ಜೈಪುರ: ಐಐಟಿ ಜೆಇಇ ಪರೀಕ್ಷಾ ಸಿದ್ದತೆಗಾಗಿ ರಾಜಸ್ಥಾನದ (Rajasthan) ಕೋಟಾದಲ್ಲಿ (Kota) ಕೋಚಿಂಗ್ ಪಡೆಯುತ್ತಿದ್ದ 17 ವರ್ಷದ ಹದಿಹರೆಯದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಯುವಕ ಮಹಾರಾಷ್ಟ್ರದ (Maharashtra) ನಿವಾಸಿ. ಕೋಟಾದಲ್ಲಿ ಈ ವಿದ್ಯಾರ್ಥಿಯನ್ನು ಭೇಟಿಯಾಗಲು ಅವರ ಪೋಷಕರು ಬಂದಿದ್ದರು. ಬೆಳಗಿನ ಉಪಾಹಾರ ಮುಗಿಸಿ ಪೋಷಕರು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಪ್ರಾಣ ಹೋಗಿದೆ ಎಂದು ಹೇಳಿದ್ದಾರೆ.
ದೇಶದ ಕೋಚಿಂಗ್ ಹಬ್ ಎಂದೇ ಹೆಸರಾಗಿರುವ ಕೋಟಾಕ್ಕೆ ಎರಡು ತಿಂಗಳ ಹಿಂದೆಯಷ್ಟೇ ಈ ಯುವಕ ಬಂದಿದ್ ಆತ್ಮಹತ್ಯೆಗೆ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಪರ್ಧಾತ್ಮಕ ರಾಷ್ಟ್ರೀಯ ಪರೀಕ್ಷೆಗಳನ್ನು ಭೇದಿಸಲು ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ತರಬೇತಿ ಕೇಂದ್ರವಾಗಿದೆ ಕೋಟಾ. ಇಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಹಲವಾರು ಪ್ರಕರಣಗಳು ಇವೆ.
ಇದನ್ನೂ ಓದಿ: Watch: ಅಮೆರಿಕದಲ್ಲಿ ರಾಹುಲ್ ಗಾಂಧಿ ಟ್ರಕ್ ಪ್ರಯಾಣ; ಅಲ್ಲಿನ ಟ್ರಕ್ ಚಾಲಕನೊಂದಿಗೆ ಮಾತುಕತೆ
ಕೋಚಿಂಗ್ ಸೆಂಟರ್‌ಗಳನ್ನು ನಿಯಂತ್ರಿಸಲು ರಾಜಸ್ಥಾನ ಸರ್ಕಾರ ಕಾನೂನನ್ನು ತರಲು ಯೋಜಿಸಿದೆ. ಕೋಟಾದ ಕೋಚಿಂಗ್ ಸೆಂಟರ್‌ಗಳಿಗೆ ದಾಖಲಾಗುವ ಮೊದಲು ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಸಿದ್ಧರಿದ್ದಾರೆಯೇ ಎಂದು ನೋಡಲು ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಸಾಮರ್ಥ್ಯ ಪರೀಕ್ಷೆಯನ್ನು ತೆಗೆದುಕೊಳ್ಳಲು ಬಯಸುತ್ತದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ