AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಹುಡುಗರಿಂದ ದೆಹಲಿಯಲ್ಲಿ 17 ವರ್ಷದ ಬಾಲಕನ ಕಗ್ಗೊಲೆ

ದೆಹಲಿಯ ಬವಾನಾದಲ್ಲಿ 17 ವರ್ಷದ ಬಾಲಕನನ್ನು ಇರಿದು ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಬಾಲಾಪರಾಧಿಗಳು ಸೇರಿದಂತೆ 7 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ 16 ರಿಂದ 17 ವರ್ಷದೊಳಗಿನ ನಾಲ್ವರು ಅಪ್ರಾಪ್ತ ವಯಸ್ಕರು ಕೂಡ ಸೇರಿದ್ದಾರೆ. ಬಾಲಾಪರಾಧಿಗಳಲ್ಲಿ ಒಬ್ಬ ಈ ಹಿಂದೆ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ. ನಿನ್ನೆ ರಾತ್ರಿ ಈ ಭೀಕರ ಕೊಲೆ ನಡೆದಿದೆ.

ಅಪ್ರಾಪ್ತ ಹುಡುಗರಿಂದ ದೆಹಲಿಯಲ್ಲಿ 17 ವರ್ಷದ ಬಾಲಕನ ಕಗ್ಗೊಲೆ
Murder
ಸುಷ್ಮಾ ಚಕ್ರೆ
|

Updated on: Feb 12, 2026 | 9:45 PM

Share

ನವದೆಹಲಿ, ಫೆಬ್ರವರಿ 12: ಉತ್ತರ ದೆಹಲಿಯ ಬವಾನಾ ಪ್ರದೇಶದಲ್ಲಿ 17 ವರ್ಷದ ಬಾಲಕನನ್ನು ಇರಿದು ಕೊಲೆ (Death) ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಬಾಲಾಪರಾಧಿಗಳು ಸೇರಿದಂತೆ 7 ಜನರನ್ನು ಬಂಧಿಸಲಾಗಿದೆ. ಬುಧವಾರ ರಾತ್ರಿ 9.36ರ ಸುಮಾರಿಗೆ ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೆಜೆ ಕಾಲೋನಿಯ ನಿವಾಸಿ ಸಲೀಂ ಎಂಬ ಬಾಲಕನಿಗೆ ಚಾಕುವಿನಿಂದ ಇರಿದು ಕೊಲ್ಲಲಾಗಿದೆ. ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದರು. ವೈದ್ಯಕೀಯ ಪರೀಕ್ಷೆಯಲ್ಲಿ ಆತನ ಎದೆ ಮತ್ತು ದೇಹದ ಇತರ ಭಾಗಗಳಲ್ಲಿ ಅನೇಕ ಇರಿತದ ಗಾಯಗಳು ಕಂಡುಬಂದಿವೆ.

ದೂರುದಾರರ ಪ್ರಕಾರ ಆರೋಪಿಗಳು ರಾತ್ರಿ 8.30ರ ಸುಮಾರಿಗೆ ಸಲೀಂನನ್ನು ತಡೆದು ಹಳೆಯ ಗಲಾಟೆಯ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ್ದಾರೆ. ಅವರಲ್ಲಿ ಕೆಲವರು ಆತನಿಗೆ ಮುಷ್ಟಿಯಿಂದ ಹೊಡೆದು, ಕಾಲಿನಲ್ಲಿ ಒದ್ದು ಹಿಂಸೆ ನೀಡಿದ್ದಾರೆ, ಇತರರು ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿದ್ದ ಪೊಲೀಸ್ ಕಾರು ಆಟೋಗೆ ಡಿಕ್ಕಿ ಹೊಡೆದು 25 ವರ್ಷದ ಯುವತಿ ಸಾವು

ನರೇಲಾ ಕೈಗಾರಿಕಾ ಪ್ರದೇಶ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆ ಬಾಲಕ ಮತ್ತು ಆರೋಪಿಗಳ ನಡುವೆ ಹಳೆಯ ದ್ವೇಷವಿತ್ತು ಎಂದು ತಿಳಿದುಬಂದಿದೆ. ಬಂಧಿತರಲ್ಲಿ 16 ರಿಂದ 17 ವರ್ಷದೊಳಗಿನ ನಾಲ್ವರು ಅಪ್ರಾಪ್ತ ವಯಸ್ಕರು ಕೂಡ ಸೇರಿದ್ದಾರೆ. ಬಾಲಾಪರಾಧಿಗಳಲ್ಲಿ ಒಬ್ಬ ಈ ಹಿಂದೆ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?