Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯಲ್ಲಿ 3 ತಿಂಗಳಲ್ಲಿ 179 ಶಿಶುಗಳ ಸಾವು

ಮಹಾರಾಷ್ಟ್ರದಲ್ಲಿರುವ ನಂದೂರ್ಬಾರ್ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ಜನರೇ ಹೆಚ್ಚಾಗಿದ್ದಾರೆ ಎಂಬುದು ಗಮನಾರ್ಹ ಸಂಗತಿ. ಈ ಮರಣಗಳಲ್ಲಿ ಶೇ. 70ರಷ್ಟು 28 ದಿನಗಳ ಒಳಗಿನ ಮಕ್ಕಳೇ ಸಾವನ್ನಪ್ಪಿದ್ದಾರೆ. ಈ ಪ್ರದೇಶವು ಮಹಾರಾಷ್ಟ್ರ ರಾಜ್ಯದಲ್ಲಿ ಅತಿ ಹೆಚ್ಚು ಅಪೌಷ್ಟಿಕತೆಯ ಪ್ರಮಾಣವನ್ನು ಹೊಂದಿದೆ.

ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯಲ್ಲಿ 3 ತಿಂಗಳಲ್ಲಿ 179 ಶಿಶುಗಳ ಸಾವು
ಸಾಂದರ್ಭಿಕ ಚಿತ್ರImage Credit source: pexels.com
Follow us
ಸುಷ್ಮಾ ಚಕ್ರೆ
|

Updated on: Sep 16, 2023 | 7:13 PM

ಮುಂಬೈ: ಕಳೆದ 3 ತಿಂಗಳಲ್ಲಿ ಮಹಾರಾಷ್ಟ್ರದ ನಂದೂರ್ಬಾರ್ ಸಿವಿಲ್ ಆಸ್ಪತ್ರೆಯಲ್ಲಿ 179 ಮಕ್ಕಳು ಸಾವನ್ನಪ್ಪಿದ್ದಾರೆ. ಜನನದ ವೇಳೆ ಕಡಿಮೆ ತೂಕ, ಜನನದ ವೇಳೆ ಉಸಿರುಗಟ್ಟುವಿಕೆ, ಸೆಪ್ಸಿಸ್ ಮತ್ತು ಉಸಿರಾಟದ ಕಾಯಿಲೆಗಳು ಸೇರಿದಂತೆ ಹಲವಾರು ಕಾರಣಗಳಿಂದ ನವಜಾತ ಶಿಶುಗಳ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿರುವ ನಂದೂರ್ಬಾರ್ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ಜನರೇ ಹೆಚ್ಚಾಗಿದ್ದಾರೆ ಎಂಬುದು ಗಮನಾರ್ಹ ಸಂಗತಿ.

ಈ ಮರಣಗಳಲ್ಲಿ ಶೇ. 70ರಷ್ಟು 28 ದಿನಗಳ ಒಳಗಿನ ಮಕ್ಕಳೇ ಸಾವನ್ನಪ್ಪಿದ್ದಾರೆ. ಈ ಪ್ರದೇಶವು ಮಹಾರಾಷ್ಟ್ರ ರಾಜ್ಯದಲ್ಲಿ ಅತಿ ಹೆಚ್ಚು ಅಪೌಷ್ಟಿಕತೆಯ ಪ್ರಮಾಣವನ್ನು ಹೊಂದಿದೆ. ಅಕಾಲಿಕ ಜನನಗಳು, ಕಡಿಮೆ ಜನನ ತೂಕ, ಹಾವು ಕಡಿತಗಳು, ಹೆರಿಗೆಯ ಸಮಯದಲ್ಲಿ ಸೆಪ್ಸಿಸ್, ನ್ಯುಮೋನಿಯಾ ಮತ್ತು ಅಪಘಾತಗಳಂತಹ ಅಸಂಖ್ಯಾತ ಕಾರಣಗಳಿಂದ ಶಿಶು ಮರಣವು ಹೆಚ್ಚುತ್ತಿದೆ.

ಇದನ್ನೂ ಓದಿ: ಮಕ್ಕಳಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಜ್ವರ; ಪೋಷಕರು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳಿವು

ಜುಲೈನಲ್ಲಿ ಆಸ್ಪತ್ರೆಯಲ್ಲಿ 75 ಮಕ್ಕಳ ಸಾವುಗಳು ದಾಖಲಾಗಿತ್ತು. ಇದು ಆಗಸ್ಟ್‌ನಲ್ಲಿ 86ಕ್ಕೆ ಏರಿದೆ. ಸೆಪ್ಟೆಂಬರ್‌ನಲ್ಲಿ ಇಲ್ಲಿಯವರೆಗೆ 18 ಸಾವುಗಳು ವರದಿಯಾಗಿವೆ. ಅಸಮರ್ಪಕ ಸೌಲಭ್ಯಗಳಿಂದ ಗರ್ಭಿಣಿಯರು ಮತ್ತು ನವಜಾತ ಶಿಶುಗಳ ಜೀವನಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯ ಶಾಸಕ ಅಂಶ ಪದ್ವಿ ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ