ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ 150 ಸೇನಾ ಸಿಬ್ಬಂದಿಗೆ ಕೊರೊನಾ ಸೋಂಕು
ಗಣರಾಜ್ಯೋತ್ಸವ ಮತ್ತು ಜನವರಿ 15ರಂದು ಆಚರಿಸಲಾಗುವ ಸೇನಾ ದಿವಸ್ದಂದು ಪಥಸಂಚಲನದಲ್ಲಿ ಭಾಗವಹಿಸಲು ದೇಶದ ವಿವಿಧೆಡೆಯಿಂದ ರಾಷ್ಟ್ರ ರಾಜಧಾನಿಗೆ ಆಗಮಿಸಿದ 150 ಸೇನಾ ಸಿಬ್ಬಂದಿಯಲ್ಲಿ ಲಕ್ಷಣ ರಹಿತ ಕೊರೊನಾ ಸೋಂಕು ಪತ್ತೆಯಾಗಿದೆ.
ದೆಹಲಿ: ಗಣರಾಜ್ಯೋತ್ಸವ ಮತ್ತು ಜನವರಿ 15ರಂದು ಆಚರಿಸಲಾಗುವ ಸೇನಾ ದಿವಸ್ದಂದು ಪಥಸಂಚಲನದಲ್ಲಿ ಭಾಗವಹಿಸಲು ದೇಶದ ವಿವಿಧೆಡೆಯಿಂದ ರಾಷ್ಟ್ರ ರಾಜಧಾನಿಗೆ ಆಗಮಿಸಿದ 150 ಸೇನಾ ಸಿಬ್ಬಂದಿಯಲ್ಲಿ ಲಕ್ಷಣ ರಹಿತ ಕೊರೊನಾ ಸೋಂಕು ಪತ್ತೆಯಾಗಿದೆ. ಹಾಗಾಗಿ, ಎಲ್ಲಾ 150 ಸಿಬ್ಬಂದಿ ಸೋಂಕಿಗೆ ಚಿಕಿತ್ಸೆ ಪಡೆದು ಕೊರೊನಾ ನೆಗೆಟಿವ್ ಎಂದು ವರದಿ ಬಂದ ನಂತರ ಡಿಸ್ಚಾರ್ಜ್ ಮಾಡಲಾಗುವುದು ಎಂಬ ಮಾಹಿತಿ ಸಿಕ್ಕಿದೆ.
ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸೇನಾ ಸಿಬ್ಬಂದಿಗೆ ಕೊವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ದೆಹಲಿಗೆ ಆಗಮಿಸಿದ್ದ 2,000 ಸೇನಾ ಸಿಬ್ಬಂದಿಗೆ ಈಗಾಗಲೇ ಕೊರೊನಾ ಪರೀಕ್ಷೆ ನಡೆಸಿ ಪ್ರತ್ಯೇಕವಾಗಿ ಸೇಫ್ ಬಬಲ್ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಪ್ರತಿ ಸಿಬ್ಬಂದಿಗೂ ಕೊರೊನಾ ಪರೀಕ್ಷೆ ನಡೆಸಿ, ನೆಗೆಟಿವ್ ಬಂದವರಿಗೆ ಮಾತ್ರ ಪ್ರತ್ಯೇಕ ಸುರಕ್ಷತಾ ವಾಸ ಕಲ್ಪಿಸಲಾಗಿದೆ. ಕಂಟೇನ್ಮೆಂಟ್ ವಲಯದಲ್ಲಿರುವವರಿಗೆ ಜನವರಿ 26ರವರೆಗೂ ಪ್ರತ್ಯೇಕ ವಾಸ ನೀಡಲಾಗಿದೆ.
ಗಣರಾಜ್ಯೋತ್ಸವ ದಿನಾಚರಣೆಯಂದೇ ಅಯೋಧ್ಯಾ ಮಸೀದಿಗೆ ಶಂಕು ಸ್ಥಾಪನೆ; ಇದು ಬಾಬ್ರಿ ಮಸೀದಿಗಿಂತಲೂ ವಿಶಾಲ, ವಿಭಿನ್ನ