AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ನಲ್ಲಿ ₹150 ಕೋಟಿ ಹಗರಣ: ಬೆಳೆ ತ್ಯಾಜ್ಯಗಳನ್ನು ನಿರ್ವಹಿಸಲು ಬಳಸುವ ಯಂತ್ರ ನಾಪತ್ತೆ?

ಕೇಂದ್ರ ಸರ್ಕಾರ ಸಬ್ಸಿಡಿ ನೀಡಿದ ಯಂತ್ರಗಳು ರೈತರಿಗೆ ತಲುಪಿಲ್ಲ ಎಂಬ ವರದಿ ಬಂದ ನಂತರ ಕ್ಷೇತ್ರ ಸಮೀಕ್ಷೆಗೆ ಆದೇಶಿಸಿದ್ದೇನೆ ಎಂದು ಕೃಷಿ ಸಚಿವ ಕುಲದೀಪ್ ಸಿಂಗ್ ಧಲಿವಾಲ್ ಹೇಳಿದ್ದಾರೆ.

ಪಂಜಾಬ್​​ನಲ್ಲಿ ₹150 ಕೋಟಿ ಹಗರಣ: ಬೆಳೆ ತ್ಯಾಜ್ಯಗಳನ್ನು ನಿರ್ವಹಿಸಲು ಬಳಸುವ ಯಂತ್ರ ನಾಪತ್ತೆ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 18, 2022 | 8:09 PM

Share

ಚಂಡೀಗಢ: ಪಂಜಾಬ್‌ನ (Punjab) ಆಮ್ ಆದ್ಮಿ ಪಕ್ಷದ (Aam Aadmi Party) ಸರ್ಕಾರ ರಾಜ್ಯದಲ್ಲಿ ಬೆಳೆ ತ್ಯಾಜ್ಯಗಳನ್ನು ನಿರ್ವಹಿಸುವ 11,000 ಕ್ಕೂ ಹೆಚ್ಚು ಯಂತ್ರಗಳು “ಕಾಗದದಲ್ಲಿ ಮಾತ್ರ ಅಸ್ತಿತ್ವದಲ್ಲಿದೆ”. ಇದರರ್ಥ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ನೇತೃತ್ವದಲ್ಲಿದ್ದ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ₹ 150 ಕೋಟಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಲಾಗಿದೆ ಎಂದು ಹೇಳಿದ್ದು ತನಿಖೆಗೆ ಆದೇಶಿಸಿದೆ. ಕೇಂದ್ರ ಸರ್ಕಾರ ಸಬ್ಸಿಡಿ ನೀಡಿದ ಯಂತ್ರಗಳು ರೈತರಿಗೆ ತಲುಪಿಲ್ಲ ಎಂಬ ವರದಿ ಬಂದ ನಂತರ ಕ್ಷೇತ್ರ ಸಮೀಕ್ಷೆಗೆ ಆದೇಶಿಸಿದ್ದೇನೆ ಎಂದು ಕೃಷಿ ಸಚಿವ ಕುಲದೀಪ್ ಸಿಂಗ್ ಧಲಿವಾಲ್ ಹೇಳಿದ್ದಾರೆ. 2018 ರಿಂದ ಈ ತಿಂಗಳವರೆಗಿನ ಅವಧಿಯಲ್ಲಿನ ಪರಿಶೀಲನೆಯಲ್ಲಿ ಸರ್ಕಾರವು ಖರೀದಿಸಿದೆ ಮತ್ತು ವಿತರಿಸಿದೆ ಎಂದು ಹೇಳಿಕೊಂಡ 90,422 ಯಂತ್ರಗಳಲ್ಲಿ – ಕನಿಷ್ಠ 11,275 (ಶೇ 13 ) ಫಲಾನುಭವಿಗಳ ಬಳಿ ಇಲ್ಲ. ಮಾರ್ಚ್‌ನಲ್ಲಿ ಎಎಪಿ ಸರ್ಕಾರ ಇಲ್ಲಿ ಅಧಿಕಾರಕ್ಕೇರಿತ್ತು. ಕೃಷಿ ಖಾತೆಯನ್ನು ಹೊಂದಿದ್ದ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಅವರ ಅಂದಿನ ಕಾಂಗ್ರೆಸ್ ಪಕ್ಷ ಈ ಹಗರಣಕ್ಕೆ ಕಾರಣ ಎಂದು ಸಚಿವ ಧಲಿವಾಲ್ ಆರೋಪಿಸಿದ್ದಾರೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ ನ ವಕ್ತಾರ ಪ್ರೀತ್ಪಾಲ್ ಸಿಂಗ್ ಬಲಿಯಾವಾಲ್ ಈ ಆರೋಪಕ್ಕೆ ಪ್ರತಿಕ್ರಿಯಿಸಿದ್ದು ಯಂತ್ರ ವಿತರಣಾ ಪಟ್ಟಿಗಳನ್ನು ಸಿದ್ಧಪಡಿಸುವುದು ಮುಖ್ಯಮಂತ್ರಿಯಾಗಿ ಕ್ಯಾಪ್ಟನ್ ಸಾಬ್ ಅವರ ಕೆಲಸವಾಗಿರಲಿಲ್ಲ. ಅವರು ಕ್ಷೇತ್ರಾಧಿಕಾರಿಯಾಗಿರಲಿಲ್ಲ. ತಾತ್ವಿಕವಾಗಿ, ಭ್ರಷ್ಟಾಚಾರದ ವಿರುದ್ಧ ಯಾವುದೇ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ ಇದು ತನ್ನ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಎಎಪಿಯ ತಂತ್ರವಾಗಿದೆ ಎಂದಿದ್ದಾರೆ.

ವಿಜಿಲೆನ್ಸ್ ಇಲಾಖೆಯಿಂದ ತನಿಖೆಗೆ ಕಡತವನ್ನು ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಕಳುಹಿಸಿದ್ದೇನೆ ಎಂದು ಸಚಿವ ಧಲಿವಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಪಂಜಾಬ್ ಮತ್ತು ಹರ್ಯಾಣದಲ್ಲಿ ಬೆಳೆ ತಾಜ್ಯಗಳನ್ನು ನಿರ್ದಿಷ್ಟವಾಗಿ ಬೈಹುಲ್ಲು ಸುಡುವುದು ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ. ಇಲ್ಲಿ ಕೃಷಿ ತ್ಯಾಜ್ಯಗಳ ಸುಡುವಿಕೆಯು ದೆಹಲಿಯಲ್ಲಿನ ಮಾಲಿನ್ಯಕ್ಕೆ ಕಾರಣವಾಗಿದೆ. ಈ ಯಂತ್ರಗಳು ಪೈರು ಕೊಯ್ದ ಮೇಲೆ ಉಳಿದ ಬೆಳೆ ತ್ಯಾಜ್ಯಗಳು ನುಣುಪಾಗಿ ಬೋಳಿಸಲು ಸಹಾಯ ಮಾಡುತ್ತವೆ. ಹಾಗಾಗಿ ಸುಡುವ ಪ್ರಮೇಯವೇ ಬರುವುದಿಲ್ಲ.

ಯಂತ್ರಗಳಿಗೆ ಒಟ್ಟು ₹ 1,200 ಕೋಟಿ ಸಬ್ಸಿಡಿ ನೀಡಲಾಗಿದ್ದು, ಹೀಗಾಗಿ ₹ 150 ಕೋಟಿ ಹಗರಣ ನಡೆದಿರಬಹುದೆಂದು ಅಂದಾಜಿಸಿದ್ದೇವೆ ಎಂದು ಸಚಿವರು ತಿಳಿಸಿದರು. ಇಂತಹ ಹಗರಣಗಳಿಂದ ಮುಂದೆ ಕೇಂದ್ರದ ಅನುದಾನ ಪಡೆಯುವುದು ಕಷ್ಟವಾಗುತ್ತದೆ. ಇದು ಜನರ ಹಣ, ಇದರಲ್ಲಿ ಯಾರೇ ಭಾಗಿಯಾಗದ್ದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ. 2021 ರ ಅಂತ್ಯದ ವೇಳೆಗೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಪದಚ್ಯುತಗೊಳಿಸಿದ ಕಾಂಗ್ರೆಸ್‌ನಿಂದ ಇನ್ನೂ ಯಾವುದೇ ಹೇಳಿಕೆ ಬಂದಿಲ್ಲ.

Published On - 7:35 pm, Thu, 18 August 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್