಹೊಂದಿದ್ದು, ಮಧ್ಯಪ್ರದೇಶದಲ್ಲಿ 3,907 ಚಿರತೆಗಳಿವೆ. ಮಹಾರಾಷ್ಟ್ರ ಮತ್ತು ಕರ್ನಾಟಕ ನಂತರದ ಸ್ಥಾನದಲ್ಲಿವೆ.

ಇದನ್ನೂ ಓದಿ: ಬೋನು ಇಟ್ಟಿದ್ದು ಹುಲಿಗೆ, ಬಂದು ಬಿದ್ದಿದ್ದು ಚಿರತೆ: ಮುಂದೇನಾಯ್ತು?

“ರಸ್ತೆಗಳ ಬಳಿ ನೀರಿನ ಮೂಲಗಳನ್ನು ರಚಿಸದಂತೆ ನಾವು ಸಲಹೆ ನೀಡುತ್ತಿದ್ದೇವೆ. ಏಕೆಂದರೆ ಪ್ರಾಣಿಗಳು ಹೆಚ್ಚಾಗಿ ಅವುಗಳ ಕಡೆಗೆ ಚಲಿಸುತ್ತವೆ ಮತ್ತು ಅಪಘಾತಗಳಿಗೆ ಗುರಿಯಾಗುತ್ತವೆ” ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:25 pm, Fri, 10 April 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ