ಜಾರ್ಖಂಡ್‌ನಲ್ಲಿ ಸಿಲಿಂಡರ್ ತುಂಬಿದ ಟ್ರಕ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದು 18 ಜನ ಸಾವು

ಜಾರ್ಖಂಡ್ ರಾಜ್ಯದ ದಿಯೋಘರ್‌ನಲ್ಲಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಟ್ರಕ್​ಗೆ ಡಿಕ್ಕಿ ಹೊಡೆದು 18 ಜನರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ. ಈ ಅಪಘಾತಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ. ಭಕ್ತರ ಸಾವಿನ ಬಗ್ಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ದುಃಖ ವ್ಯಕ್ತಪಡಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಸಿಲಿಂಡರ್ ತುಂಬಿದ ಟ್ರಕ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದು 18 ಜನ ಸಾವು
Deoghar Accident

Updated on: Jul 29, 2025 | 12:10 PM

ದಿಯೋಘರ್, ಜುಲೈ 29: ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) 18 ಕನ್ವಾರಿಯಾಗಳು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ. ಇತರ ಅನೇಕ ಜನರು ಈ ಅಪಘಾತದಲ್ಲಿ ಗಾಯಗೊಂಡಿದ್ದಾರೆ. “ನನ್ನ ಲೋಕಸಭಾ ಕ್ಷೇತ್ರವಾದ ದಿಯೋಘರ್‌ನಲ್ಲಿ ಶ್ರಾವಣ ಮಾಸದ ಕನ್ವಾರಾ ಯಾತ್ರೆಯ ಸಮಯದಲ್ಲಿ ಬಸ್ ಮತ್ತು ಟ್ರಕ್ ಅಪಘಾತದಿಂದಾಗಿ 18 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. ಬಾಬಾ ಬೈದ್ಯನಾಥ್ ಮೃತರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ” ಎಂದು ನಿಶಿಕಾಂತ್ ದುಬೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆದರೆ, ಪೊಲೀಸ್ ಅಧಿಕಾರಿಯೊಬ್ಬರು ಈ ರಸ್ತೆ ಅಪಘಾತದಲ್ಲಿ ಐವರು ಕನ್ವಾರಿಯಾಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇನ್ನೂ ಅನೇಕರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವು-ನೋವುಗಳು ಹೆಚ್ಚಾಗಬಹುದು ಎಂದು ಅಧಿಕಾರಿ ಹೇಳಿದ್ದಾರೆ. ಈ ನಡುವೆ ಈ ಅಪಘಾತದಲ್ಲಿ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ ಎಂದು ಸಂಚಾರ ಉಪ ಎಸ್ಪಿ ಲಕ್ಷ್ಮಣ್ ಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಮೂವರು ದುರ್ಮರಣ

ಸೋಮವಾರ ಬೆಳಿಗ್ಗೆ 4.30ರ ಸುಮಾರಿಗೆ ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ ವಾಹನಕ್ಕೆ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ. ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ ಮತ್ತು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಗಿಸಲಾಗುತ್ತಿದೆ.


ಈ ಅಪಘಾತಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ. ಭಕ್ತರ ಸಾವಿನ ಬಗ್ಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಜಿಲ್ಲಾಡಳಿತವು ಗಾಯಾಳುಗಳಿಗೆ ವೈದ್ಯಕೀಯ ಸೌಲಭ್ಯಗಳ ಜೊತೆಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಒದಗಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುಣೆ-ಮುಂಬೈ ಎಕ್ಸ್​​ಪ್ರೆಸ್​ವೇನಲ್ಲಿ 16 ವಾಹನಗಳ ನಡುವೆ ಸರಣಿ ಅಪಘಾತ

“ಇಂದು ಬೆಳಿಗ್ಗೆ, ದಿಯೋಘರ್‌ನ ಮೋಹನಪುರ ಬ್ಲಾಕ್‌ನ ಜಮುನಿಯಾ ಚೌಕ್ ಬಳಿ ಬಸ್ ಅಪಘಾತದಲ್ಲಿ ಪ್ರಯಾಣಿಸುತ್ತಿದ್ದ ಭಕ್ತರು ಸಾವನ್ನಪ್ಪಿದ ಬಗ್ಗೆ ಅತ್ಯಂತ ದುಃಖಕರ ಸುದ್ದಿ ಬಂದಿದೆ. ಜಿಲ್ಲಾಡಳಿತವು ಗಾಯಾಳುಗಳಿಗೆ ವೈದ್ಯಕೀಯ ಸೌಲಭ್ಯಗಳ ಜೊತೆಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಒದಗಿಸುತ್ತಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಭಕ್ತರ ಆತ್ಮಕ್ಕೆ ಬಾಬಾ ಬೈದ್ಯನಾಥರು ಶಾಂತಿ ನೀಡಲಿ ಮತ್ತು ಈ ದುಃಖದ ಗಂಟೆಯನ್ನು ಭರಿಸುವ ಶಕ್ತಿಯನ್ನು ದುಃಖಿತ ಕುಟುಂಬಗಳಿಗೆ ನೀಡಲಿ.” ಎಂದು ಸಿಎಂ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ