
ಅಲ್ವಾರ್, ಏಪ್ರಿಲ್ 25: ರಾಜಸ್ಥಾನದ (Rajasthan) ಅಲ್ವಾರ್‌ನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ 11ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಹುಲ್ ಸೈನಿ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಿಡ್ನಾಪ್ ಮಾಡಿ ಈ ಕೃತ್ಯ ಎಸಗಲಾಗಿದೆ.
ಶುಕ್ರವಾರ ರಾತ್ರಿ ಪೊಲೀಸರು ಆರೋಪಿಗಳಲ್ಲಿ ಒಬ್ಬನಾದ 23 ವರ್ಷದ ರಾಹುಲ್ ಸೈನಿಯನ್ನು ಬಂಧಿಸಿದ್ದಾರೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಈ ಘಟನೆಯು ಬಿಜೆಪಿ ಸರ್ಕಾರದ ಕಾನೂನು ಮತ್ತು ಸುವ್ಯವಸ್ಥೆ ಯಂತ್ರದ ವಿಶ್ವಾಸಾರ್ಹತೆಯನ್ನು ಸಂಪೂರ್ಣವಾಗಿ ನಾಶಪಡಿಸಿದೆ ಎಂದು ಹೇಳಿದ್ದಾರೆ. ಪರಾರಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ. ಅತ್ಯಾಚಾರ ನಡೆಸಿದ ಆರೋಪಿಯ ಮೊಬೈಲ್ ಫೋನ್‌ನಿಂದ ಹಲವಾರು ಹುಡುಗಿಯರ ಅಶ್ಲೀಲ ವೀಡಿಯೊಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಗುರುಕುಲದಲ್ಲಿ 11 ವರ್ಷದ ವಿದ್ಯಾರ್ಥಿಯ ಬರ್ಬರ ಹತ್ಯೆ; ಮೈಮೇಲಿತ್ತು 42 ಗಾಯ
ಈ ಪ್ರಕರಣದ ಇತರ ಇಬ್ಬರು ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಮಾಡಲು ಪೊಲೀಸ್ ತಂಡಗಳು ಪ್ರಯತ್ನಿಸುತ್ತಿವೆ. ಮೂವರೂ ದೌಸಾ ಜಿಲ್ಲೆಯ ಬಸ್ವಾ ಪ್ರದೇಶದ ನಿವಾಸಿಗಳು ಎಂದು ಹೇಳಲಾಗುತ್ತದೆ. ಗುರುವಾರ ಬೆಳಿಗ್ಗೆ ಬಾಲಕಿ ಎಂದಿನಂತೆ ಬೆಳಿಗ್ಗೆ 8 ಗಂಟೆ ಸುಮಾರಿಗೆ ಮನೆಯಿಂದ ನಡೆದುಕೊಂಡು ಶಾಲೆಗೆ ಹೊರಟಳು. ಆಗ ಬೊಲೆರೊ ವಾಹನದಲ್ಲಿ ಬಂದ ಇಬ್ಬರು ಯುವಕರು ಆಕೆಯನ್ನು ಬಲವಂತವಾಗಿ ವಾಹನದೊಳಗೆ ಎಳೆದೊಯ್ದರು. ಆರೋಪಿಗಳು ಆಕೆಯ ಕೈಗಳನ್ನು ಕಟ್ಟಿ ಕಣ್ಣುಗಳಿಗೆ ಬಟ್ಟೆ ಕಟ್ಟಿದರು. ದಾರಿಯಲ್ಲಿ ಅವರು ಮತ್ತೊಬ್ಬ ಯುವಕನನ್ನು ಬೊಲೆರೊದಲ್ಲಿ ಕೂರಿಸಿಕೊಂಡರು. ನಂತರ ಮೂವರು ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು.
ಅಲ್ಲಿ ಮೂವರು ಆರೋಪಿಗಳು ಆಕೆಯನ್ನು ರೂಂಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆಕೆಯ ಫೋಟೋಗಳು ಮತ್ತು ವಿಡಿಯೋಗಳನ್ನು ಸಹ ತೆಗೆದಿದ್ದಾರೆ. ಈ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಆಕೆಯ ಸಹೋದರನನ್ನು ಕೊಲ್ಲುವುದಾಗಿ ಬೆದರಿಕೆಯನ್ನೂ ಹಾಕಿದ್ದಾರೆ. ಅತ್ಯಾಚಾರ ನಡೆಸಿದ ನಂತರ, ಆರೋಪಿಗಳು ಆಕೆಯನ್ನು ಮತ್ತೆ ಕಾರಿನಲ್ಲಿ ಕೂರಿಸಿಕೊಂಡು, ಕಣ್ಣಿಗೆ ಬಟ್ಟೆ ಕಟ್ಟಿ, ಅಪಹರಿಸಿದ ಸ್ಥಳದ ಬಳಿಯೇ ಬಿಟ್ಟು ಹೋಗಿದ್ದಾರೆ.
ಇದನ್ನೂ ಓದಿ: 41 ನಿಮಿಷದಲ್ಲಿ ಅತ್ಯಾಚಾರ, ಕೊಲೆ, ದರೋಡೆ; ಐಆರ್ಎಸ್ ಅಧಿಕಾರಿ ಮನೆಯಲ್ಲಿ ನಡೆದಿದ್ದೇನು? ಆರೋಪಿ ಸಿಕ್ಕಿದ್ದು ಹೇಗೆ?
ಆ ಬಾಲಕಿಯನ್ನು ಬಲವಂತವಾಗಿ ವಾಹನದೊಳಗೆ ಹತ್ತಿಸಿಕೊಂಡಿದ್ದನ್ನು ನೋಡಿದ್ದ ಇತರೆ ವಿದ್ಯಾರ್ಥಿಗಳು ಊರಿನವರಿಗೆ ಈ ವಿಷಯ ತಿಳಿಸಿದ್ದರು. ಹೀಗಾಗಿ, ಆ ಜಾಗದಲ್ಲಿ ಸಾಕಷ್ಟು ಜನ ಸೇರಿ ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದರು. ಅಷ್ಟರಲ್ಲಿ ಆರೋಪಿಗಳು ಆ ಬಾಲಕಿಯನ್ನು ವಾಪಾಸ್ ಅದೇ ಸ್ಥಳಕ್ಕೆ ಬಿಡಲು ಹಿಂತಿರುಗಿದಾಗ ಅಲ್ಲಿ ಸಾಕಷ್ಟು ಜನ ಸೇರಿದ್ದನ್ನು ಕಂಡು ತಮ್ಮ ವಾಹನವನ್ನು ಅಲ್ಲೇ ಬಿಟ್ಟು ಅಲ್ಲಿಂದ ಪರಾರಿಯಾದರು. ಕೋಪಗೊಂಡ ಗ್ರಾಮಸ್ಥರು ಅವರ ವಾಹನಕ್ಕೆ ಬೆಂಕಿ ಹಚ್ಚಿದರು. ಮಾಹಿತಿ ಪಡೆದ ರೈನಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಟ್ಟುಹೋದ ವಾಹನವನ್ನು ವಶಪಡಿಸಿಕೊಂಡು ಪೊಲೀಸ್ ಠಾಣೆಗೆ ತಂದರು. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರೆದಿದೆ. ಬಂಧಿತ ರಾಹುಲ್ನ ಮೊಬೈಲ್ ಫೋನ್‌ನಿಂದ ಇತರ ಹುಡುಗಿಯರ ಹಲವಾರು ಅಶ್ಲೀಲ ವೀಡಿಯೊಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ