AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್‌ಸ್ಟಾಗ್ರಾಮ್​ನಲ್ಲಿ ಪರಿಚಯವಾದವನಿಂದ ಅತ್ಯಾಚಾರ; ಗಂಡು ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ!

ಇನ್‌ಸ್ಟಾಗ್ರಾಮ್​ನಲ್ಲಿ ಪರಿಚಯವಾಗಿದ್ದ 22 ವರ್ಷದ ಯುವಕನೊಬ್ಬನಿಂದ ಅತ್ಯಾಚಾರಕ್ಕೊಳಗಾಗಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಗುರುಗ್ರಾಮದ ಸೋಹ್ನಾದ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಇಂದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಈ ವಿಷಯ ಬಹಿರಂಗಗೊಂಡಿದೆ. ಬಾಲಕಿ ಗರ್ಭಿಣಿಯಾಗಿದ್ದು, ಪ್ರಸವ ವೇದನೆಯಲ್ಲಿದ್ದಾಳೆ ಎಂದು ವೈದ್ಯರು ಪೋಷಕರಿಗೆ ತಿಳಿಸಿದ್ದಾರೆ. ಬಾಲಕಿಗಾಗಲಿ ಅಥವಾ ಆಕೆಯ ಪೋಷಕರಿಗಾಗಲಿ ಗರ್ಭಿಣಿ ಎಂಬ ವಿಷಯ ತಿಳಿದಿರಲಿಲ್ಲ.

ಇನ್‌ಸ್ಟಾಗ್ರಾಮ್​ನಲ್ಲಿ ಪರಿಚಯವಾದವನಿಂದ ಅತ್ಯಾಚಾರ; ಗಂಡು ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ!
ಸಾಂದರ್ಭಿಕ ಚಿತ್ರImage Credit source: TV9
ಸುಷ್ಮಾ ಚಕ್ರೆ
|

Updated on: Oct 17, 2026 | 8:24 PM

Share

ಗುರುಗ್ರಾಮ, ಅಕ್ಟೋಬರ್ 17: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ 22 ವರ್ಷದ ಯುವಕನಿಂದ ಅತ್ಯಾಚಾರಕ್ಕೊಳಗಾಗಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಗುರುಗ್ರಾಮದ ಸೋಹ್ನಾದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಕೆಯನ್ನು ಸೋಹ್ನಾದ ಉಪ-ವಿಭಾಗೀಯ ಆಸ್ಪತ್ರೆಗೆ ಕರೆದೊಯ್ದಾಗ ಈ ವಿಷಯ ಬಯಲಾಗಿದೆ.

ಆಸ್ಪತ್ರೆಯಲ್ಲಿ ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು, ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ ಎಂದು ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ. ಇದನ್ನು ಕೇಳಿ ಆಕೆಯ ಪೋಷಕರಿಗೂ ಆಶ್ಚರ್ಯವಾಗಿದೆ. ಆ ಬಾಲಕಿಗಾಗಲಿ, ಮನೆಯವರಿಗಾಗಲಿ ಆಕೆ ಗರ್ಭಿಣಿಯಾಗಿದ್ದಾಳೆ ಎಂಬ ವಿಷಯವೇ ಗೊತ್ತಿರಲಿಲ್ಲ. ಆಕೆಯ ದೇಹದಲ್ಲೂ ತೀರಾ ಅಸಹಜ ಬದಲಾವಣೆಗಳೇನೂ ಗೋಚರಿಸಿರಲಿಲ್ಲ. ಹೀಗಾಗಿ, ಈ ವಿಷಯ ಯಾರಿಗೂ ಗೊತ್ತಾಗಲಿಲ್ಲ.

ಇದನ್ನೂ ಓದಿ: ಗುರುಗ್ರಾಮದಲ್ಲಿ ಮಹಿಳೆಯ ಬರ್ಬರ ಕೊಲೆ; ಕೈ ಕಟ್ಟಿ, ಬಾಯಿಗೆ ಟೇಪ್ ಅಂಟಿಸಿದ ಸ್ಥಿತಿಯಲ್ಲಿ ಬಾತ್‌ರೂಮ್‌ನಲ್ಲಿ ಶವ ಪತ್ತೆ

ಕೌನ್ಸೆಲಿಂಗ್ ವೇಳೆ ಬಯಲಾದ ಸತ್ಯ:

ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ, ತನಿಖಾ ತಂಡವು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿ, ಆಕೆಯ ಪೋಷಕರು ಮತ್ತು ವೈದ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಕೌನ್ಸೆಲಿಂಗ್ ವೇಳೆ ಮಾತನಾಡಿದ ಬಾಲಕಿ, ತನಗೆ ಒಂದೂವರೆ ವರ್ಷದ ಹಿಂದೆ ಇನ್‌ಸ್ಟಾಗ್ರಾಮ್‌ನಲ್ಲಿ ಯುವಕನೊಬ್ಬ ಪರಿಚಯವಾಗಿದ್ದ ಎಂದು ತಿಳಿಸಿದ್ದಾಳೆ. ಆತ ವಿವಿಧ ಸ್ಥಳಗಳಲ್ಲಿ ಭೇಟಿಯಾಗಲು ಹೇಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಭಯದಿಂದ ಹಾಗೂ ಇದರ ಪರಿಣಾಮಗಳ ಬಗ್ಗೆ ಅರಿಯದೆ ತಾನು ಈ ವಿಷಯವನ್ನು ಎಂದಿಗೂ ಪೋಷಕರಿಗೆ ತಿಳಿಸಿರಲಿಲ್ಲ ಎಂದು ಹೇಳಿದ್ದಾಳೆ.

ಇದನ್ನೂ ಓದಿ: ಮೈಸೂರಿನಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಕಾಮುಕ ಕಾರ್ತಿಕ್‌ಗೆ ಗಲ್ಲು ಶಿಕ್ಷೆ!

ಆ ಆರೋಪಿಯು ಬಾಲಕಿಯೊಂದಿಗೆ ಸಂಪರ್ಕ ಕಡಿದುಕೊಂಡ ಹಿನ್ನೆಲೆಯಲ್ಲಿ, ಬಾಲಕಿ ಆಗಸ್ಟ್ 1ರಂದು ಮನೆ ಬಿಟ್ಟು ತೆರಳಿದ್ದಳು. ಪೋಷಕರು ವಿವಿಧೆಡೆ ಹುಡುಕಾಡಿದರೂ ಆಕೆ ಪತ್ತೆಯಾಗಿರಲಿಲ್ಲ. ಊರಿನವರಿಗೆ, ಸಂಬಂಧಿಕರಿಗೆ ಗೊತ್ತಾದರೆ ಮರ್ಯಾದೆ ಹೋಗುತ್ತದೆ ಎಂದು ಪೊಲೀಸರಿಗೂ ದೂರು ನೀಡಿರಲಿಲ್ಲ. ಬಳಿಕ ಆಕೆಯೇ ವಾಪಾಸ್ ಬಂದಿದ್ದಳು.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು:

ಬಾಲಕಿಯ ಹೇಳಿಕೆಯ ಆಧಾರದ ಮೇಲೆ, ಗುರುವಾರ ಸಿಟಿ ಸೋಹ್ನಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯಕ್ಕೆ ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More