Coronavirus cases in India: 24ಗಂಟೆಯಲ್ಲಿ 16,326 ಹೊಸ ಕೊರೊನಾ ಪ್ರಕರಣಗಳು ಪತ್ತೆ; 666 ಮಂದಿ ಸಾವು

ದೇಶದಲ್ಲಿ ಮೊನ್ನೆಗೆ 100 ಕೋಟಿ ಡೋಸ್​ ಕೊರೊನಾ ಲಸಿಕೆ ನೀಡಿ ಮುಗಿದಿದೆ. ಹಾಗೇ ಕಳೆದ 24ಗಂಟೆಯಲ್ಲಿ 68,48,417 ಡೋಸ್​ ಕೊವಿಡ್​ 19 ಲಸಿಕೆ ನೀಡಲಾಗಿದೆ. ಇಲ್ಲಿಯವರೆಗೆ ಒಟ್ಟು 101.3 ಕೋಟಿ ಡೋಸ್​ ಕೊವಿಡ್​ 19 ಲಸಿಕೆ ನೀಡಿಕೆಯಾಗಿದೆ.

Coronavirus cases in India: 24ಗಂಟೆಯಲ್ಲಿ 16,326 ಹೊಸ ಕೊರೊನಾ ಪ್ರಕರಣಗಳು ಪತ್ತೆ; 666 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Oct 23, 2021 | 11:52 AM

ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 16,326 ಕೊವಿಡ್​ 19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 666 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಕೊರೊನಾ ಸೋಂಕಿತ (Coronavirus)ರ ಸಂಖ್ಯೆ 3,41,59,562ಕ್ಕೆ ಏರಿಕೆಯಾಗಿದೆ. ಮೃತರ ಸಂಖ್ಯೆ 4,53,708 ಕ್ಕೆ ತಲುಪಿದೆ. ದೇಶದಲ್ಲಿ ಸದ್ಯ ಕೊರೊನಾ ಸಕ್ರಿಯ ಪ್ರಕರಣಗಳು 1,73,728ರಷ್ಟಿವೆ.  ದೇಶದ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆಯ 0.51ರಷ್ಟು ಮಾತ್ರ ಸಕ್ರಿಯ ಪ್ರಕರಣಗಳು ಇದ್ದು, ಇದು 2020ರ ಮಾರ್ಚ್​ ನಂತರ ಇಲ್ಲಿಯವರೆಗಿನ ಅತ್ಯಂತ ಕಡಿಮೆ ಅನುಪಾತವಾಗಿದೆ.  ಕೊರೊನಾ ಸೋಂಕಿನ ದಿನದ ಪಾಸಿಟಿವಿಟಿ ದರ 1.20ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.1.24 ಇದೆ. ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ  3,35,32,126 ರಷ್ಟಿದ್ದು, ಸಾವಿನ ದರ ಶೇ.133ಕ್ಕೆ ನಿಂತಿದೆ. ಇನ್ನು ಸತತವಾಗಿ ಕಳೆದ 29ದಿನಗಳಿಂದಲೂ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆ 30 ಸಾವಿರದ ಗಡಿ ದಾಟಿಲ್ಲ. 118ದಿನಗಳಿಂದ 50 ಸಾವಿರದ ಗಡಿ ದಾಟಿಲ್ಲ.  ಆದರೂ ನಿನ್ನೆಗಿಂತ ಇಂದು ಸ್ವಲ್ಪ ಜಾಸ್ತಿ ಪ್ರಕರಣಗಳು ಪತ್ತೆಯಾಗಿವೆ.

ಕೊರೊನಾ ಲಸಿಕೆ ಅಭಿಯಾನ ದೇಶದಲ್ಲಿ ಮೊನ್ನೆಗೆ 100 ಕೋಟಿ ಡೋಸ್​ ಕೊರೊನಾ ಲಸಿಕೆ ನೀಡಿ ಮುಗಿದಿದೆ. ಹಾಗೇ ಕಳೆದ 24ಗಂಟೆಯಲ್ಲಿ 68,48,417 ಡೋಸ್​ ಕೊವಿಡ್​ 19 ಲಸಿಕೆ ನೀಡಲಾಗಿದೆ. ಇಲ್ಲಿಯವರೆಗೆ ಒಟ್ಟು 101.3 ಕೋಟಿ ಡೋಸ್​ ಕೊವಿಡ್​ 19 ಲಸಿಕೆ ನೀಡಿಕೆಯಾಗಿದೆ. ಇಷ್ಟು ಡೋಸ್​ ನೀಡಲು 1,00,29,602 ಸೆಷನ್ಸ್​​ಗಳು ಬೇಕಾಗಿವೆ. ದೇಶದಲ್ಲಿ ಸದ್ಯ ಶೇ.31ರಷ್ಟು ಜನರಿಗೆ ಎರಡೂ ಡೋಸ್​ ಕೊವಿಡ್​ 19 ಲಸಿಕೆ ನೀಡಲಾಗಿದೆ.

ಇದನ್ನೂ ಓದಿ: Ananya Panday: ‘ಇದು ಫಿಲ್ಮ್​ ಪ್ರೊಡಕ್ಷನ್​ ಹೌಸ್​ ಅಲ್ಲ’: ವಿಚಾರಣೆಗೆ ತಡವಾಗಿ ಬಂದ ಅನನ್ಯಾಗೆ ಸಮೀರ್​ ವಾಂಖೆಡೆ ಕ್ಲಾಸ್

Babar Azam: ಹಿಂದಿನ ದಾಖಲೆ ಲೆಕ್ಕಕ್ಕೆ ಬರಲ್ಲ: ಭಾರತ ವಿರುದ್ಧ ಗೆದ್ದೇ ಗೆಲ್ಲುತ್ತೇವೆ ಎಂದ ಪಾಕಿಸ್ತಾನ ನಾಯಕ ಬಾಬರ್

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ